ಬೆಂಗಳೂರು | ವಿಶೇಷ ತರಗತಿಗೆಂದು ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಕಿರುಕುಳ; ಪ್ರಾಧ್ಯಾಪಕನ ಬಂಧನ

Date:

ವಿಶೇಷ ತರಗತಿಯ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಬೆಂಗಳೂರಿನ ತಿಲಕ್ ನಗರದಲ್ಲಿರುವ ಖಾಸಗಿ ಕಾಲೇಜಿನ ಪ್ರಾಧ್ಯಾಪಕ ಸಂಜೀವ್ ಕುಮಾರ್ ಮಂಡಲ್ ಬಂಧಿತ ಆರೋಪಿ. ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್ (ಬಿಸಿಎ) ವಿದ್ಯಾರ್ಥಿಯೊಬ್ಬರಿಗೆ, ‘ನಿಮ್ಮ ಹಾಜರಾತಿ ಕಡಿಮೆ ಇದ್ದು, ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಶೇಷ ತರಗತಿ ತೆಗೆದುಕೊಳ್ಳುವ ಮೂಲಕ ಸಹಾಯ ಮಾಡುತ್ತೇನೆ. ಅದಕ್ಕಾಗಿ, ಮನೆಗೆ ಬನ್ನಿ’ ಎಂದು ಕರೆದಿದ್ದಾರೆ. ವಿಶ್ವಾಸ ಗಳಿಸುವುದಕ್ಕಾಗಿ ವಿದ್ಯಾರ್ಥಿನಿಯ ತಾಯಿಯೊಂದಿಗೂ ಫೋನ್‌ ಕರೆಯಲ್ಲಿ ಮಾತನಾಡಿದ್ದಾರೆ ಎಂದು ವರಿದಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಲೇಖನ ಓದಿದ್ದೀರಾ?: ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಹಲ್ಲೆ ಪ್ರಯತ್ನ- ಭಾರತದ ಆರದ ಗಾಯ

ಆತ ನಿಜಕ್ಕೂ ತಮ್ಮ ವ್ಯಾಸಂಗಕ್ಕೆ ಸಹಾಯ ಮಾಡುತ್ತಾರೆಂದು ನಂಬಿದ ವಿದ್ಯಾರ್ಥಿನಿ, ಸೆಪ್ಟೆಂಬರ್ 25ರಂದು ಆತನ ಮನೆಗೆ ತೆರಳಿದ್ದಾರೆ. ಆಗ, ಆತನ ಮನೆಯಲ್ಲಿ ಯಾರೂ ಇರಲಿಲ್ಲವೆಂಬುದು ಆಕೆಗೆ ಸ್ಥಳಕ್ಕೆ ತೆರಳಿದಾಗ ಗೊತ್ತಾಗಿದೆ. ಆಕೆಯಲ್ಲಿ ಆತಂಕ ಮೂಡಿದ್ದು, ಹಿಂದಿರುವ ಯೋಜನೆ ಮಾಡಿದ್ದಾರೆ. ಅ ವೇಳೆಗೆ ವಿದ್ಯಾರ್ಥಿನಿಯೊಂದಿಗೆ ಆರೋಪಿ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತ ವಿದ್ಯಾರ್ಥಿನಿ ತಿಲಕ್ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, “ತಾನು ಹೇಳಿದಂತೆ ಕೇಳಿದರೆ, ಹೆಚ್ಚಿನ ಅಂಕಗಳು ಮತ್ತು ಹಾಜರಾತಿ ನೀಡುವುದಾಗಿ ಆರೋಪಿ ಪ್ರಾಧ್ಯಾಪಕ ತಮಗೆ ಆಮಿಷವೊಡ್ಡಿದ್ದಾರೆ. ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪ್ರಾಧ್ಯಾಪಕನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...