ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹಿಂದಿ ತೆರವು; ಮಾಹಿತಿ ಫಲಕಗಳಲ್ಲಿ ಕನ್ನಡ ಬಳಕೆ

Date:

ದಕ್ಷಿಣ ರಾಜ್ಯಗಳ ಮೇಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಮತ್ತು ಹಿಂದಿ ಹೇರಿಕೆ ವಿರುದ್ಧದ ಹೋರಾಟಗಳು ನಡೆಯುತ್ತಿವೆ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡು, ಕರ್ನಾಟಕದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೇ ಹೊತ್ತಿನಲ್ಲಿ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಜಿಟಲ್‌ ಫಲಕಗಳಲ್ಲಿ ಹಿಂದಿಯನ್ನು ತೆಗೆದು, ಕನ್ನಡದಲ್ಲಿ ಮಾಹಿತಿ ನೀಡಲಾಗುತ್ತಿದೆ. ಏರ್‌ಪೋರ್ಟ್‌ನಲ್ಲಿ ಕನ್ನಡ ಫಲಕಗಳ ಅಳವಡಿಕೆಗೆ ಭಾರೀ ಮೆಚ್ಚುಗೆ, ಶ್ಲಾಘನೆ ವ್ಯಕ್ತವಾಗುತ್ತಿದೆ.

- Advertisement -

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನಗಳ ಆಗಮನ, ನಿರ್ಗಮನ ಸೇರಿದಂತೆ ಇನ್ನಿತರೆ ಮಾಹಿತಿ ನೀಡುವ ಡ್ಯಾಶ್‌ಬೋರ್ಡ್‌ಗಳಲ್ಲಿ ಹಿಂದಿಯನ್ನು ತೆಗೆಯಲಾಗಿದೆ. ಹಿಂದಿ ಬದಲಿಗೆ ಕನ್ನಡದಲ್ಲಿ ಮಾಹಿತಿ ನೀಡಲಾಗುತ್ತಿದೆ. ಸದ್ಯ, ವಿಮಾನ ನಿಲ್ದಾಣದಲ್ಲಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾಹಿತಿಯನ್ನು ಪ್ರಕಟಿಸಲಾಗುತ್ತಿದೆ. ಕನ್ನಡ ಅಳವಡಿಕೆ ಬಗ್ಗೆ ಕನ್ನಡಿಗರು ಶ್ಲಾಘಿಸುತ್ತಿರುವ ಹೊರತಾಗಿಯೂ ಅನ್ಯ ರಾಜ್ಯದವರು, ಅದರಲ್ಲೂ ಉತ್ತರ ಭಾರತದ ರಾಜ್ಯಗಳ ಪ್ರಯಾಣಿಕರು ಹಿಂದಿಯನ್ನು ಕೈಬಿಟ್ಟಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನ್ನಡೇತರರಿಗೆ ಮಾಹಿತಿ ಪಡೆಯಲು ಸಮಸ್ಯೆಯಾಗುತ್ತದೆ ಎಂದು ಹೇಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ವಿಮಾನ ನಿಲ್ದಾಣದಲ್ಲಿ ಪ್ರಕಟವಾಗುತ್ತಿದ್ದ ವೇಳಾಪಟ್ಟಿಯಲ್ಲಿ ಕನ್ನಡ ಭಾಷೆ ಬಳಸಿರುವ ಬಗ್ಗೆ ಟ್ವೀಟ್‌ ಮಾಡಿರುವ ನೆಟ್ಟಿಗರರೊಬ್ಬರು, “ಬೆಂಗಳೂರಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 1ರಲ್ಲಿ ಒಂದು ಅಚ್ಚರಿ ಕಾದಿತ್ತು. ಎಲ್ಲ ಡಿಜಿಟಲ್‌ ಬೋರ್ಡ್‌ಗಳಲ್ಲಿ ವಿಮಾನಗಳ ಆಗಮನ-ನಿರ್ಗಮನದ ಕುರಿತ ಮಾಹಿತಿಗಳನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರವೇ ನೀಡಲಾಗುತ್ತಿತ್ತು” ಎಂದು ಅಚ್ಚರಿ ಮತ್ತು ಹರ್ಷ ವ್ಯಕ್ತಪಡಿಸಿದ್ದಾರೆ.

“ಕನ್ನಡ ನಾಡಿನಲ್ಲಿ ಕನ್ನಡ ಬಳಕೆ, ಉತ್ತೇಜನ ತಪ್ಪಲ್ಲ. ಇಲ್ಲಿ ಕನ್ನಡವೇ ಸಾರ್ವಭೌಮ. ಹಿಂದಿಯನ್ನು ಬಳಸದಿರುವ ಕ್ರಮ ಸರಿಯಾಗಿದೆ” ಎಂದು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿಂದಿ ತೆಗೆದಿರುವ ಕುರಿತು ಆಕ್ಷೇಪಗಳೂ ವ್ಯಕ್ತವಾಗಿವೆ. “ಪ್ರಾದೇಶಿಕ ಭಾಷೆಯನ್ನು ಉತ್ತೇಜಿಸುವುದು ಮುಖ್ಯವಾದರೂ, ಪ್ರಮುಖ ಅಂತರರಾಷ್ಟ್ರೀಯ ದ್ವಾರದಲ್ಲಿ ಹಿಂದಿಯನ್ನು ಬಳಸದೇ ಇರುವುದು ತಪ್ಪು ಸಂದೇಶ ರವಾನಿಸುತ್ತದೆ. ಪ್ರವಾಸಿಗರು, ವಲಸಿಗರು ಹಾಗೂ ಇತರ ರಾಜ್ಯಗಳ ಪ್ರಯಾಣಿಕರ ಮೇಲೆ ಪರಿಣಾಮ ಬೀರಬಹುದು” ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...