ಬೆಂಗಳೂರು | ಆರೋಪಿಯನ್ನು ರಕ್ಷಿಸಲು ಲಂಚ: ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಮಹಿಳಾ PSI

Date:

ಪ್ರಕರಣವೊಂದರಿಂದ ಆರೋಪಿಯನ್ನು ರಕ್ಷಿಸಲು ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐವೊಬ್ಬರು ಲೋಕಾಯುಕ್ತರಿಗೆ ಸಿಕ್ಕಿಹಾಕಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗೋಂವಿದಪುರ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

- Advertisement -

ಪ್ರೀತಿಸಿ ವಂಚಿಸಿದ್ದ ಮತ್ತು ಯುವತಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಎಚ್‌ಬಿಆರ್‌ ಲೇಔಟ್ ನಿವಾಸಿ ಮೊಹಮ್ಮದ್ ಯೂನಸ್‌ನನ್ನು ಬಂಧಿಸಲಾಗಿತ್ತು. ಆತನನ್ನು ಪ್ರಕರಣದಿಂದ ಬಜಾವ್ ಮಾಡಲು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್‌ ಸಲ್ಲಿಸಲು ಆರೋಪಿಯಿಂದ ಪಿಎಸ್‌ಐ ಸಾವಿತ್ರಿ ಅವರು ಲಂಚ ಕೇಳಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆರೋಪಿ ಯೂನಸ್‌ ಬಳಿ ಪಿಎಸ್‌ಐ ಸಾವಿತ್ರಿ ಅವರು 1.25 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಯೂನಸ್‌ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಕೊಂಡಿದ್ದ ಲೋಕಾಯುಕ್ತ ಪೊಲೀಸರು, ಯೂನಸ್ ಬಳಿ ಸಾವಿತ್ರಿ ಅವರು ಲಂಚ ಪಡೆಯುವಾಗ ‘ರೆಡ್‌ಹ್ಯಾಂಡ್‌’ಆಗಿ ಹಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...