ಲೋಕಸಭೆ ಚುನಾವಣೆಗೆ ಬಿಬಿಎಂಪಿ ಸಿದ್ಧತೆ | ಜು. 21ರಿಂದ ಮತದಾರರ ಪಟ್ಟಿ ಪರಿಷ್ಕರಣೆ

Date:

Advertisements
  • ಮತಗಟ್ಟೆ ಅಧಿಕಾರಿಗಳಿಗೆ ಜೂ. 1-ಜು. 20ರವರೆಗೆ ತರಬೇತಿ
  • ಅಕ್ಟೋಬರ್ 17ರಂದು ಮತದಾರರ ಕರಡು ಪಟ್ಟಿ ಪ್ರಕಟ

ಚುನಾವಣಾ ಆಯೋಗದ ನಿರ್ದೇಶನದಂತೆ, ಅಧಿಕಾರಿಗಳಿಗೆ ತರಬೇತಿ ನೀಡುವುದರಿಂದ ಹಿಡಿದು ಮತದಾರರ ಪಟ್ಟಿ ಪರಿಷ್ಕರಣೆಯವರೆಗೆ ಹಲವಾರು ಚಟುವಟಿಕೆಗಳನ್ನು ಯೋಜಿಸುವ ಮೂಲಕ 2024ರ ಲೋಕಸಭೆ ಚುನಾವಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧತೆ ಪ್ರಾರಂಭಿಸಿದೆ.

ಈ ಅವಧಿಯಲ್ಲಿ ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಅಂತಿಮ ಮತದಾರರ ಪಟ್ಟಿಯನ್ನು ಜನವರಿ 5 ರಂದು ಪ್ರಕಟಿಸಲಾಗುವುದು ಎಂದು ಪಾಲಿಕೆ ಹೇಳಿದೆ.

ಚುನಾವಣೆ ಅಧಿಕಾರಿಗಳು, ಸಹಾಯಕ ಚುನಾವಣೆ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳಿಗೆ ಜೂನ್‌ 1ರಿಂದ ಜುಲೈ 20ರವರೆಗೆ ತರಬೇತಿ ನೀಡಲಾಗುತ್ತದೆ.

Advertisements

ಮತಗಟ್ಟೆ ಅಧಿಕಾರಿಗಳು ಜುಲೈ 21 ರಿಂದ ಆಗಸ್ಟ್ 21 ರವರೆಗೆ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಪರಿಶೀಲನೆ ಸಮೀಕ್ಷೆಯನ್ನು ಕೈಗೊಳ್ಳುತ್ತಾರೆ. ಮತದಾರರ ಪಟ್ಟಿ ಪರಿಷ್ಕರಣೆ, ಮತಗಟ್ಟೆಗಳ ಆಯ್ಕೆಯ ಚಟುವಟಿಕೆಗಳು ಆ.22 ರಿಂದ ಸೆ. 29ರವರೆಗೆ ನಡೆಯಲಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ? ಇಲ್ಲಿದೆ ನೋಡಿ!

ಮತದಾರರ ಪಟ್ಟಿಯ ಕರಡು ಪ್ರತಿ ಸಿದ್ಧತೆ ಸೆ.30 ರಿಂದ ಅ.16 ರವರೆಗೆ ನಡೆಯಲಿದೆ. ಅ. 17ರಂದು ಮತದಾರರ ಕರಡು ಪಟ್ಟಿ ಪ್ರಕಟಿಸಲಾಗುತ್ತದೆ. ಆಕ್ಷೇಪಣೆ ಸಲ್ಲಿಸಲು ಅ.17 ರಿಂದ ನ.30ರವರೆಗೆ ಅವಕಾಶವಿದೆ. ಡಿಸೆಂಬರ್‌ 26ರೊಳಗೆ ಬಂದ ಎಲ್ಲ ಆಕ್ಷೇಪಣೆಗಳನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುತ್ತದೆ. ಶನಿವಾರ ಮತ್ತು ಭಾನುವಾರದಂದು ಎರಡು ದಿನ ವಿಶೇಷ ಅಭಿಯಾನ ನಡೆಸಲಾಗುತ್ತದೆ. 2024ರ ಜ.1ರಂದು ಮತದಾರರ ಅಂತಿಮ ಪಟ್ಟಿಯನ್ನು ಮುದ್ರಣಕ್ಕೆ ಕಳುಹಿಸಲಾಗುತ್ತದೆ. ಜ.5ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X