ಬೆಂಗಳೂರು | ಸಿಎಂ ಕಡೆಯಿಂದ ಕಾಯಮಾತಿ ಪತ್ರ ಕೊಡಿಸುವುದಾಗಿ ಆಮಿಷ; ಪೌರ ಕಾರ್ಮಿಕರಿಂದ ತಲಾ 5 ಸಾವಿರ ಸುಲಿಗೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಯೋಗ ಕಾಯಮಾತಿ ಪತ್ರ ಕೊಡಿಸುವುದಾಗಿ ಸಫಾಯಿ ಕರ್ಮಚಾರಿ ಆಯೋಗದವರು ಬಿಬಿಎಂಪಿ ವ್ಯಾಪ್ತಿಯ ಪೌರಕಾರ್ಮಿಕರಿಂದ ತಲಾ 5,000 ರೂ. ವಸೂಲಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೈರ್ಮಲ್ಯ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ತಮ್ಮ ಉದ್ಯೋಗವನ್ನು ಕಾಯಮಾತಿಗೊಳಿಸಬೇಕೆಂದು ಆಗ್ರಹಿಸಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಉದ್ಯೋಗ ಭದ್ರತೆಗೆ ಒತ್ತಾಯಿಸುತ್ತಿದ್ದಾರೆ. ಆದರೆ, ಈವರೆಗೆ ಅವರ ಬೇಡಿಕೆಗಳು ಈಡೇರಿಲ್ಲ. ಪೌರ ಕಾರ್ಮಿಕರ ಬೇಡಿಕೆಗಳನ್ನೇ ಬಂಡವಾಳ ಮಾಡಿಕೊಂಡಿರುವ ಸಫಾಯಿ ಕರ್ಮಚಾರಿ ಆಯೋಗದ ಆಧ್ಯಕ್ಷರು ಮತ್ತು ಕೆಲ ಮೇಸ್ತ್ರಿಗಳು ಪೌರ ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್‌ನಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಂದ ಆಯೋಗದ ಅಧ್ಯಕ್ಷ ಮೈಸೂರು ನಾರಾಯಣ ಮತ್ತು ಕೆಲ ಮೇಸ್ತ್ರಿಗಳು ಹಣ ವಸೂಲಿ ಮಾಡಿದ್ದಾರೆ ಎಂದು ಪೌರಕಾರ್ಮಿಕ ಮುಖಂಡ ತ್ಯಾಗರಾಜ್ ಆರೋಪಿಸಿದ್ದಾರೆ. ಏಪ್ರಿಲ್ 3ರಂದು ಎಲ್ಲ ಪೌರ ಕಾರ್ಮಿಕರಿಗೆ ಮುಖ್ಯಮಂತ್ರಿಗಳಿಂದ ಕಾಯಮಾತಿ ಪತ್ರ ಕೊಡಿಸುತ್ತೇವೆಂದು ಭರವಸೆ ನೀಡಿ, ಹಣ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರು ಗಮನಿಸಿ, ಕ್ರಮ ಕೈಗೊಳ್ಳಬೇಕು ಎಂದು ತ್ಯಾಗರಾಜ್ ಒತ್ತಾಯಿಸಿದ್ದಾರೆ.

ಬೆಂಗಳೂರಿನಾದ್ಯಂತ ಬಿಬಿಎಂಪಿ ಅಡಿಯಲ್ಲಿ ಸಾವಿರಾರು ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರಿಂದ ತಲಾ ಐದು ಸಾವಿರದಂತೆ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಲಾಗಿದೆ. ಅಲ್ಲದೆ, ಹಣ ಕೊಟ್ಟ ಬಗ್ಗೆ ಯಾರಿಗಾದರೂ ಹೇಳಿದರೆ, ಕಾಯಮಾತಿ ಪಟ್ಟಿಯಿಂದ ಹೆಸರು ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ. ಲೋಕಾಯುಕ್ತಕ್ಕೂ ದೂರು ನೀಡುವುದಾಗಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...