ಪಬ್ಲಿಕ್ ಸ್ಕೂಲ್-ಪ್ರೀ ನರ್ಸರಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದ ಬಿಬಿಎಂಪಿ

Date:

  • ಅರ್ಜಿ ನಮೂನೆಗಳನ್ನು ಸಲ್ಲಿಸಲು ಏ. 11 ರಿಂದ ಏ. 25 ರವೆಗೆ ಕೊನೆಯ ದಿನಾಂಕ
  • ಏಪ್ರಿಲ್ 29ರಂದು ಪ್ರೀ ನರ್ಸರಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರೀ ನರ್ಸರಿ ತರಗತಿ(ಸಿ.ಬಿ.ಎಸ್.ಸಿ ಪಠ್ಯಕ್ರಮ)ಗೆ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

- Advertisement -

ಬಿಬಿಎಂಪಿ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಭಾರತೀಯ ವಿದ್ಯಾಭವನ ಮತ್ತು ಪಾಲಿಕೆ ಜಂಟಿ ಆಯೋಗದಲ್ಲಿ ಪ್ರೀ ನರ್ಸರಿ ತರಗತಿಗಳು ನಡೆಯಲಿವೆ. ಇದಕ್ಕಾಗಿ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅರ್ಜಿಗಳನ್ನು ಮಾರ್ಚ 27 ರಿಂದ ಏಪ್ರಿಲ್ 10 ರವರೆಗೆ ಭಾರತೀಯ ವಿದ್ಯಾಭವನ ಬಿಬಿಎಂಪಿ ಪಬ್ಲಿಕ್ ಸ್ಕೂಲ್, ನಂ. 215ನೇ ಮುಖ್ಯ ರಸ್ತೆ ಕ್ರಾಂತಿಕವಿ ಸರ್ವಜ್ಞ ರಸ್ತೆ, ಶ್ರೀರಾಮಪುರ, ಬೆಂಗಳೂರು-21ನ ವಿದ್ಯಾಸಂಸ್ಥೆಯಲ್ಲಿ ಶಿಶುವಿಹಾರಕ್ಕೆ ಅರ್ಜಿಗಳನ್ನು ವಿತರಿಸಲಾಗುವುದು ಎಂದು ಪಾಲಿಕೆ ಪ್ರಕಟಣೆ ಹೊರಡಿಸಿದೆ.

ಅರ್ಜಿ ನಮೂನೆಗಳನ್ನು ಸಲ್ಲಿಸಲು ಏ. 11 ರಿಂದ ಏ. 25 ರವೆಗೆ ಅವಕಾಶ ನೀಡಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ(ಶಿಕ್ಷಣ) 1ನೇ ಮಹಡಿಯ ಅನೆಕ್ಸ್- 3 ಕಟ್ಟಡ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು. ಏಪ್ರಿಲ್ 29ರಂದು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು

  • ಮಗುವಿನ ಪಾಸ್ ಪೋಟ್೯ ಸೈಜ್ ಫೋಟೋ – 5 ಸಂಖ್ಯೆ
  • ಮಗುವಿನ ಜೊತೆಗಿರುವ ತಂದೆ ತಾಯಿಯ ಭಾವಚಿತ್ರ(ಕುಟುಂಬ ಭಾವ ಚಿತ್ರ)
  • ಮಗುವಿನ ಜನನ ಪ್ರಮಾಣ ಪತ್ರ
  • ಅದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ತಂದೆ / ತಾಯಿಯ ಆಧಾರ್ ಕಾರ್ಡ್ ಜೆರಾಕ್ಸ್
  • ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್
  • ತಂದೆ / ತಾಯಿಯ ಖಾಯಂ ವಿಳಾಸವಿರುವ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿ(ಭಾರತೀಯ ವಿದ್ಯಾಭವನ ಶಾಲೆಗೆ 3 ಕಿ.ಲೋ. ಸುತ್ತಮುತ್ತಲಿನ ಅಂತರದಲ್ಲಿ ವಾಸವಾಗಿರಬೇಕು.)
  • ಮಗುವಿನ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು(ಎತ್ತರ, ತೂಕ, ರಕ್ತದ ಗುಂಪು)

ಸೂಚನೆ

ಅರ್ಜಿ ಪರಿಶೀಲನೆಯ ದಿನ(ದಿ: 29-04-2023) ಪೋಷಕರು ಮಗುವಿನ ಜೊತೆಗೆ ದಾಖಲಾತಿಗೆ ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳನ್ನು ತರುವುದು ಕಡ್ಡಾಯ ಎಂದು ಪಾಲಿಕೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...