ಬೆಂಗಳೂರು | ಸ್ಲಂ ನಿವಾಸಿಗಳ ಮೇಲೆ ಅಧಿಕಾರಿಗಳ ದರ್ಪ; 300 ಕುಟುಂಬಗಳು ಬೀದಿಪಾಲು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಬುಲ್ಡೋಜರ್‌ಗಳು ಸದ್ದು ಮಾಡಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಸ್ಲಂ ನಿವಾಸಿಗಳ 300ಕ್ಕೂ ಹೆಚ್ಚು ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ಸುಮಾರು 300 ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ.

- Advertisement -

ಬೆಂಗಳೂರಿನ ಯಲಹಂಕ ವಲಯದಲ್ಲಿರುವ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯ ನಿವಾಸಿಗಳ ಮೇಲೆ ಅಧಿಕಾರಿಗಳು ಅಧಿಕಾರ ದರ್ಪ ಮೆರೆದಿದ್ದಾರೆ. ನಾಲ್ಕು ಜೆಸಿಬಿಗಳೊಂದಿಗೆ ಪೊಲೀಸರ ಸಮ್ಮಖದಲ್ಲಿ ಕಾಲೋನಿಗೆ ನುಗ್ಗಿದ ಅಧಿಕಾರಿಗಳು, ಮನೆಗಳನ್ನು ಉರುಳಿಸಿದ್ದಾರೆ. ಸುಮಾರು 25-30 ವರ್ಷಗಳಿಂದ ಫಕೀರ್ ಕಾಲೋನಿಯಲ್ಲಿ ಪಕ್ಕಾ ಮನೆಗಳನ್ನು ನಿರ್ಮಿಸಿಕೊಂಡು ಬದುಕುತ್ತಿದ್ದವರ ಮನೆಗಳು ಧ್ವಂಸಗೊಂಡಿವೆ. ಸುಮಾರು 3,000ಕ್ಕೂ ಹೆಚ್ಚು ಜನರು ಬೀದಿಪಾಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
image 14 5

ಈ ಕುಟುಂಬಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು, ಮನೆ ನಿರ್ಮಿಸಿಕೊಂಡಿದ್ದರೆಂದು ಅಧಿಕಾರಿಗಳು ಆರೋಪಿಸಿದ್ದಾರೆ. ಜಾಗವನ್ನು ತೆರವುಗೊಳಿಸಲು ಮನೆಗಳನ್ನು ನೆಲಸಮ ಮಾಡಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಈ ಪ್ರದೇಶದಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸಲು ಸರ್ಕಾರವೇ ಅವಕಾಶ ನೀಡಿತ್ತು. ಸರ್ಕಾರದ ಸೂಚನೆಯಂತೆಯೇ ನಾವಿಲ್ಲಿ ಮನೆ ನಿರ್ಮಿಸಿಕೊಂಡು ಬದುಕುತ್ತಿದ್ದೇವೆಂದು ಸಂತ್ರಸ್ತ ನಿವಾಸಿಗಳು ಹೇಳಿಕೊಂಡಿದ್ದಾರೆ.

ಮುಖ್ಯವಾಗಿ, ಒಂದು ವೇಳೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಲ್ಲಿ, ತೆರವುಗೊಳಿಸಲು ಮೂರು ತಿಂಗಳ ಮುನ್ನವೇ ನೋಟಿಸ್‌ ನೀಡಬೇಕು. ಭೂಮಿಯನ್ನು ಖಾಲಿ ಮಾಡುವಂತೆ ಸೂಚಿಸಬೇಕು. ಬಳಿಕ, ನಂತರದ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿಯಮವಿದೆ. ಆದರೆ, ಫಕೀರ್ ಕಾಲೋನಿಯ ನಿವಾಸಿಗಳಿಗೆ ಈವರೆಗೆ ಯಾವುದೇ ನೋಟಿಸ್‌ ನೀಡಲಾಗಿಲ್ಲ. ಅಧಿಕಾರಿಗಳು ಏಕಾಏಕಿ ಕಾಲೋನಿಗೆ ನುಗ್ಗಿ, ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

image 15 3

ಈ ಲೇಖನ ಓದಿದ್ದೀರಾ?: ದಾರುಣವಾಗಿದೆ ಬಾಲ ನ್ಯಾಯ ವ್ಯವಸ್ಥೆ; ನ್ಯಾಯಕ್ಕಾಗಿ ಕಾಯುತ್ತಿದ್ದಾರೆ 50,000 ಬಾಲಾಪರಾಧಿಗಳು

ಅಧಿಕಾರಿಗಳ ದರ್ಪದ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ದುಡಿವ ಜನರ ವೇದಿಕೆಯ ಮುಖಂಡೆ ಪೂಜಾ, “ಬಡ ಜನರ ಮೇಲೆ ಅಧಿಕಾರಿಗಳು ದರ್ಪ ಮೆರೆದಿದ್ದಾರೆ. ಯಾವುದೇ ನೋಟಿಸ್‌ ಕೊಡದೆ ಏಕಾಏಕಿ ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ತೆರವು ಕಾರ್ಯಾಚರಣೆಗೆ ನಿಖರವಾದ ಕಾರಣವನ್ನೂ ಕೊಟ್ಟಿಲ್ಲ. ಮನೆಯಲ್ಲಿದ್ದ ವಸ್ತುಗಳು, ದಾಖಲೆಗಳು ಹಾಗೂ ಮಕ್ಕಳು-ವೃದ್ಧರು ಸ್ಥಳದಿಂದ ದೂರ ಹೋಗುವುದಕ್ಕೂ ಅವಕಾಶ ಕೊಟ್ಟಿಲ್ಲ. ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಎಲ್ಲರೂ ಬೀದಿಪಾಲಾಗಿದ್ದಾರೆ” ಎಂದು ಹೇಳಿದ್ದಾರೆ.

“ಬಡ ಜನರ ಅಳಲು ಕೇಳುವಂತೆ, ನೆರವು ನೀಡುವಂತೆ ಒತ್ತಾಯಿಸಿ ಸ್ಥಳೀಯ ಶಾಸಕರಾಗಿರುವ ಸಚಿವ ಕೃಷ್ಣ ಬೈರೇಗೌಡರನ್ನು ಭೇಟಿ ಮಾಡಿದೆವು. ಆದರೆ, ಅವರು ನಮ್ಮ ಮಾತು ಕೇಳಿಸಿಕೊಳ್ಳುವುದಕ್ಕೂ ಸಿದ್ದರಿರಲಿಲ್ಲ. ನಮ್ಮನ್ನು ಕಡೆಗಣಿಸಿ, ತಮ್ಮ ಸಹಾಯಕರೊಂದಿಗೆ ಮಾತನಾಡುವಂತೆ ಹೇಳಿದರು. ಆದರೆ, ಅವರೂ ಯಾವುದೇ ಸ್ಪಂದನೆ ನೀಡಲಿಲ್ಲ. ಜಿಬಿಎ ಅಧಿಕಾರಿಗಳು, ಜಿಲ್ಲಾಧಿಕಾರಿ, ಸ್ಲಂ ಬೋರ್ಡ್‌ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದೇವೆ. ಆದರೆ, ಯಾರೊಬ್ಬರೂ ಸ್ಪಂದಿಸುತ್ತಿಲ್ಲ” ಎಂದು ಪೂಜಾ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಅಟ್ಟಿಕಾ ಗೋಲ್ಡ್’ ಕಚೇರಿಗಳ ಮೇಲೆ ದಾಳಿ: ನಗದು, ಆಭರಣ ಜಪ್ತಿ

ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....