ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳ: 3 ಲಕ್ಷ ರೂ. ದಂಡ ವಸೂಲಿ ಮಾಡಿದ ಬೆಂಗಳೂರು ಅಪಾರ್ಟ್‌ಮೆಂಟ್ ಅಸೋಸಿಯೇಷನ್!

Date:

ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣದ ಅಪಾರ್ಟ್‌ಮೆಂಟ್ ಮಾಲೀಕರ ಸಂಘವು ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳದಂತಹ ಪ್ರಕರಣಗಳನ್ನು ಸ್ವತಃ ವಿಚಾರಣೆ ನಡೆಸಿ ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ. ಇತ್ತೀಚೆಗೆ ಈ ಅಪರಾಧ ಬಹಿರಂಗವಾಗಿದ್ದು, ಕಾನೂನುಬಾಹಿರವಾಗಿ ದಂಡ ವಸೂಲಿ ಮಾಡಿ, ಅಪರಾಧವನ್ನು ಮುಚ್ಚಿಟ್ಟಿದ್ದಕ್ಕಾಗಿ ಕುಂಬಳಗೋಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಪ್ರಾವಿಡೆಂಟ್ ಸನ್‌ವರ್ತ್ ಅಪಾರ್ಟ್‌ಮೆಂಟ್ ಮಾಲೀಕರ ಸಂಘ, ಅಪಾರ್ಟ್‌ಮೆಂಟ್ ಆವರಣಕ್ಕೆ ಭದ್ರತಾ ಸೇವೆಗಳನ್ನು ಒದಗಿಸುವ ಸಂಸ್ಥೆಯಾದ ಟೈಕೋ ಸೆಕ್ಯುರಿಟಿ ಸರ್ವಿಸಸ್, ಟೈಕೋ ಸೆಕ್ಯುರಿಟಿ ಸರ್ವಿಸಸ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಬ್ಬಂದಿ, ಮುಖ್ಯ ಭದ್ರತಾ ಅಧಿಕಾರಿ ಚಂದ್ರಹಾಸ ಮತ್ತು ಸಂಘದ ಅಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ ಮತ್ತು ಸಂಘದ ಸದಸ್ಯರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಕೋಲಾರ | ಚುರುಕಾದ RTO ತಪಾಸಣೆ; ಒಂದೇ ತಿಂಗಳಲ್ಲಿ 680 ಕೇಸ್, ₹6 ಲಕ್ಷ ದಂಡ ವಸೂಲಿ

ಈ ಸಂಬಂಧ ಅನಾಮಧೇಯ ಅರ್ಜಿ ದಾಖಲಾಗಿದ್ದು, ಡಿಸೆಂಬರ್ 16ರಂದು ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸ್ ದೂರಿನ ಪ್ರಕಾರ, ಸಂಘವು ನಿಯಮವನ್ನು ದುರುಪಯೋಗಪಡಿಸಿಕೊಂಡು ಮಾದಕವಸ್ತು ಸೇವನೆ ಮತ್ತು ಅಕ್ರಮ ಮಾದಕವಸ್ತು ಬಳಕೆ, ಕಳ್ಳತನ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಅಪರಾಧಗಳಲ್ಲಿ ತೊಡಗಿರುವ ನಿವಾಸಿಗಳಿಂದ ಮೂರು ತಿಂಗಳಲ್ಲಿ ಒಟ್ಟು 3.30 ಲಕ್ಷ ರೂ. ದಂಡವನ್ನು ಸಂಗ್ರಹಿಸಿದೆ!

ಭದ್ರತಾ ಅಧಿಕಾರಿ ಚಂದ್ರಹಾಸ ಯಾವುದೇ ಅನುಮತಿಯಿಲ್ಲದೆ ಅಪಾರ್ಟ್‌ಮೆಂಟ್‌ಗಳಿಗೆ ಪ್ರವೇಶಿಸಿ, ಶೋಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ದಂಡವನ್ನು ಸಂಗ್ರಹಿಸಿ, ನಂತರ ವಶಪಡಿಸಿಕೊಂಡ ಮಾದಕವಸ್ತುಗಳನ್ನು ನಾಶಪಡಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಎಫ್‌ಐಆರ್ ಪ್ರಕಾರ ಸಂಘವು 2023ರ ಜೂನ್‌ನಿಂದ ಸಣ್ಣ ಸಮಸ್ಯೆಗಳಿಗೂ ನಿವಾಸಿಗಳಿಂದ ದಂಡವನ್ನು ಸಂಗ್ರಹಿಸುತ್ತಿದೆ. ಕೆಲವು ಬಾರಿ ಮಾತ್ರ ದಂಡವನ್ನು ಸಂಗ್ರಹಿಸಿದ ಭದ್ರತಾ ಸಂಸ್ಥೆಯು ಸಂಘದ ಬ್ಯಾಂಕ್ ಖಾತೆಗೆ ಮೊತ್ತವನ್ನು ವರ್ಗಾಯಿಸಿದೆ.

ಸದ್ಯ ಈ ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ನೆಟ್ಟಿಗರು ಅಪಾರ್ಟ್‌ಮೆಂಟ್‌ ಅಸೋಸಿಯೇಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೈಂಗಿಕ ಕಿರುಕುಳ, ಮಾದಕ ದ್ರವ್ಯ ಸೇವನೆಯಂತಹ ಗಂಭೀರ ಪ್ರಕರಣಗಳನ್ನು ಪೊಲೀಸರಿಗೆ ತಿಳಿಸದೆ ಕೇವಲ ದಂಡ ವಸೂಲಿ ಮಾಡಿ ಆರೋಪಿಗಳನ್ನು ಬಿಟ್ಟಿರುವುದು ಅಪಾಯಕಾರಿ ಬೆಳವಣಿಗೆ ಎಂದು ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಜತೆಗೆ ಪೊಲೀಸರ ಕ್ರಮಕ್ಕೆ ಶ್ಲಾಘನೆಯೂ ವ್ಯಕ್ತವಾಗಿದೆ.

ಈ ರೀತಿ ಹಲವು ಅಪಾರ್ಟ್‌ಮೆಂಟ್ ಅಸೋಸಿಯೇಶನ್‌ಗಳು ಕಾರ್ಯನಿರ್ವಹಿಸುತ್ತಿದ್ದು ಅದರ ವಿರುದ್ಧ ಕ್ರಮಕೈಗೊಳ್ಳುವುದು ಅತ್ಯಗತ್ಯ ಎಂದು ನೆಟ್ಟಿಗರು ಅಭಿಪ್ರಾಯಿಸಿದ್ದಾರೆ. ಹಾಗೆಯೇ ನಿವಾಸಿಗಳ ಮೂಲಭೂತ ಹಕ್ಕುಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಕೆಲವು ಅಪಾರ್ಟ್‌ಮೆಂಟ್‌ಗಳಲ್ಲಿ ಜನರ ವೈಯಕ್ತಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಲಾಗುತ್ತದೆ, ಅಧಿಕಾರವಿಲ್ಲದಿದ್ದರೂ ದಂಡ ವಿಧಿಸಲಾಗುತ್ತದೆ. ಇವೆಲ್ಲವೂ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ನೆಟ್ಟಿಗರ ವಾದವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...