ಹೈಕೋರ್ಟ್ ನಿರ್ದೇಶನದ ನಂತರ 59,000 ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವು ಮಾಡಿದ ಬಿಬಿಎಂಪಿ

Date:

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಫಲವಾದ ಕಾರಣ ಇತ್ತೀಚೆಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ನಗರದಲ್ಲಿ 59,000 ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ತೆರವು ಮಾಡಿದೆ.

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ನ್ಯಾಯಾಲಯದ ನಿರ್ದೇಶನಗಳನ್ನು ಜಾರಿಗೆ ತರಲು ಬಿಬಿಎಂಪಿಯು ನಗರದಾದ್ಯಂತ ಫ್ಲೆಕ್ಸ್ ಬ್ಯಾನರ್‌ ಹಾಕಲು ಅವಕಾಶ ನೀಡುವುದಿಲ್ಲ. ಈ ನಿಯಮ ಉಲ್ಲಂಘಿಸುವವರಿಗೆ ₹50,000 ದಂಡ ವಿಧಿಸಲಾಗುವುದು. ಯಾವುದೇ ರಾಜಕೀಯ ಪಕ್ಷಗಳು ಮತ್ತು ಮುಖಂಡರಿಗೆ ಹೋರ್ಡಿಂಗ್‌ಗಳನ್ನು ಹಾಕಲು ಅವಕಾಶ ನೀಡುವುದಿಲ್ಲ. ನಿಷೇಧಾಜ್ಞೆ ಜಾರಿ ಕುರಿತು ಪಕ್ಷಾತೀತವಾಗಿ ಶಾಸಕರೊಂದಿಗೆ ಮಾತನಾಡಿದ್ದೇನೆ. ಇನ್ನೂ ಎರಡು-ಮೂರು ದಿನಗಳಲ್ಲಿ ಇದು ಜಾರಿಗೆ ಬರಲಿದೆ” ಎಂದು ಶಿವಕುಮಾರ್ ಹೇಳಿದರು.

ಬಿಬಿಎಂಪಿ ಈವರೆಗೆ 59,000 ಫ್ಲೆಕ್ಸ್‌ಗಳನ್ನು ತೆರವು ಮಾಡಿದೆ. ಅಕ್ರಮ ಹೋರ್ಡಿಂಗ್‌ಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿಗೆ 134 ದೂರುಗಳು ಬಂದಿದ್ದು, 44 ಎಫ್‌ಐಆರ್‌ಗಳು ದಾಖಲಾಗಿವೆ. ನಿಷೇಧಾಜ್ಞೆ ಜಾರಿಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿರುವುದರಿಂದ ರಾಜಕೀಯ ಪಕ್ಷಗಳು ನಿಯಮಾವಳಿಗೆ ಬದ್ಧವಾಗಿರಬೇಕು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ 3 ವರ್ಷಗಳಲ್ಲಿ 45,000 ಅಪ್ರಾಪ್ತೆಯರು ಗರ್ಭಿಣಿಯಾಗಿದ್ದಾರೆ

ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲು ಹಾಗೂ ಅಕ್ರಮ ಹೋರ್ಡಿಂಗ್‌ಗಳನ್ನು ತೆಗೆಯಲು ವಿಫಲವಾಗಿರುವ ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಫ್ಲೇಕ್ಸ್‌, ಬ್ಯಾನರ್ ತೆಗೆದುಹಾಕಲು ವಿಫಲವಾದರೆ ನ್ಯಾಯಾಲಯಕ್ಕೆ ದಂಡ ಪಾವತಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಮೀಸಲು: ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವುದು ಬರೀ ಘೋಷಣೆಯೇ?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು...

ಜನರಲ್ಲಿ ಡೆಂಘೀ ಜಾಗೃತಿ: ರಾಜಧಾನಿಯಲ್ಲಿ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ...

ಬೀದರ್-ಬೆಂಗಳೂರು ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ಬೀದರ್–ಬೆಂಗಳೂರು ನಡುವೆ ನಾಗರಿಕ ವಿಮಾನಯಾನ ಸೇವೆ ಪುನ: ಆರಂಭಿಸುವ ಕುರಿತಂತೆ ವಿವಿಧ...

ಜು. 19: ಬ್ಯಾರಿ ಅಕಾಡೆಮಿ ಅಧ್ಯಕ್ಷ-ಸದಸ್ಯರ ಪದಗ್ರಹಣ; ‘ಪಿರ್ಸಪ್ಪಾಡ್‌’ ಬ್ಯಾರಿ ಸಾಂಸ್ಕೃತಿಕ ಸಂಭ್ರಮ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಿರ್ಸಪ್ಪಾಡ್‌ (ಬ್ಯಾರಿ ಸಾಂಸ್ಕೃತಿಕ ಸಂಭ್ರಮ)...