ಬೆಂಗಳೂರು ಮೆಟ್ರೋ ರೈಲಿನಲ್ಲಿ ವ್ಯಕ್ತಿಯೊಬ್ಬ ಭಿಕ್ಷೆ ಬೇಡುತ್ತಿರುವ ಈ ಘಟನೆ ಶನಿವಾರ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು ಈ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ವಿಡಿಯೋದಲ್ಲಿ ಸ್ಕಲ್ ಕ್ಯಾಪ್ ಧರಿಸಿದ ವಿಕಲಚೇತನ ವ್ಯ ಕ್ತಿಯೊಬ್ಬ ರೈಲಿನೊಳಗೆ ಒಬ್ಬ ಪ್ರಯಾಣಿಕನಿಂದ ಇನ್ನೊಬ್ಬನಿಗೆ ಭಿಕ್ಷೆ ಬೇಡುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಪ್ರಯಾಣಿಕರೊಬ್ಬರು ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು ಇದೀಗ ವೈರಲ್ ಆಗಿದೆ.
ಈ ಸುದ್ದಿ ಓದಿದ್ದೀರಾ? ಮುಡಾ ಹಗರಣ | ಕರ್ನಾಟಕ ಹೈಕೋರ್ಟ್ ದೋಷಪೂರಿತ ತೀರ್ಪು ನೀಡಿತೆ?
ಬಿಎಂಆರ್‌ಸಿಎಲ್ ಮೂಲಗಳ ಪ್ರಕಾರ, ಇದು ಶನಿವಾರದ ಘಟನೆ ಎಂದು ಹೇಳಲಾಗಿದೆ. ಆದರೆ ನಿಖರವಾದ ದಿನಾಂಕ ಮತ್ತು ಸಮಯವನ್ನು ಖಚಿತಪಡಿಸಿಕೊಳ್ಳಲು ತನಿಖೆ ಇನ್ನೂ ನಡೆಯುತ್ತಿದೆ ಎಂದು ವರದಿಗಳು ಉಲ್ಲೇಖಿಸಿವೆ.
ಈ ವ್ಯಕ್ತಿ ಎಲ್ಲಿ ಹತ್ತಿದ್ದಾನೆ ಎಂದು ನಮಗೆ ಮಾಹಿತಿ ಇಲ್ಲ , ವ್ಯಕ್ತಿಯನ್ನು ಕೂಡಲೇ ಪತ್ತೆ ಹಚ್ಚಲು ಆರಂಭಿಸುತ್ತೇವೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
