ಬೆಂಗಳೂರು | ಬಿಜೆಪಿಗರ ಅನೈತಿಕ ಪೊಲೀಸ್‌ಗಿರಿ; ನಿರಾಶ್ರಿತರನ್ನು ಅಕ್ರಮ ವಲಸಿಗರೆಂದು ಆರೋಪಿಸಿ ಕಿರುಕುಳ

Date:

Advertisements

ಬೆಂಗಳೂರಿನ ಹೊರವಲಯದಲ್ಲಿರುವ ಮಹದೇವಪುರದ ವಿವಿಧ ಸ್ಥಳಗಳಲ್ಲಿ ಗುಡುಸಲುಗಳನ್ನು ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತರ ಮೇಲೆ ಬಿಜೆಪಿಗರು ಅನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದಾರೆ. ರಾಜ್ಯ ಮತ್ತು ದೇಶದ ಇತರ ಭಾಗಗಳಿಂದ ಬಂದು ನೆಲೆಸಿರುವ ನಿರಾಶ್ರಿತರನ್ನುಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಆರೋಪಿಸಿದ್ದಾರೆ. ಅವರನ್ನು ಒಕ್ಕಲೆಬ್ಬಿಸಲು ಯತ್ನಿಸುತ್ತಿದ್ದಾರೆ.

ಮಹದೇವಪುರ ಬಿಜೆಪಿ ವಿಭಾಗದ ಅಧ್ಯಕ್ಷ ಶ್ರೀಧರ್ ರೆಡ್ಡಿ ಮತ್ತು ಕೆಲವರು ಕಾರ್ಯಕರ್ತರು ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತೂಬರಹಳ್ಳಿ, ಸಿದ್ದಾಪುರ ಹಾಗೂ ವಿವಿಧ ಸ್ಥಳಗಳಲ್ಲಿ ಬಾಡಿಗೆ ಜಾಗದಲ್ಲಿ ಶೆಡ್‌ಗಳನ್ನು ಹಾಕಿಕೊಂಡು ವಾಸಿಸುತ್ತಿರುವವರ ಮನೆಗಳಲ್ಲಿ ಅಕ್ರಮವಾಗಿ ಶೋಧ ನಡೆಸಿದ್ದಾರೆ. ಅಲ್ಲಿನ ನಿವಾಸಿಗಳ ಆಧಾರ್ ಕಾರ್ಡ್, ಮತದಾನದ ಗುರುತಿನ ಚೀಟಿ ಸೇರಿದಂತೆ ಕೆಲವು ದಾಖಲೆಗಳನ್ನು ಪರಿಶೀಲಿಸಿ, ಅವರನ್ನು ಹೊರಹಾಕುವುದಾಗಿ ಮತ್ತು ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ, “ಮಹದೇವಪುರ ಕ್ಷೇತ್ರದಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಜೆಗಳನ್ನು ಗುರುತಿಸಿ, ಅವರನ್ನು ಬಾಂಗ್ಲಾಗೆ ವಾಪಾಸ್‌ ಕಳಿಸಲು ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಅಭಿಯಾನ ಕೈಗೊಂಡಿದ್ದೇವೆ. ಕ್ಷೇತ್ರದಲ್ಲಿ ನಾಲ್ಕು ತಂಡಗಳನ್ನು ರಚಿಸಿಕೊಂಡು ಶೋಧ ನಡೆಸುತ್ತಿದ್ದೇವೆ” ಎಂದು ಶೀಧರ್ ರೆಡ್ಡಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

Advertisements

ಈ ಲೇಖನ ಓದಿದ್ದೀರಾ?: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ | ಸುಪ್ರೀಂ ಆದೇಶ: ಪರ-ವಿರೋಧಗಳ ವಾಗ್ವಾದ

ಬಿಜೆಪಿಗರು ದಾಂಧಲೆ ನಡೆಸಿರುವ ಸ್ಥಳಗಳಿಗೆ ಕೆಲವು ವಕೀಲರು ಮತ್ತು ಸಂಘಟನೆಯ ಮುಖಂಡರು ಭೇಟಿ ನೀಡಿದ್ದು, ಅಲ್ಲಿ ವಾಸಿಸುತ್ತಿರುವ ನಿರಾಶ್ರಿತರ ಜನರು ಮತ್ತು ಅವರಿಗೆ ಬಾಡಿಗೆಗೆ ಭೂಮಿ ನೀಡಿದ ಭೂಮಾಲೀಕರೊಂದಿಗೆ ಚರ್ಚೆ ನಡೆಸಿದ್ದಾರೆ.

ನಿರಾಶ್ರಿತರನ್ನು ಭೇಟಿ ಮಾಡಿದ ಸಾಮಾಜಿಕ ಹೋರಾಟಗಾರರು
ನಿರಾಶ್ರಿತರನ್ನು ಭೇಟಿ ಮಾಡಿ ಚರ್ಚಿಸಿದ ಸಾಮಾಜಿಕ ಹೋರಾಟಗಾರರು

ಈದಿನ.ಕಾಮ್‌ ಜೊತೆ ಮಾತನಾಡಿದ ಕರ್ನಾಟಕ ಜನಶಕ್ತಿಯ ಚೆನ್ನಮ್ಮ, “ತೂಬರಹಳ್ಳಿ, ಸಿದ್ದಾಪುರ ಹಾಗೂ ಇತರ ಪ್ರದೇಶಗಳಲ್ಲಿ ಗುಡಿಸಲು ಹಾಕಿಕೊಂಡು ವಾಸಿಸುತ್ತಿರುವ ಯಾರೊಬ್ಬರೂ ಬಾಂಗ್ಲಾದಿಂದ ಅಕ್ರಮವಾಗಿ ಬಂದಿರುವವರಲ್ಲ. ಅವರೆಲ್ಲರೂ ಅಸ್ಸಾಂ ಸೇರಿದಂತೆ ದೇಶದ ನಾನಾ ಭಾಗಗಳು ಮತ್ತು ಕರ್ನಾಟಕದ ಕೆಲವ ಭಾಗಗಳಿಂದ ಬಂದಿರುವ ನಿರಾಶ್ರಿತರು. ಅವರನ್ನು ಅಕ್ರಮ ಬಾಂಗ್ಲಾ ವಲಸಿಗರೆಂದು ಆರೋಪಿಸಿ, ಅವರಿಗೆ ಕಿರುಕುಳ ನೀಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಭಾನುವಾರ ಮತ್ತೆ, ಸ್ಥಳಕ್ಕೆ ಭೇಟಿ ನೀಡುತ್ತೇವೆ. ನಿವಾಸಿಗಳೊಂದಿಗೆ ಚರ್ಚಿಸಿ, ಕಾನೂನಾತ್ಮಕವಾಗಿ ಅವರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X