ರಾಜ್ಯ ಸರ್ಕಾರದ ಬಜೆಟ್‌ | ₹7 ಸಾವಿರ ಕೋಟಿ ಅನುದಾನಕ್ಕೆ ಬಿಬಿಎಂಪಿ ಮನವಿ

Date:

  • ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆ
  • ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್ ಪಾವತಿ ಬಾಕಿ

ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ₹7 ಸಾವಿರ ಕೋಟಿ ಅನುದಾನ ನೀಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದೆ.

- Advertisement -

“ರಾಜಧಾನಿ ಬೆಂಗಳೂರಿನಲ್ಲಿ ಅಮೃತ ನಗರೋತ್ಥಾನ, ವೈಟ್‌ಟಾಪಿಂಗ್ ಸೇರಿದಂತೆ ಹಲವು ಯೋಜನೆಗಳಲ್ಲಿ ಕ್ರಿಯಾ ಯೋಜನೆಯಾಗಿ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿ ನಡೆದ ಯೋಜನೆಗಳ ಬಿಲ್ ಇನ್ನೂ ಕೆಲವೇ ದಿನಗಳಲ್ಲಿ ಬರಲಿವೆ. ಹಾಗಾಗಿ, ಬಿಲ್ ಪಾವತಿ ಮಾಡಲು ಬಜೆಟ್‌ನಲ್ಲಿ ₹7 ಸಾವಿರ ಕೋಟಿ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು” ಎಂದು ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯಪುರ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಪುನರ್ ರಚನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

“ಈ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಅನುದಾನದಲ್ಲಿ ನಗರದಲ್ಲಿ ಕೆಲವು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈಗ ಮುಗಿಯುತ್ತಿರುವ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್ ಪಾವತಿ ಮಾಡಬೇಕು. ಹಾಗಾಗಿ, ಮೊತ್ತವನ್ನು ಬಿಡುಗಡೆ ಮಾಡಲು ಮನವಿ ಮಾಡಲಾಗುವುದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...