ನಾಯಿಗಳ ಸಮೀಕ್ಷೆ ನಡೆಸಿರುವ ವರದಿ ಬಿಡುಗಡೆ ಮಾಡಿದ ಬಿಬಿಎಂಪಿ

Date:

  • ಪಾಲಿಕೆಯ 8 ವಲಯಗಳಲ್ಲಿ ಒಟ್ಟು 2,79,335 ಬೀದಿನಾಯಿಗಳಿವೆ
  • 2023ರ ಜುಲೈ 11 ರಿಂದ 2023ರ ಆಗಸ್ಟ್‌ 2ರವರೆಗೆ ನಡೆದ ಸಮೀಕ್ಷೆ

50 ತಂಡಗಳ ಸಹಯೋಗದೊಂದಿಗೆ ಒಟ್ಟು 12 ದಿನಗಳಲ್ಲಿ ಬೀದಿನಾಯಿಗಳ ಸಮೀಕ್ಷೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶುಪಾಲನಾ ವಿಭಾಗ ಪೂರ್ಣಗೊಳಿಸಿದೆ.

- Advertisement -

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಸಮೀಕ್ಷೆ ನಡೆಸಿರುವ ಸಂಬಂಧ ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರರವರು ವರದಿಯನ್ನು ಬಿಡುಗಡೆಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 8 ವಲಯಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿ ರೇಬೀಸ್ ಲಸಿಕಾ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಬಗ್ಗೆ ವಸ್ತುನಿಷ್ಠ ಮಾಹಿತಿಯನ್ನು ಪಡೆಯಲು, ಬೀದಿನಾಯಿಗಳ ಹಾವಳಿ ಹಾಗೂ ಅವುಗಳ ನಿಯಂತ್ರಣಕ್ಕೆ ಸೂಕ್ತ ಯೋಜನೆಗಳನ್ನು ರೂಪಿಸಲು ಎನ್‌ಎಪಿಆರ್‌ಇ (NAPRE) ಶಿಫಾರಸ್ಸು ಮಾಡಿರುವ ಸೈಟ್-ರಿಸೈಟ್‌ (Sight–Resight) ವಿಧಾನವನ್ನು ಅಳವಡಿಸಿಕೊಂಡು ಬೀದಿನಾಯಿಗಳ ಸಮೀಕ್ಷೆಯನ್ನು 2023ರ ಜುಲೈ 11 ರಿಂದ 2023ರ ಆಗಸ್ಟ್‌ 2ರವರೆಗೆ ನಡೆಸಲಾಗಿದೆ” ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

“ಬೀದಿ ನಾಯಿ ಸಮೀಕ್ಷೆಯನ್ನು ICAR-NIVEDI, WVS(Mission Rabies)ಯ ಪ್ರಿನ್ಸಿಪಾಲ್ ಸೈಂಟಿಸ್ಟ್(BIOSTATISTICS) ಡಾ. ಕೆ.ಪಿ.ಸುರೇಶ್ ಸಂಸ್ಥೆ, ಬಿಬಿಎಂಪಿ ಪಶುಪಾಲನಾ ವಿಭಾಗದ ಅಧಿಕಾರಿಗಳು-ಸಿಬ್ಬಂದಿ, ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಅರೆತಾಂತ್ರಿಕ ಸಿಬ್ಬಂದಿಯವರ (ಒಟ್ಟು 100 ಸಮೀಕ್ಷೆದಾರರು ಹಾಗೂ 15 ಮೇಲ್ವಿಚಾರಕರು) ಒಟ್ಟು 50 ತಂಡಗಳ ಸಹಯೋಗದೊಂದಿಗೆ ಒಟ್ಟು 12 ದಿನಗಳಲ್ಲಿ ಬೀದಿನಾಯಿಗಳ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದೆ.

“ಬಿಬಿಎಂಪಿಯ ನಾಲ್ಕು ವಿಭಾಗಗಳಾದ ವಸತಿ ಪ್ರದೇಶ, ಕೊಳಚೆ ಪ್ರದೇಶ, ವಾಣಿಜ್ಯ ಪ್ರದೇಶ ಹಾಗೂ ಕೆರೆಗಳನ್ನು 0.5 ಚ.ಕಿ.ಮೀ ವ್ಯಾಪ್ತಿಯ 6850 ಮೈಕ್ರೋಜೋನ್‌ಗಳನ್ನಾಗಿ ವಿಂಗಡಣೆ ಮಾಡಿದ್ದು, ಅದರಲ್ಲಿ ಶೇ.20ರಷ್ಟು ರ‍್ಯಾಂಡಂ ಸ್ಯಾಂಪಲ್‌ಗಳನ್ನು ಅಂದರೆ 1360 ಮೈಕ್ರೋಜೋನ್‌ಗಳನ್ನು ಸಮೀಕ್ಷೆ ಮಾಡಲು ಆಯ್ಕೆ ಮಾಡಲಾಗಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ ನಕಲು ಸಹಿ ಅಕ್ರಮ | 7 ಜನರ ವಿರುದ್ಧ ಎಫ್‌ಐಆರ್‌ ದಾಖಲು; ಓರ್ವನ ಬಂಧನ

“ಈ ಬಾರಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಪಾಲಿಕೆಯ 8 ವಲಯಗಳಲ್ಲಿ ಒಟ್ಟು 2,79,335 ಬೀದಿನಾಯಿಗಳು ಕಂಡುಬಂದಿವೆ. 2019ನೇ ಸಾಲಿನ ಬೀದಿನಾಯಿಗಳ ಸಮೀಕ್ಷೆಯಲ್ಲಿ 3.10 ಲಕ್ಷ ಬೀದಿನಾಯಿಗಳು ಇದ್ದವು. ಶೇಕಡ 51.16ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಯಾಗಿದೆ ಎಂದು ಅಂದಾಜಿಸಲಾಗಿತ್ತು. ಹಾಲಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಒಟ್ಟು ಶೇಕಡ 71.85ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಯಾಗಿದೆ. ಒಟ್ಟಾರೆಯಾಗಿ ಶೇಕಡ 20ರಷ್ಟು ಸಂತಾನಹರಣ ಶಸ್ತ್ರ ಚಿಕಿತ್ಸೆ ಪ್ರಮಾಣ ಹೆಚ್ಚಳವಾಗಿದೆ. ಬೀದಿನಾಯಿ ಮರಿಗಳ ಸಂಖ್ಯೆಯು ಕಡಿಮೆಯಾಗಿದೆ. ಪ್ರಸ್ತುತ ಸಾಲಿನ ಸಮೀಕ್ಷೆಯ ವರದಿಯಂತೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 10 ರಷ್ಟು ಬೀದಿನಾಯಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದರಿಂದ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಿರುವುದರಿಂದ ಬೀದಿನಾಯಿಗಳ ಸಂಖ್ಯೆಯು ಇಳಿಕೆಯಾಗಿದೆ. ನಗರದ ಪೂರ್ವವಲಯದಲ್ಲಿ 37685, ಪಶ್ಚಿಮ 22025, ದಕ್ಷಿಣ 23241, ದಾಸರಹಳ್ಳಿ 21221, ಆರ್.ಆರ್.ನಗರ 41266, ಬೊಮ್ಮನಹಳ್ಳಿ 39183, ಯಲಹಂಕ 36343 ಹಾಗೂ ಮಹದೇವಪುರದಲ್ಲಿ 58371 ಬೀದಿನಾಯಿಗಳಿವೆ. ಬೆಂಗಳೂರಿನಲ್ಲಿ ಒಟ್ಟು 2,79,335 ಬೀದಿನಾಯಿಗಳಿವೆ ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...