ಬೆಂಗಳೂರು | ‘ಕಾವೇರಿ 2.0’ ದುರುಪಯೋಗ; ಐವರು ಸಬ್-ರಿಜಿಸ್ಟ್ರಾರ್‌ಗಳ ಅಮಾನತು

Date:

ಕಡ್ಡಾಯ ಇ-ಖಾತಾ ಪರಿಶೀಲನಾ ಮಾನದಂಡಗಳನ್ನು ಉಲ್ಲಂಘಿಸಿ ಆಸ್ತಿಗಳನ್ನು ನೋಂದಾಯಿಸಲು ‘ಕಾವೇರಿ 2.0’ ಸಾಫ್ಟ್‌ವೇರ್‌ಅನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಐವರು ಸಬ್-ರಿಜಿಸ್ಟ್ರಾರ್‌ಗಳನ್ನು ಅಮಾನತುಗೊಳಿಸಿ ಅಂಚೆಚೀಟಿ ಮತ್ತು ನೋಂದಣಿ ಇಲಾಖೆ ಆದೇಶಿಸಿದೆ.

- Advertisement -

ಈ ಐವರು ಸಬ್‌-ರಿಜಿಸ್ಟ್ರಾರ್‌ಗಳು ಆಸ್ತಿಗಳ ನೋಂದಣಿಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಗಳ ಕುರಿತು ನಡೆಸಲಾದ ಪ್ರಾಥಮಿಕ ವಿಚಾರಣೆಯಲ್ಲಿ ಅಕ್ರಮ ನಡೆದಿರುವುದು ಬಂಹಿರಂಗವಾಗಿವೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಕಾವೇರಿ 2.0ಅಲ್ಲಿ ಆಸ್ತಿ ನೋಂದಣಿ ಮಾಡುವಾಗ, ಒಂದು ವೇಳೆ ಆಸ್ತಿ ನೋಂದಣಿಗಳು ನ್ಯಾಯಾಲಯದ ಆದೇಶಗಳನ್ನು ಒಳಗೊಂಡಿದ್ದರೆ, ಅಂತಹ ಆಸ್ತಿಗಳಿಗೆ ‘ನ್ಯಾಯಾಲಯ ಆದೇಶ ಆಧಾರಿತ ನೋಂದಣಿ’ ಆಯ್ಕೆ ಅಡಿಯಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಕೆಲವು ವಿನಾಯಿತಿ ನೀಡಲಾಗುತ್ತದೆ. ಆದರೆ, ಸರ್ಜಾಪುರ ಸಬ್‌-ರಿಜಿಸ್ಟ್ರಾರ್‌ ಕಚೇರಿಯಲ್ಲಿ ನ್ಯಾಯಾಲಯದ ಯಾವುದೇ ಆದೇಶವನ್ನು ಹೊಂದಿರದ ಆಸ್ತಿಗಳಿಗೂ ಈ ವಿನಾಯಿತಿ ಅಡಿಯಲ್ಲಿ ಮಾರಾಟ ಪತ್ರಗಳನ್ನು ನೋಂದಾಯಿಸಲಾಗಿದೆ. ವಿನಾಯಿತಿ ಆಯ್ಕೆಯನ್ನು ದುರುಯೋಗ ಮಾಡಿಕೊಳ್ಳಲಾಗಿದೆ” ಎಂದು ನೋಂದಣಿ ಮಹಾನಿರ್ದೇಶಕರು (ಐಜಿಆರ್) ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ‘ಬೌದ್ಧಿಕ ದಿಗ್ಗಜರಲ್ಲ, ಅಸಭ್ಯ ಜನಪ್ರಿಯವಾದಿ ಪ್ರಚೋದಕರು’ ಎಂಬ ಟೀಕೆಯನ್ನು RSS ಎದುರಿಸಿದ್ದು ಹೀಗೆ?!

“ನ್ಯಾಯಾಲಯದ ಆದೇಶವನ್ನು ಅನುಸರಿಸುವ ‘ನ್ಯಾಯಾಲಯ ಆದೇಶ ಆಧಾರಿತ ನೋಂದಣಿ’ ಆಯ್ಕೆಯನ್ನು ಬಳಕೆ ಮಾಡಿಕೊಂಡು ಆಸ್ತಿ ನೋಂದಣಿಗೆ ಕಡ್ಡಾಯವಾಗಿರುವ ಇ-ಖಾತಾಗಳಿಲ್ಲದೆಯೇ ಮಾರಾಟ ಪತ್ರಗಳನ್ನು ನೋಂದಾಯಿಸಲು ಅನುವು ಮಾಡಿಕೊಡಲಾಗಿದೆ. ಇದು ಗಂಭೀರ ಅಕ್ರಮವಾಗಿದೆ” ಎಂದು ಇಲಾಖೆ ತಿಳಿಸಿದೆ.

ವಿಚಾರಣೆಯ ನಂತರ, ಸರ್ಜಾಪುರ ಸಬ್-ರಿಜಿಸ್ಟ್ರಾರ್ ರವಿ ಸಂಕನ ಗೌಡ ಅವರನ್ನು ತಕ್ಷಣದ ಅಮಾನತುಗೊಳಿಸಲಾಗಿದೆ. ಅಂತಯೇ, ಇದೇ ರೀತಿಯ ಅಕ್ರಮಗಳು ಮತ್ತು ನಿಯಮ ಉಲ್ಲಂಘಟನೆಗಳು ಬಾಣಸವಾಡಿ, ವರ್ತೂರು ಹಾಗೂ ಹಲಸೂರು ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿಯೂ ಕಂಡುಬಂದಿವೆ. ಅಲ್ಲಿ ಮಾರಾಟ ಪತ್ರಗಳನ್ನು ನೋಂದಾಯಿಸುವುದಕ್ಕೂ ಮೊದಲು ಪಾಲಿಸಬೇಕಾದ ಇ-ಸ್ವಥು ಸಾಫ್ಟ್‌ವೇರ್‌ನಿಂದ ಇ-ಖಾತಾ ವಿವರಗಳನ್ನು ಲಗತ್ತಿಸುವ ಪ್ರಕ್ರಿಯೆಯನ್ನು ನಿರ್ಲಕ್ಷಿಸಲಾಗಿದೆ. ಆದ್ದರಿಂದ, ಅಲ್ಲಿನ ಅಧಿಕಾರಿಗಳಾದ ಎನ್ ಸತೀಶ್ ಕುಮಾರ್, ಶ್ರೀಧರ್ (ಪ್ರಭಾರಿ ಸಬ್-ರಿಜಿಸ್ಟ್ರಾರ್), ಗಿರೀಶ್ ಚಂದ್ರ ಮತ್ತು ಆರ್ ಪ್ರಭಾವತಿ ಅರನ್ನು ಅಮಾನತು ಮಾಡಲಾಗಿದೆ ಎಂದು ಇಲಾಖೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...