ತನ್ನ ಶಾಲೆಗಳನ್ನು ಶಿಕ್ಷಣ ಇಲಾಖೆಯ ಸ್ವಾಧೀನಕ್ಕೆ ತೆಗೆದುಕೊಳ್ಳುವಂತೆ ಮನವಿ ಮಾಡಿದ ಬಿಬಿಎಂಪಿ

ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಶಾಲೆ-ಕಾಲೇಜುಗಳಲ್ಲಿ ಬೋಧಕ ಸಿಬ್ಬಂದಿ ಕೊರತೆ ಜತೆಗೆ ನಿರ್ವಹಣೆ ಸಮಸ್ಯೆ ಎದುರಾಗಿದೆ. ಹಾಗಾಗಿ, ಈ ಶಾಲಾ-ಕಾಲೇಜುಗಳನ್ನು ಶಿಕ್ಷಣ ಇಲಾಖೆ ಸ್ವಾಧೀನಪಡಿಸಿಕೊಳ್ಳುವಂತೆ ಪಾಲಿಕೆ ಮನವಿ ಮಾಡಿದೆ.

ಸೋಮವಾರ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಪ್ರಾಸ್ತಾವಿಕವಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಪಾಲಿಕೆ ನಡೆಸುವ ಶಾಲೆಗಳನ್ನು ಇಲಾಖೆ ಸ್ವಾಧೀನಪಡಿಸಿಕೊಳ್ಳುವ ನಿರ್ಧಾರವನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಬೇಕು. ನಾವು ನೀಡುವ ಸೇವೆಗಳನ್ನು ವಿಸ್ತರಿಸಬಹುದು. ಬಿಬಿಎಂಪಿ ಶಾಲಾ-ಕಾಲೇಜುಗಳ ಗುಣಮಟ್ಟವನ್ನು ಸುಧಾರಿಸಲು ಸಹಕಾರ ನೀಡಲಾಗುವುದು” ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಣಕಾಸಿನ ಪರಿಣಾಮಗಳನ್ನು ಪರಿಶೀಲಿಸಿದ ನಂತರ ಈ ಬಗ್ಗೆ ತಿಳಿಸುವುದಾಗಿ ಇಲಾಖೆ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮುಂದಿನ ಐದು ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಪ್ರಸ್ತುತ 16 ಪ್ರಾಥಮಿಕ, 33 ಪ್ರೌಢಶಾಲೆಗಳು ಇವೆ. 20,000 ವಿದ್ಯಾರ್ಥಿಗಳೊಂದಿಗೆ 18 ಪಿಯು ಕಾಲೇಜುಗಳನ್ನು ನಡೆಸುತ್ತಿದೆ. ಸಂಸ್ಥೆಗಳಲ್ಲಿ ಬೋಧಕ ಸಿಬ್ಬಂದಿ ಕೊರತೆ ಇದೆ. ಇಲ್ಲಿ ಹೆಚ್ಚಾಗಿ ಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here