ಬೆಂಗಳೂರು | 80ಕ್ಕೂ ಹೆಚ್ಚು ಒಣ ತ್ಯಾಜ್ಯ ಸಂಗ್ರಹ ಕೇಂದ್ರಗಳನ್ನು ಮುಚ್ಚಿದ BSWML; 118 ಘಟಕಗಳಿಗೆ ಹೊಸ ಟೆಂಡರ್

Date:

ಬೆಂಗಳೂರಿನಲ್ಲಿ 80ಕ್ಕೂ ಹೆಚ್ಚು ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರಗಳು (DWCCs) ಸ್ಥಗಿತಗೊಂಡಿವೆ. 118 ಘಟಕಗಳಿಗೆ ಹೊಸ ಟೆಂಡರ್‌ ಕರೆಯಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ತಿಳಿಸಿದೆ.

- Advertisement -

ನಗರದಲ್ಲಿ 198 DWCCಗಳಿದ್ದವು. ಅವುಗಳ ಪೈಕಿ, 80 ಘಟಕಗಳನ್ನು ಮುಚ್ಚಲಾಗಿದೆ. ಈಗ, ಸುಮಾರು 120 DWCCಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳ ನಿರ್ವಹಣೆಗಾಗಿ BSWML ಟೆಂಡರ್‌ಗಳನ್ನು ಆಹ್ವಾನಿಸಲಾಗುತ್ತದೆ ಎಂದು BSWML ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗುರುತಿಸಲಾದ 80 DWCCsಗಳ ಟೆಂಡರ್‌ 2020ರಲ್ಲಿಯೇ ಕೊನೆಗೊಂಡಿದೆ. ಆದರೂ, ಅವುಗಳಲ್ಲಿ ಕೆಲವು ಘಟಕಗಳು ಕಾರ್ಯಾಚರಣೆಯನ್ನು ಮುಂದುವರೆಸಿದ್ದವು. ಈಗ, ಅವುಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.

ಈಗ 118 DWCCs ಘಟಕಗಳಿಗೆ ಹೊಸ ಟೆಂಡರ್‌ ಕರೆಯಲು ನಿರ್ಧರಿಸಲಾಗಿದೆ. ಒಂದು ವಾರದೊಳಗೆ ಘಟಕಗಳ ನಿರ್ವಹಣೆಗಾಗಿ ತ್ಯಾಜ್ಯ ತೆಗೆಯುವವರು, ಸ್ವಸಹಾಯ ಗುಂಪುಗಳು (SHG), ಸರ್ಕಾರೇತರ ಸಂಸ್ಥೆಗಳು ಹಾಗೂ ಗುತ್ತಿಗೆದಾರರಿಗೆ ಟೆಂಡರ್‌ ನೀಡಲಾಗುತ್ತದೆ ಎಂದು BSWML ವಿವರಿಸಿದೆ.

ಟೆಂಡರ್‌ ಪ್ರಕ್ರಿಯೆ ಮುಗಿದ ನಂತರ, ಒಣ ತ್ಯಾಜ್ಯದ ತ್ಯಾಜ್ಯ ಸಂಗ್ರಹಣೆ ಮತ್ತು ವಿಂಗಡಣೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು BSWML ವ್ಯವಸ್ಥಾಪಕ ನಿರ್ದೇಶಕ ಕರೀಗೌಡ ತಿಳಿಸಿದ್ದಾರೆ.

“DWCCಗಳ ಕಾರ್ಯಕ್ಷಮತೆಯನ್ನು BSWML ಮೇಲ್ವಿಚಾರಣೆ ಮಾಡಬೇಕು. ಬೆಂಗಳೂರು ದಿನಕ್ಕೆ 6,500 ಟನ್ ತ್ಯಾಜ್ಯವನ್ನು ಉತ್ಪಾದಿಸುತ್ತದೆ. ಇದರಲ್ಲಿ ಸುಮಾರು 55-60% ಹಸಿ ತ್ಯಾಜ್ಯ, 30-35% ಒಣ ತ್ಯಾಜ್ಯ ಹಾಗೂ ಉಳಿದವು ವೈದ್ಯಕೀಯ ಮತ್ತು ಇತರ ತ್ಯಾಜ್ಯಗಳು. ಅವುಗಳನ್ನು ವೈಜ್ಞಾನಿಕವಾಗಿ ಸಂಸ್ಕರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಂಗ್ರಹಿಸಲಾಗುವ ಒಣ ತ್ಯಾಜ್ಯವನ್ನು ಏನು ಮಾಡಲಾಗುತ್ತಿದೆ ಎಂಬುದನ್ನು BSWML ಟ್ರ್ಯಾಕ್ ಮಾಡಬೇಕು” ಎಂದು ಘನತ್ಯಾಜ್ಯ ನಿರ್ವಹಣಾ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತ ವಿ. ರಾಮಪ್ರಸಾದ್ ಹೇಳಿರುವುದಾಗಿ ‘ಟಿಎನ್‌ಐಇ’ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...