ಬೆಂಗಳೂರು | ಮಹಿಳೆಗೆ ಪಾದರಸ ‘ಇಂಜೆಕ್ಟ್‌’ ಮಾಡಿ ಕೊಂದ ದುರುಳ ಪತಿ; ಸಾವಿಗೂ ಮುನ್ನ ಆಕೆ ಹೇಳಿದ್ದೇನು?

Date:

ದುರುಳ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಪಾದರಸ ಚುಚ್ಚುಮದ್ದು ನೀಡಿ, ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವಿಗೂ ಮುನ್ನ ಪೊಲೀಸರಿಗೆ ಮಾಹಿತಿ ನೀಡಿರುವ ಮಹಿಳೆ, ‘ತನ್ನ ಪತಿ ಮತ್ತು ಮಾವ ನನ್ನನ್ನು ಕೊಲ್ಲಲು ಸಂಚುಹೂಡಿ, ವೈದ್ಯಕೀಯ ದಂಪತಿಗಳ ನೆರವು ಪಡೆದಿದ್ದಾರೆ’ ಎಂದು ಆರೋಪಿಸಿದ್ದಾರೆ.

- Advertisement -

ಮೃತ ಮಹಿಳೆಯನ್ನು ವಿದ್ಯಾ ಎಂದು ಗುರುತಿಸಾಗಿದೆ. ಅವರು ಕಳೆದ ವಾರ ಮೃತಪಟ್ಟಿದ್ದಾರೆ. ಅವರು ತಮ್ಮ ಮೇಲಾದ ದೌರ್ಜ್ಯದ ಕುರಿತು ಪೊಲೀಸರಿಗೆ ವಿವರಿಸಿರುವಂತೆ, ಅವರಿಗೆ ಫೆಬ್ರವರಿ 26ರಂದು ಆಕೆಯ ಪತಿ ಪಾದರವನ್ನು ಇಂಜೆಕ್ಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“SLN ಡಯಾಗ್ನೋಸ್ಟಿಕ್ ಸೆಂಟರ್ ಎಂಬಲ್ಲಿ ಕೆಲಸ ಮಾಡುತ್ತಿದ್ದ ಶ್ವೇತಾ ಮತ್ತು ಆಕೆಯ ಪತಿ ನನ್ನ ಗಂಡನಿಗೆ ಕ್ಲೋರೋಪಾರ್ಫ್‌, ಸಿರಿಂಜ್ ಹಾಗೂ ಮರ್ಕ್ಯುರಿಯನ್ನು ನೀಡಿದ್ದರು. ಅವುಗಳನ್ನು ಬಳಸಿಕೊಂಡ ನನ್ನ ಪತಿ, ನಾನು ಫೆಬ್ರವರಿ 26ರ ರಾತ್ರಿ ಮಲಗಿದ್ದಾಗ, ಕ್ಲೋರೋಫಾರ್ಮ್‌ ಮೂಲಕ ನನ್ನ ಪ್ರಜ್ಞೆ ತಪ್ಪಿಸಿ, ಪಾದರಸವನ್ನು ಇಂಜೆಕ್ಟ್‌ ಮಾಡಿದ್ದಾರೆ” ಎಂದು ವಿವರಿಸಿರುವುದಾಗಿ ವರದಿಯಾಗಿದೆ.

“ಮರುದಿನ ಸಂಜೆ ವೇಳೆಗೆ ನನಗೆ ಪ್ರಜ್ಞೆ ಬಂದಿತು. ಆಗ, ನನ್ನ ಕಾಲು ಊದಿಕೊಂಡಿತ್ತು. ನನ್ನ ಬಲ ತೊಡೆಯಲ್ಲಿ ತೀವ್ರ ನೋವಾಗುತ್ತಿತ್ತು. ಕೆಲ ದಿನಗಳಲ್ಲಿಯೇ ನನ್ನ ಆರೋಗ್ಯ ಸ್ಥಿತಿ ಹದಗೆಟ್ಟು, ಮಾರ್ಚ್‌ 7ರಂದು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದೆ. ಅಲ್ಲಿಂದ, ಆಕ್ಸ್‌ಫರ್ಡ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ, ವೈದ್ಯರು ಪರೀಕ್ಷಿಸಿದಾಗ, ನನ್ನ ದೇಹದಲ್ಲಿ ಪಾದರಸ ಇರುವುದು ಪತ್ತೆಯಾಯಿತು” ಎಂದು ಸಾವಿನ ಅಂಚಿನಲ್ಲಿದ್ದ ಮಹಿಳೆ ಪೊಲೀಸರಿಗೆ ವಿವರಿಸಿದ್ದರೆಂದು ತಿಳಿದುಬಂದಿದೆ.

“ನನ್ನ ಪತಿ ಬಸವರಾಜ್ ಮತ್ತು ಅವನ ತಂದೆ ಮರಿಶ್ವಾಮಾಚಾರಿ ನನ್ನನ್ನು ಕೊಲ್ಲುವ ಉದ್ದೇಶದಿಂದ ತನ್ನ ದೇಹಕ್ಕೆ ಪಾದರಸವನ್ನು ಚುಚ್ಚಿದ್ದಾರೆ. ಅವರಿಬ್ಬರು ನನಗೆ ನಿರಂತರ ಕಿರುಕುಳ ನೀಡಿ, ಅವಮಾನಿಸುತ್ತಿದ್ದರು. ಮನೆಯೊಳೆ ಕೂಡಿಹಾಕುತ್ತಿದ್ದರು” ಎಂದು ವಿದ್ಯಾ ಆರೋಪಿಸಿದ್ದರು.

ದೇಹದಲ್ಲಿ ಪಾದರಸ ಇದ್ದಿದ್ದರಿಂದ ಆಕೆಯ ಮೂತ್ರಪಿಂಡಗಳು ಸೇರಿದಂತೆ ಬಹು ಅಂಗಗಳು ಹಾನಿಯಾಗಿದ್ದವು. ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಅಲ್ಲಿ ನಿಯಮಿತವಾಗಿ ಡಯಾಲಿಸಿಸ್‌ ಮಾಡಲಾಗುತ್ತಿತ್ತು. ಆದಾಗ್ಯೂ, ಆಕೆ 9 ತಿಂಗಳ ಜೀವನ್ಮರಣ ಹೋರಾಟದ ಬಳಿಕ ಇತ್ತೀಚೆಗೆ ಮೃತಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...