ಬೆಂಗಳೂರು | ಸ್ನೇಹಿತನನ್ನೇ ಕೊಂದಿದ್ದ ಪಾತಕಿ; 14 ವರ್ಷದ ಬಳಿಕ ಆರೋಪಿ ಬಂಧನ

Date:

ತನ್ನ ಸ್ನೇಹಿತನನ್ನೇ ಕೊಲೆ ಮಾಡಿ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೃತ್ಯ ನಡೆದು ಬರೋಬ್ಬರಿ 14 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.

- Advertisement -

ಬೆಂಗಳೂರಿನ ಆರ್‌.ಟಿ ನಗರದಲ್ಲಿ ಘಟನೆ ನಡೆದಿತ್ತು. ಇದೀಗ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವೈಯಾಲಿಕಾವಲ್ ನಿವಾಸಿ, ಆರೋಪಿ ಜಾನ್ ಎಂದು ಗುರುತಿಸಲಾಗಿದೆ. ಆತ ಮಲ್ಲೇಶ್ವರಂನ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದನು. ಆಧಾರ್‌ ಕಾರ್ಡ್‌ ಸಂಖ್ಯೆಯ ಮೂಲಕ ಆತನನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

2011ರಲ್ಲಿ ಚೇತನ್ ಎಂಬಾತನ ಹತ್ಯೆಯಾಗಿತ್ತು. ಚೇತನ್‌ನನ್ನು ಆತನ ನಾಲ್ವರು ಗೆಳೆಯರೇ ಹತ್ಯೆಗೈದಿದ್ದರು. ಪ್ರಕರಣದಲ್ಲಿ ಅರುಣ್, ಚಾಟಿರಾಜ್ ಹಾಗೂ ಮಣಿಕಂಠನನ್ನು ಪೊಲೀಸರು ಈ ಹಿಂದೆಯೇ ಬಂಧಿಸಿದ್ದರು. ಆದರೆ, ಜಾನ್‌ ಸುಳಿವು ಸಿಕ್ಕಿರಲಿಲ್ಲ. ಬಂಧತ ಮೂವರ ವಿರುದ್ಧ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಮೂವರಿಗೂ ಜಾಮೀನು ಕೂಡ ದೊರೆತಿತ್ತು.

ಆದರೆ, ಜಾನ್‌ ಮಾತ್ರ ಪತ್ತೆಯಾಗಿರಲಿಲ್ಲ. ಗುಪ್ತಚರ ಮಾಹಿತಿಯಂತೆ ಜಾನ್‌ನ ಪೋಷಕರು ವೈಯ್ಯಾಲಿಕಾವಲ್‌ನಲ್ಲಿ ವಾಸುತ್ತಿದ್ದಾರೆ ಎಂದು ಪೊಲೀಸರು ಕಂಡುಕೊಂಡಿದ್ದರು. ಗ್ಯಾಸ್‌ ನೋಂದಣಿಗೆ ಜಾನ್‌ನ ಆಧಾರ್‌ ಕಾರ್ಡ್‌ ಲಿಂಕ್‌ ಆಗಿರುವುದನ್ನು ಕಂಡುಕೊಂಡ ಪೊಲೀಸರು ಗ್ಯಾಸ್‌ ಏಜೆನ್ಸಿ ಮೂಲಕ ಅತ ವೈಯ್ಯಾಲಿಕಾವಲ್‌ನಲ್ಲಿ ವಾಸಿಸುತ್ತಿದ್ದಾನೆ ಎಂಬುದನ್ನು ಖಾತ್ರಿ ಪಡಿಸಿಕೊಂಡಿದ್ದರು.

ಇದೀಗ, ಜಾನ್‌ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಜಾನ್‌ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...