ಬಿಬಿಎಂಪಿ ಬಾಕಿ ಬಿಲ್ | ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ: ಗುತ್ತಿಗೆದಾರರ ಸಂಘ

Date:

  • ಸಾಲದ ಸುಳಿಗೆ ಸಿಲುಕುತ್ತಿರುವ ಗುತ್ತಿಗೆದಾರರು
  • ಬಿಲ್ ಪಾವತಿ ಮಾಡದಿದ್ದರೆ ಉಗ್ರ ಹೋರಾಟ

“ಪ್ರಸಕ್ತ ಸಾಲಿನಲ್ಲಿ ತೆರಿಗೆ ಹಣ ಸುಮಾರು ₹2 ಸಾವಿರ ಕೋಟಿ ಲಭ್ಯವಿದ್ದರೂ ಸಹ ಬಾಕಿ ಬಿಲ್ ಪಾವತಿ ಮಾಡಲು ಬಿಬಿಎಂಪಿ ಮೀನಾಮೇಷ ಮಾಡುತ್ತಿದೆ. ಇದರ ಬಗ್ಗೆ ಗುತ್ತಿಗೆದಾರರಿಗೆ ಸ್ಪಷ್ಟನೆ ನೀಡಬೇಕು” ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಆರೋಪಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರಸಕ್ತ ಸಾಲಿನಲ್ಲಿಯೇ (2023-24) ಬಿಬಿಎಂಪಿಗೆ ಸುಮಾರು 2 ಸಾವಿರ ಕೋಟಿ ತೆರಿಗೆ ಹಣ ಬಂದಿದೆ. ಗುತ್ತಿಗೆದಾರರು ಕಳೆದ 26 ತಿಂಗಳಿನಿಂದ ನಿರ್ವಹಿಸಿದ ಕಾಮಗಾರಿಗಳಿಗೆ ಇನ್ನೂ ಹಣ ಪಾವತಿ ಮಾಡಿಲ್ಲ. ತೆರಿಗೆ ಹಣ ಇದ್ದರೂ ಯಾಕೆ ಹಣ ಬಿಡುಗಡೆ ಮಾಡಿಲ್ಲ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು” ಎಂದರು.  

“ಪಾಲಿಕೆಗೆ ರಾಜ್ಯ ಸರ್ಕಾರದ ಅನುದಾನ ₹675 ಕೋಟಿ ಸಂದಾಯವಾಗಿ ಮೂರು ತಿಂಗಳು ಕಳೆದಿವೆ. ನಡೆದ ಕಾಮಗಾರಿಗಳಿಗೆ ಇನ್ನೂ ಹಣ ಪಾವತಿಯಾಗಿಲ್ಲ. ಇದರ ಹಿಂದೆ ಏನೋ ಷಡ್ಯಂತ್ರವಿದೆ. ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗದ ಕಾರಣ ಸಾಲದ ಸುಳಿಗೆ ಸಿಲುಕುವಂತಾಗಿದೆ. ಹಾಗಾಗಿ, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಪತ್ರ ಬರೆದಿದ್ದೇವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಎಲ್ಲ ವಿಧದ ಔಷಧಿ ಎಲ್ಲರಿಗೂ ಉಚಿತವಾಗಿ ಸಿಗಬೇಕು: ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕ

“ಗುತ್ತಿಗೆದಾರರಿಗೆ ಆದಷ್ಟು ಬೇಗ ಬಾಕಿ ಬಿಲ್ ಪಾವತಿ ಮಾಡಬೇಕು. ಇಲ್ಲದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು. ಹಣಕಾಸು ಮುಗ್ಗಟ್ಟಿನಿಂದ ಗುತ್ತಿಗೆದಾರರಿಗೆ ಅನಾಹುತ ಸಂಭವಿಸಿದರೆ, ಇದರ ಜವಾಬ್ದಾರಿಯನ್ನು ಮುಖ್ಯ ಆಯುಕ್ತರು ಹೊಣೆ ಹೊರಬೇಕಾಗುತ್ತದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರಲ್ಲಿ ಡೆಂಘೀ ಜಾಗೃತಿ: ರಾಜಧಾನಿಯಲ್ಲಿ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ...

ಬೀದರ್-ಬೆಂಗಳೂರು ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ಬೀದರ್–ಬೆಂಗಳೂರು ನಡುವೆ ನಾಗರಿಕ ವಿಮಾನಯಾನ ಸೇವೆ ಪುನ: ಆರಂಭಿಸುವ ಕುರಿತಂತೆ ವಿವಿಧ...

ಜು. 19: ಬ್ಯಾರಿ ಅಕಾಡೆಮಿ ಅಧ್ಯಕ್ಷ-ಸದಸ್ಯರ ಪದಗ್ರಹಣ; ‘ಪಿರ್ಸಪ್ಪಾಡ್‌’ ಬ್ಯಾರಿ ಸಾಂಸ್ಕೃತಿಕ ಸಂಭ್ರಮ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಿರ್ಸಪ್ಪಾಡ್‌ (ಬ್ಯಾರಿ ಸಾಂಸ್ಕೃತಿಕ ಸಂಭ್ರಮ)...

ಬೆಂಗಳೂರು | ‘ಸಂವಾದ’ದಿಂದ ವೃಷಭಾವತಿ ನದಿ ಉಳಿಸಿ ಆಂದೋಲನ

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಜೊತೆಗೆ ನೀರಿನ ಮೂಲ ನದಿ, ಕೆರೆಗಳನ್ನು...