ಅಪ್ರಾಪ್ತ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಮುಕ ಯೋಗ ಗುರು ನಿರಂಜನಾ ಮೂರ್ತಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಯೋಗ ತರಬೇತಿ ಕೇಂದ್ರ ನಡೆಸುತ್ತಿದ್ದ ನಿರಂಜನಾ ಮೂರ್ತಿ, ತನ್ನ ಯೋಗ ಕೇಂದ್ರ ಬರುತ್ತಿದ್ದ ಅಪ್ರಾಪ್ತ ಬಾಲಕಿ ಸೇರಿದಂತೆ ಎಂಟು ಮಂದಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿರುದ್ಧ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿ ಮತ್ತು ಮಹಿಳೆಯರ ದೂರಿನ ಆಧಾರದ ಮೇಲೆ ಬಿಎನ್‌ಎಸ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯು ಸಂತ್ರಸ್ತೆಯರಿಗೆ ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ಸರ್ಕಾರಿ ಕೆಲಸವೂ ದೊರೆಯಬಹುದು ಎಂದು ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.