ಅತ್ಯುತ್ತಮ ಆರ್.ಆರ್.ಆರ್ ನಗರವಾಗಿ ಆಯ್ಕೆಯಾದ ಬಿಬಿಎಂಪಿ

Date:

Advertisements
  • ‘ನನ್ನ ಜೀವನ, ನನ್ನ ಸ್ವಚ್ಛ ನಗರ’ ಎಂಬ ದ್ಯೇಯದೊಂದಿಗೆ ಆರಂಭ
  • ಅತ್ಯುತ್ತಮ ಆರ್.ಆರ್.ಆರ್ ನಗರ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ನೀಡಿ ಗೌರವ

ನಗರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕರ್ನಾಟಕದಲ್ಲಿ ಅತ್ಯುತ್ತಮ ಆರ್.ಆರ್.ಆರ್(ರೆಡ್ಯೂಸ್, ರಿಯೂಸ್ ಹಾಗೂ ರಿಸೈಕಲ್) ನಗರವಾಗಿ ಆಯ್ಕೆಯಾಗಿದೆ.

ನಗರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯವು ಕರ್ನಾಟಕ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನನ್ನ ಜೀವನ, ನನ್ನ ಸ್ವಚ್ಛ ನಗರ ಎಂಬ ಧ್ಯೇಯದೊಂದಿಗೆ ರೆಡ್ಯೂಸ್, ರಿಯೂಸ್ ಹಾಗೂ ರಿಸೈಕಲ್-ಆರ್.ಆರ್.ಆರ್ ಕೇಂದ್ರಗಳನ್ನು ಸ್ಥಾಪಿಸಲು ತಿಳಿಸಿತ್ತು.

ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ‘ನನ್ನ ಜೀವನ, ನನ್ನ ಸ್ವಚ್ಛ ನಗರ’ ಎಂಬ ಧ್ಯೇಯದೊಂದಿಗೆ ಮೇ 15ರಿಂದ ಪರಿಸರ ದಿನವಾದ ಜೂನ್ 5ರವರೆಗೆ ದೊಡ್ಡ ಪ್ರಮಾಣದ ಮತ್ತು ಉನ್ನತ-ಪ್ರಭಾವದ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿತು. ಅದರಂತೆ, ಬಿಬಿಎಂಪಿ ವ್ಯಾಪ್ತಿಯ 49 ವಾರ್ಡ್‌ಗಳಲ್ಲಿ ಆರ್.ಆರ್.ಆರ್ ಕೇಂದ್ರಗಳನ್ನು ತೆರೆದು ಮನೆಗಳಲ್ಲಿ ಬಳಕೆಯಾಗದ ಪುಸ್ತಕಗಳು, ಆಟಿಕೆಗಳು, ಕಬ್ಬಿಣದ ಉತ್ಪನ್ನ ಹಾಗೂ ಪ್ಲಾಸ್ಟಿಕ್ ಉತ್ಪನ್ನಗಳನ್ನು ಕೇಂದ್ರಗಳಲ್ಲಿ ನೀಡಿದರೆ ಅದನ್ನು ಪುನರ್ ಬಳಕೆ ಮಾಡುವ ಜತೆಗೆ ನಗರವನ್ನು ಸ್ವಚ್ಛ ನಗರವನ್ನಾಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

Advertisements

ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ವಿಭಿನ್ನ ಆಯ್ಕೆ ಮಾನದಂಡಗಳ ಆಧಾರದ ಮೇಲೆ ರಾಜ್ಯವು ಬೆಂಗಳೂರು ನಗರವನ್ನು ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆರ್.ಆರ್.ಆರ್ ನಗರಗಳಲ್ಲಿ ಒಂದಾಗಿ ಆಯ್ಕೆ ಮಾಡಿದೆ.

ಗುರುವಾರ ಬೆಂಗಳೂರಿನ ದಿ ಚಾನ್ಸೆರಿ ಪೆವಿಲಿಯನ್ ಹೋಟೆಲ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಪೌರಾಡಳಿತ ನಿರ್ದೇಶನಾಲಯ ನಡೆಸಿದ ಕಾರ್ಯಾಗಾರದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಹಾಗೂ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಮಂಜುಶ್ರೀ ಅವರು ‘ಅತ್ಯುತ್ತಮ ಆರ್.ಆರ್.ಆರ್ ನಗರ’ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹1.5 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು

ಈ ವೇಳೆ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಪ್ರಧಾನ ವ್ಯವಸ್ಥಾಪಕ ಬಸವರಾಜ್ ಕಬಾಡೆ, ಘನತ್ಯಾಜ್ಯ ನಿರ್ವಹಣೆ ವಿಭಾಗದ ಮುಖ್ಯ ಅಭಿಯಂತರ ಪ್ರವೀಣ್ ಲಿಂಗಯ್ಯ, ಚೀಪ್ ಮಾರ್ಷಲ್ ರಾಜಬೀರ್ ಸಿಂಗ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X