ನಾಳೆ (ಸೆ.11) ಬೆಂಗಳೂರು ಬಂದ್: ಇಂದು ರಾತ್ರಿಯಿಂದಲೇ ಖಾಸಗಿ ಸಾರಿಗೆ ವಾಹನಗಳ ಸಂಚಾರ ಸ್ಥಗಿತ

Date:

ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ಜಾರಿಯಿಂದ ಆಗಿರುವ ನಷ್ಟಕ್ಕೆ ಪರಿಹಾರ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ (ಸೆ.11) ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮತ್ತು ಕರ್ನಾಟಕ ಚಾಲಕರ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ.       

ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಖಾಸಗಿ ಬಸ್ ನಿರ್ವಾಹಕರು ಮತ್ತು ಆಟೋ ರಿಕ್ಷಾ ಚಾಲಕರು ಸೇರಿದಂತೆ ಒಟ್ಟು 32 ಖಾಸಗಿ ಸಾರಿಗೆ ಸಂಘಗಳನ್ನು ಒಳಗೊಂಡಿರುವ ಒಕ್ಕೂಟವು ಸೆಪ್ಟೆಂಬರ್ 10 ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ ಮಧ್ಯರಾತ್ರಿಯವರೆಗೆ ರಸ್ತೆಗಿಳಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದೆ. ಶಕ್ತಿ ಯೋಜನೆಯು ತಮ್ಮ ವೃತ್ತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಪದೇ ಪದೇ ಚರ್ಚೆಗಳ ಹೊರತಾಗಿಯೂ ರಾಜ್ಯ ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎನ್ನುವುದು ಅವರ ವಾದ.

ಖಾಸಗಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಂದ್ ಕರೆಗೆ ಖಾಸಗಿ ಶಾಲಾ ಬಸ್‌ಗಳ ಚಾಲಕರು, ವ್ಯಾನ್ ಮಾಲೀಕರು ಹಾಗೂ ಇತರೆ ವಾಹನಗಳ ಚಾಲಕರೂ ಕೂಡ ಬೆಂಬಲ ನೀಡಿದ್ದು, ಇದು ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ನಗರದ ಕೆಲ ಶಾಲೆಗಳು ಸೋಮವಾರ ರಜೆ ಘೋಷಣೆ ಮಾಡಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಂದ್ ಪ್ರಯುಕ್ತ ಖಾಸಗಿ ಸಾರಿಗೆ ವಾಹನಗಳ ಮಾಲೀಕರು ಮತ್ತು ಚಾಲಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಜಯನಗರ, ಕಲಾಸಿಪಾಳ್ಯ ಮತ್ತು ಕಂಟೋನ್ಮೆಂಟ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಬಂದ್‌ಗೆ ಬೆಂಬಲ ನೀಡುವಂತೆ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಮನವಿ ಮಾಡಿದ್ದಾರೆ.

ಖಾಸಗಿ ವಾಹನಗಳ ಬಂದ್‌ ಹಿನ್ನೆಲೆಯಲ್ಲಿ ಬಿಎಂಟಿಸಿ ಹೆಚ್ಚುವರಿ ಬಸ್‌ಗಳನ್ನು ಬಿಡಲು ತಯಾರಿ ನಡೆಸಿದೆ. ಮುಷ್ಕರದಿಂದಾಗಿ ಉಂಟಾಗಿರುವ ಹೆಚ್ಚುವರಿ ಬೇಡಿಕೆಯನ್ನು ಪೂರೈಸಲು 50 ವೋಲ್ವೋ ಸೇರಿದಂತೆ 500 ಹೆಚ್ಚುವರಿ ಬಸ್ ನಿಯೋಜಿಸಲು ಬಿಎಂಟಿಸಿ ಯೋಜಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೇಡಿಕೆ ಹೆಚ್ಚಾದರೆ ನಿಗಮವು ತನ್ನ ವಿಮಾನ ನಿಲ್ದಾಣ ಬಸ್ ಸೇವೆಗಳನ್ನು ಹೆಚ್ಚಿಸಲು ಪರಿಗಣಿಸುವುದಾಗಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ: ಚಂದ್ರಬಾಬು ನಾಯ್ಡು ಬಂಧನ: ಆಂಧ್ರದಲ್ಲಿ ಮುಂದೇನಾಗಲಿದೆ? 

ಹೆಚ್ಚಿನ ಖಾಸಗಿ ವಾಹನಗಳು ರಸ್ತೆಗಿಳಿಯಬಹುದಾದರೂ, ಬೆಂಗಳೂರಿನಲ್ಲಿ ಒಟ್ಟಾರೆ ಸಂಚಾರವು ಸಾಮಾನ್ಯಕ್ಕಿಂತ ಕಡಿಮೆ ಇರಬಹುದು. ಅಂದರೆ ಸಂಚಾರದ ಹರಿವು ಸಾಮಾನ್ಯಕ್ಕಿಂತ ಸ್ವಲ್ಪ ವೇಗವಾಗಿರಬಹುದು ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.  

ಏನಿರುವುದಿಲ್ಲ: ಆಟೋ ರಿಕ್ಷಾಗಳು, ಟ್ಯಾಕ್ಸಿಗಳು, ವಿಮಾನ ನಿಲ್ದಾಣ ಟ್ಯಾಕ್ಸಿಗಳು, ಮ್ಯಾಕ್ಸಿ ಕ್ಯಾಬ್‌ಗಳು, ಖಾಸಗಿ ಬಸ್ಸುಗಳು, ಶಾಲಾ ವಾಹನಗಳು ಮತ್ತು ಕಾರ್ಪೊರೇಟ್ ವಾಹನಗಳು ರಸ್ತೆಗಿಳಿಯುವುದಿಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಂದರ್ಯ ಜಗದೀಶ್ ಆತ್ಮಹತ್ಯೆ | ಬಿಸಿನೆಸ್ ಪಾಲುದಾರರ ವಿರುದ್ಧ ಎಫ್‌ಐಆರ್‌ ದಾಖಲು

ಕನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಬೆಂಗಳೂರು ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆ ಮಾಡದ ಸರ್ಕಾರ: ಆರ್.ಅಶೋಕ್

ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ...

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು...

ಬೆಂಗಳೂರು | ಪ್ರಬುದ್ಧಾ ಕೊಲೆ ಪ್ರಕರಣ; 2 ಸಾವಿರಕ್ಕಾಗಿ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ ಅಪ್ರಾಪ್ತ

ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರ...