ಬೆಂಗಳೂರು | ಪೊಲೀಸರ ಸೋಗಿನಲ್ಲಿ ಮಹಿಳಾ PGಗೆ ನುಗ್ಗಿದ್ದ 6 ಮಂದಿ; ಬಂಧನ

Date:

ಪೋಲೀಸರ ಸೋಗಿನಲ್ಲಿ ದುರುಳರ ಗುಂಪೊಂದು ಮಹಿಳಾ ಪಿ.ಜಿ.ಗೆ ನುಗ್ಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಂಪು ಪಿ.ಜಿ.ಯಲ್ಲಿ ದರೋಡೆಗೆ ಯತ್ನಿಸಿತ್ತು ಎಂದು ಹೇಳಲಾಗಿದೆ. ಗುಂಪಿನಲ್ಲಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬೆಂಗಳೂರಿನ ಎಚ್‌ಎಎಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಸ್ಪೈಸ್ ಗಾರ್ಡನ್‌ನ ‘ಕೋ-ಲಿವಿಂಗ್’ ಪಿ.ಜಿಯಲ್ಲಿ ಘಟನೆ ನಡೆದಿದೆ. ಪಿ.ಜಿಯಲ್ಲಿದ್ದ ಯುವತಿಯೊಬ್ಬರಿಗೆ ಪರಿಚಿತನಾಗಿದ್ದ ಯುವಕನೊಬ್ಬ ತನ್ನ ಗುಂಪಿನೊಂದಿಗೆ ಪೊಲೀಸರ ಹೆಸರು ಹೇಳಿಕೊಂಡು, ಪಿ.ಜಿ ನುಗ್ಗಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆರೋಪಿಗಳನ್ನು ಕೇರಳ ಮೂಲದ ನಜಾಸ್, ಸರುಣ್, ಬೆಂಗಳೂರಿನ ವಿಷ್ಣು ಕೆ.ಟಿ, ದಿವಾಕರ್, ಮಧುಕುಮಾರ್, ಕಿರಣ್ ಎಂದು ಹೆಸರಿಸಲಾಗಿದೆ.

ಪ್ರಮುಖ ಆರೋಪಿ ನಜಾಸ್‌ಗೆ ಪಿ.ಜಿಯಲ್ಲಿದ್ದ ಯುವತಿ ಪರಿಚಯವಾಗಿದ್ದರು. ತನ್ನ ಜನ್ಮದಿನಾಚರಣೆಗಾಗಿ ಪಿ.ಜಿಗೆ ಬರುವಂತೆ ನಜಾಸ್‌ಗೆ ಆಹ್ವಾನಿಸಿದ್ದರು. ಆತ ತನ್ನ ಸ್ನೇಹಿತರ ಗುಂಪಿನಿಂದಿಗೆ ಪಿ.ಜಿಯಲ್ಲಿ ನಡೆದ ಹುಟ್ಟಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದ. ಆದರೆ, ಕಾರ್ಯಕ್ರಮ ಮುಗಿದ ಬಳಿಕ, ನಜಾಸ್ ಮತ್ತು ಆತನ ತಂಡ ಪಿ.ಜಿಯಲ್ಲಿದ್ದ ಕೊಠಡಿಗಳಿಗೆ ತೆರಳಿ, ತಾವು ಪೊಲೀಸರೆಂದು ಹೇಳಿಕೊಂಡು, ಯುವತಿಯರ ಬಳಿಯಿದ್ದ 2 ಮೊಬೈಲ್‌ಗಳನ್ನು ಕಸಿದುಕೊಂಡಿದ್ದಾರೆ. ಅಲ್ಲದೆ, 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳ ವರ್ತನೆ ಕಂಡು ಅನುಮಾನಗೊಂಡ ಯುವತಿಯರು ಎಚ್‌ಎಎಲ್‌ ಪೊಲೀಸ್‌ ಠಾಣೆಗೆ ಕರೆ ಮಾಡಿದ್ದಾರೆ. ಆಗ, ಅದು ನಕಲಿ ಪೊಲೀಸ್‌ ಗ್ಯಾಂಗ್‌ ಎಂಬುದು ಗೊತ್ತಾಗಿದೆ. ಬಳಿಕ, ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧತ ಆರೋಪಿಗಳಲ್ಲಿ ಒಬ್ಬನಾದ ಸರುಣ್ ಎಂಬಾತ, ಈ ಹಿಂದೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಂಧಿಸಲಾಗಿತ್ತು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...