ಬೆಂಗಳೂರು | ಪಿಜಿಯಲ್ಲಿ ವಾಸವಿದ್ದ ಯುವತಿಗೆ ಚಾಕು ತೋರಿಸಿ ಕಿರುಕುಳ, ದರೋಡೆ

Date:

ಬೆಸ್ಕಾಂನಲ್ಲಿ ಸಹಾಯಕ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಯುವತಿಗೆ ಆಕೆಯ ನೆಲೆಸಿದ್ದ ಪಿಜಿಯಲ್ಲಿ ಚಾಕು ತೋರಿಸಿ ಕಿರುಕುಳ ನೀಡಿ, ದರೋಡೆ ಮಾಡಿರುವ ಘಟನೆ ಬೆಂಗಳೂರಿ ಜುಡೀಶಿಯಲ್‌ ಲೇಔಟ್‌ನಲ್ಲಿ ನಡೆದಿದೆ. ಆಕೆಗೆ ಕಿರುಕುಳ ನೀಡಿ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಸಂತ್ರಸ್ತ ಯುವತಿಯು ಯಲಹಂಕ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ಆಗಸ್ಟ್‌ 11ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಲಸದಿಂದ ಪಿಜಿಗೆ ಹಿಂದುರಿಗಿದೆ. ಆಗ, ಅಪರಿಚಿತ ವ್ಯಕ್ತಿ ಬಾಗಿಲು ತಟ್ಟಿದರು. ಸ್ಥಳೀಯರು ಇರಬಹುದೆಂದು ಬಾಗಿಲು ತೆರೆದೆ. ಒಳ ನುಗ್ಗಿದ ಆ ವ್ಯಕ್ತಿ, ನನ್ನ ಕುತ್ತಿಗೆಗೆ ಚಾಕು ಹಿಡಿದು, ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ಕಸಿದುಕೊಂಡಿದ್ದಾನೆ. ಅಲ್ಲದೆ, ಕಿರುಕುಳ ನೀಡಿದ್ದಾನೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಜೀವ ಹಾನಿಯ ಹೆದರಿಕೆಯಿಂದ ನಾನು ಏನೂ ಮಾಡಲಿಲ್ಲ. ಆದಾಗ್ಯೂ, ಬೆಡ್‌ ಮೇಲಿದ್ದ ಕೈಚೀಲದಲ್ಲಿ ಹಣವಿದೆ, ತೆಗೆದುಕೊಳ್ಳುವೆಂತೆ ಆತನಿಗೆ ಸೂಚಿಸಿದೆ. ಆತ, ಬ್ಯಾಗ್‌ ಕಡೆ ಕೈಹಾಕುವಾಗ ನಾನು ಆತನಿಂದ ತಪ್ಪಿಸಿಕೊಂಡು ಬಾತ್‌ರೂಮ್‌ಗೆ ಹೋಗಿ, ಬಾಗಿಲು ಲಾಕ್‌ ಮಾಡಿಕೊಂಡೆ. ಬಳಿಕ, ಎಚ್ಚರಿಕೆ ಅಲಾರಾಂ ಬಾರಿಸಿದೆ. ತಕ್ಷಣವೇ ಆತ ಓಡಿಹೋದ” ಎಂದು ಯುವತಿ ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳವಾದ ವಸ್ತುಗಳನ್ನು ಮತ್ತು ಆರೋಪಿಯನ್ನು ಪತ್ತೆಹಚ್ಚಲು ತನಿಖೆ ನಡೆಯತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...