ಬೆಂಗಳೂರು ಮೂಲದ ಸೇನಾಧಿಕಾರಿಗೆ ವಿಶ್ವಸಂಸ್ಥೆ ಪ್ರಶಸ್ತಿ!

Date:

ಬೆಂಗಳೂರು ಮೂಲದ ಭಾರತೀಯ ಸೇನಾಧಿಕಾರಿ ಮೇಜರ್‌ ಸ್ವಾತಿ ಶಾಂತಕುಮಾರ್‌ ಅವರಿಗೆ ವಿಶ್ವಸಂಸ್ಥೆ ನೀಡುವ ‘ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ–2025′ ಲಭಿಸಿದೆ.

- Advertisement -

ವಿವಿಧೆಡೆ ಅತ್ಯುತ್ತಮ ಕಾರ್ಯಾಚರಣೆ ಮತ್ತು ಸೇವೆ ಸಲ್ಲಿಸಿದ ಸೇನಾ ಅಧಿಕಾರಿಗಳನ್ನು ಗುರುತಿಸಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಈ ಪ್ರಶಸ್ತಿ ನೀಡುತ್ತಾರೆ. ಈ ಬಾರಿ, ಸ್ವಾತಿ ಅವರನ್ನು ಆಯ್ಕೆ ಮಾಡಿರುವುದಾಗಿ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್‌ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸ್ವಾತಿ ಅವರು ಸಂಘರ್ಷ ಪೀಡಿತ ದಕ್ಷಿಣ ಸೂಡನ್‌ನಲ್ಲಿ ಮಹಿಳೆಯರ ರಕ್ಷಣೆ, ಸಮುದಾಯದ ನೆಮ್ಮದಿಗಾಗಿ ನಡೆಸಿದ ಕಾರ್ಯಕ್ರಮಗಳಿಗಾಗಿ ಸ್ವಾತಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ‘ಸಮಾನ ಪಾಲುದಾರಿಕೆ–ಶಾಶ್ವತ ಶಾಂತಿ’ ಎಂಬುದು ಸ್ವಾತಿ ಅವರ ಧ್ಯೇಯವಾಗಿದೆ. ಅವರು ಶಾಂತಿ ರಕ್ಷಣಾ ಕಾರ್ಯಾಚರಣೆಗಳ ಮುಂದಾಳತ್ವದಲ್ಲಿ ಲಿಂಗ ಸಮಾನತೆಗೆ ಒತ್ತು ನೀಡಿದ್ದಾರೆ ಎಂದು ಗುಟೆರೆಸ್‌ ಶ್ಲಾಘಿಷಿಸಿದ್ದಾರೆ.

ಪ್ರಶಸ್ತಿಗೆ ಹಲವಾರು ಹೆಸರುಗಳನ್ನು ನಾನಾ ಸಂಸ್ಥೆಗಳು ನಾಮನಿರ್ದೇಶನ ಮಾಡಿದ್ದವು. ಶಾಂತಿ ರಕ್ಷಣಾ ಕಾರ್ಯಚರಣೆಗಳಲ್ಲಿ ಕೆಲಸ ಮಾಡಿರುವವರ ಹೆಸರುಗಳನ್ನು ಪಟ್ಟಿ ಮಾಡಲಾಗಿತ್ತು. ಅವರ ಪೈಕಿ, ಅಂತಿಮ ಪಟ್ಟಿಗೆ ನಾಲ್ವರನ್ನು ಆರಿಸಲಾಗಿತ್ತು. ಈ ನಾಲ್ವರಲ್ಲಿ ಯಾರನ್ನು ಪ್ರಶಸ್ತಿಗೆ ಆಯ್ಕೆ ಮಾಡಬೇಕೆಂದು ಮತದಾನ ನಡೆದಿದ್ದು, ಅತ್ಯಧಿಕ ಮತಗಳು ಸ್ವಾತಿ ಅವರಿಗೆ ಚಲಾವಣೆಯಾಗಿದ್ದು, ಅವರನ್ನು ಅಯ್ಕೆ ಮಾಡಲಾಗಿದೆ ಎಂದು ವಿಶ್ವಸಂಸ್ಥೆಯ ಮೂಲಗಳು ತಿಳಿಸಿವೆ.

ಸ್ವಾತಿ ಅವರು ಬೆಂಗಳೂರಿನ ಲಿಂಗರಾಜಪುರದವರು. ಎಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ. ಎಂಟು ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಒಂದೂವರೆ ವರ್ಷದಿಂದ ದಕ್ಷಿಣ ಸೂಡನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿ ಸೇವಾನಿರತರಾಗಿದ್ದಾರೆ.

ಅವರು ಕಾರ್ಯಾಚರಣೆ ವೇಳೆ ತಳಮಟ್ಟದ ಸಂವಹನ, ಜನರೊಂದಿಗೆ ಸೇನೆಯ ನಂಟನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ. ಅವರ ಕೆಲಸದಿಂದಾಗಿ, ಸುಡಾನ್‌ನ 5,000ಕ್ಕೂ ಹೆಚ್ಚು ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಾಣವಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...