ಬೆಂಗಳೂರಿನ 8 ವಲಯಗಳಲ್ಲಿ ಮರಗಳ ಗಣತಿಗೆ ಮುಂದಾದ ಬಿಬಿಎಂಪಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮರ ಕಡಿಯಬೇಕು ಎಂದರೆ ಅದಕ್ಕೆ ಸರ್ಕಾರದ ಅನುಮತಿ ಬೇಕೆ ಬೇಕು. ಆದರೂ ಬೇಕಾಬಿಟ್ಟಿಯಾಗಿ ಮರಗಳನ್ನು ಕಡಿದು, ನಗರದವನ್ನು ಸಂಪೂರ್ಣವಾಗಿ ಕಾಂಕ್ರಿಟ್ ಮಯವಾಗಿ ಮಾಡಲಾಗಿದೆ. ಕದ್ದು ಮುಚ್ಚಿ ಮರ ಕಡಿಯುತ್ತಿದ್ದವರಿಗೆ ಬುದ್ಧಿ ಕಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊಸ ಯೋಜನೆಯೊಂದಿಗೆ ಮುಂದೆ ಬಂದಿದೆ. ಇದೀಗ, ನಗರದಲ್ಲಿರುವ ಮರಗಳ ಸರ್ವೇಗೆ ಮುಂದಾಗಿದೆ.

ಪಾಲಿಕೆ ವ್ಯಾಪ್ತಿಯ ಎಂಟು ವಲಯದಲ್ಲಿರುವ ಎಲ್ಲ ಮರಗಳ ಸರ್ವೇಗೆ ಬಿಬಿಎಂಪಿ ಮುಂದಾಗಿದ್ದು, ಈಗಾಗಲೇ 4 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆದಿದೆ. ಅನುಮತಿ ಇಲ್ಲದೇ ಮರ ಕಡಿಯುವುದು, ಮರಗಳಿಗೆ ಆಸಿಡ್ ಹಾಕಿ ಒಣಗುವಂತೆ ಮಾಡುವುದು ಸೇರಿದಂತೆ ಹಲವು ಕೃತ್ಯಗಳಿಗೆ ಕಡಿವಾಣ ಹಾಕಲು ಸಜ್ಜಾಗಿದೆ.

ಬೆಂಗಳೂರಿನ ಎಲ್ಲ ರಸ್ತೆಗಳು, ಸಾರ್ವಜನಿಕ ಸ್ಥಳಗಳು ಹಾಗೂ 50ಕ್ಕಿಂತ ಕಡಿಮೆ ಮರಗಳಿರೋ ಖಾಸಗಿ ಜಾಗಗಳಲ್ಲಿ ಮರಗಳ ಸರ್ವೇ ಮಾಡುವುದಕ್ಕೆ ಪಾಲಿಕೆ ಚಿಂತನೆ ನಡೆಸಿದೆ. ಈಗಾಗಲೇ, ಕಬ್ಬನ್‌ಪಾರ್ಕ್‌, ಲಾಲ್‌ಬಾಗ್‌ ಸೇರಿದಂತೆ ಕೆಲವೆಡೆ ಮರಗಳ ಸರ್ವೇ ಮಾಡಲಾಗಿದೆ. ಇನ್ನುಳಿದ ಬೆಂಗಳೂರಿನ ರಸ್ತೆ, ಫುಟ್‌ಪಾತ್‌ನಲ್ಲಿರುವ ಮರಗಳ ಸರ್ವೇಗೆ ಪಾಲಿಕೆ ಅರಣ್ಯ ವಿಭಾಗ ತಯಾರಿ ನಡೆಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬೆಂಗಳೂರಿನಲ್ಲಿರುವ ಮರಗಳ ಸರ್ವೇ ಮಾಡಿದ ಬಳಿಕ ಆ ಮರಗಳಿಗೆ ಕ್ಯೂ ಆರ್ ಕೋಡ್ ಅಳವಡಿಸಲಾಗುವುದು. ಬಳಿಕ ಆ ಏರಿಯಾದ ಮರಗಳ ಮೇಲೆ ನಿಗಾ ಇಡಬಹುದು. ಜತೆಗೆ ಅಕ್ರಮವಾಗಿ ಮರಗಳನ್ನು ಕಡಿಯುವವರ ಮೇಲೆ ಕಡಿವಾಣ ಹಾಕಬಹುದು” ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರತಿ ಮರಕ್ಕೆ ವಿಶಿಷ್ಟವಾದ ಗುರುತಿನ ಚೀಟಿಯನ್ನು ರಚಿಸಲು ಯೋಜಿಸಿರುವ ಪಾಲಿಕೆ, ನಗರದಲ್ಲಿ ಸುಮಾರು 20.8 ಲಕ್ಷ ಮರಗಳಿವೆ ಎಂದು ಅಂದಾಜಿಸಲಾಗಿದೆ. ಯೋಜನೆಗೆ ಸುಮಾರು ₹4 ಕೋಟಿ ವೆಚ್ಚವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಕಾರ್ಯಕ್ಕಾಗಿ ಬಿಬಿಎಂಪಿ ಎಂಟು ಖಾಸಗಿ ಸಂಸ್ಥೆಗಳನ್ನು ತೊಡಗಿಸಿಕೊಂಡಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಟ್ಟಡ ನಿರ್ಮಾಣ ನಕ್ಷೆಗೆ ಪ್ರಮಾಣೀಕೃತ ವಾಸ್ತುಶಿಲ್ಪಿಗಳ ಸ್ವಯಂ ದೃಢೀಕರಣ ವ್ಯವಸ್ಥೆ ಶೀಘ್ರ ಜಾರಿ: ಡಿಸಿಎಂ

ಕರ್ನಾಟಕ ಹೈಕೋರ್ಟ್ 2019ರಲ್ಲಿ ಮರ ಗಣತಿ ಮಾಡುವುದಕ್ಕೆ ಆದೇಶಿಸಿದ್ದರೂ, ಬಿಬಿಎಂಪಿಯ ಹಿಂದಿನ ಯಾವುದೇ ಪ್ರಯತ್ನಗಳು ಯಶಸ್ವಿಯಾಗಲಿಲ್ಲ. ಇದು ಮೊದಲು ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು, ಆದರೆ ಯೋಜನೆಯು ಪ್ರಾರಂಭವಾಗಲಿಲ್ಲ.

ಮರ ಗಣತಿ ನಡೆಸುವ ಪ್ರಕ್ರಿಯೆಯನ್ನು ಎಂಟು ವಲಯಗಳಾಗಿ ವಿಂಗಡಿಸಲಾಗಿದ್ದು, ವಿಶಿಷ್ಟ ಐಡಿ, ಸುತ್ತಳತೆ, ಮರದ ಜಾತಿಯ ಹೆಸರು, ಛಾಯಾಚಿತ್ರ ಮತ್ತು ಮರದ ಸ್ಥಳದಂತಹ ವಿವರಗಳನ್ನು ಹೊಂದಿರುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನ, ಅಂಗಾಗ ದಾನ ಪ್ರತಿಜ್ಞೆ ಮಾಡಿದ ಕಾರ್ಯಕರ್ತರು

ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರು, ಅಂಗಾಗ ದಾನ ಮಾಡುವ...

ಜೈಲು ಸೇರಿದ ಬಜರಂಗದಳ ಕಾರ್ಯಕರ್ತರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

ಲವ್ ಜಿಹಾದ್​ ಪ್ರಕರಣದಲ್ಲಿ ​ಹಲ್ಲೆ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಸೇರಿರುವ...

ವಿಜಯಪುರ | ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು...

ಬಾಗಲಕೋಟೆ | ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ, ಮಣ್ಣಿನ ಮಡಕೆಗಳತ್ತ ಜನರ ಚಿತ್ತ

ಬೇಸಿಗೆಯ ಆರಂಭದಲ್ಲೇ ಬಿಸಿಲ ತಾಪಕ್ಕೆ ಉತ್ತರ ಕರ್ನಾಟಕದ ಜನ ಹೈರಾಣಾಗಿದ್ದು, ಬಾಗಲಕೋಟೆ...