ಬೆಂಗಳೂರು | ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ನ ಬ್ಯಾಗ್ ಕದ್ದ ಮಹಿಳೆ; ವಿಡಿಯೋ ವೈರಲ್

Date:

ಬಿಎಂಟಿಸಿ ಬಸ್‌ನಲ್ಲಿ ಚಲಿಸುತ್ತಿದ್ದ ವೇಳೆಯೇ ಮಹಿಳೆಯೊಬ್ಬರು ನಿರ್ವಾಹಕನ ಟಿಕೆಟ್ ಮತ್ತು ಹಣದ ಬ್ಯಾಗ್ ಕಳ್ಳತನ ಮಾಡಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಪ್ರಯಾಣಿಕ ಮಹಿಳೆಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಬಿಎಂಟಿಸಿಯ ‘ಕೆಎ-57 ಎಫ್ 6331’ ನೋಂದಣಿ ಸಂಖ್ಯೆಯ ಬಸ್ ತನ್ನ ನಿಗದಿತ ಮಾರ್ಗದಲ್ಲಿ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಪೊಲೀಸ್ ಮೂಲಗಳ ಪ್ರಕಾರ, “ಆರೋಪಿ ಮಹಿಳೆಯು ಸಾಮಾನ್ಯ ಪ್ರಯಾಣಿಕಳಂತೆ ಬಸ್‌ಗೆ ಹತ್ತಿದ್ದರು. ಬಸ್‌ನಲ್ಲಿ ಪ್ರಯಾಣಿಕರ ದಟ್ಟಣೆ ಇದ್ದಾಗ ನಿರ್ವಾಹಕರು ಎಲ್ಲರಿಗೂ ಟಿಕೆಟ್ ನೀಡುವ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ, ನಿರ್ವಾಹಕರ ಗಮನ ಬೇರೆಡೆ ಇರುವುದನ್ನು ಸೂಕ್ಷ್ಮವಾಗಿ ಗಮನಿಸಿದ ಮಹಿಳೆ, ಅವರ ಟಿಕೆಟ್ ಮತ್ತು ನಗದು ಇದ್ದ ಬ್ಯಾಗ್ ಅನ್ನು ಯಾರಿಗೂ ತಿಳಿಯದಂತೆ ಕದ್ದು ತನ್ನ ಚೀಲದೊಳಗೆ ಇಟ್ಟುಕೊಂಡಿದ್ದಾರೆ. ನಂತರ ತನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂಬಂತೆ ಅತ್ಯಂತ ಸಾಮಾನ್ಯ ಪ್ರಯಾಣಿಕಳಂತೆ ನಟಿಸುತ್ತಾ ಕುಳಿತಿದ್ದರು” ಎಂದು ತಿಳಿದುಬಂದಿದೆ.

ಸ್ವಲ್ಪ ಸಮಯದ ನಂತರ ನಿರ್ವಾಹಕರಿಗೆ ತಮ್ಮ ಟಿಕೆಟ್ ಬ್ಯಾಗ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಬ್ಯಾಗ್ ಪತ್ತೆಯಾಗದಿದ್ದರೆ ತಮಗೆ ಇಲಾಖೆಯಿಂದ ಅಮಾನತು ಶಿಕ್ಷೆಯಾಗಬಹುದು ಎಂಬ ಭೀತಿಯಿಂದ ನಿರ್ವಾಹಕರು ಕಂಗಾಲಾಗಿದ್ದಾರೆ. ತಕ್ಷಣವೇ ಬಸ್ ಅನ್ನು ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಬಸ್‌ನ ಬಾಗಿಲುಗಳನ್ನು ಮುಚ್ಚಿ, ಎಲ್ಲ ಪ್ರಯಾಣಿಕರ ಬ್ಯಾಗ್‌ಗಳನ್ನು ಪರೀಕ್ಷಿಸಲಾಗಿದೆ. ಅಷ್ಟರಲ್ಲಿ, ಮಹಿಳಾ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ಮುಂದುವರೆಸಿದ್ದಾರೆ.

ಪೊಲೀಸರು ಮತ್ತು ಬಸ್ ಸಿಬ್ಬಂದಿ ಬಸ್‌ನಲ್ಲಿದ್ದ ಪ್ರಯಾಣಿಕರ ಸಾಮಗ್ರಿಗಳನ್ನು ತಪಾಸಣೆ ನಡೆಸುತ್ತಿದ್ದಾಗ, ಆರೋಪಿ ಮಹಿಳೆ ಬಸ್‌ನಿಂದ ಇಳಿದು ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಆದರೆ, ಪೊಲೀಸರು ಆಕೆಯ ಚೀಲವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ನಿರ್ವಾಹಕರ ಟಿಕೆಟ್ ಮತ್ತು ಹಣದ ಬ್ಯಾಗ್ ಆಕೆಯ ಚೀಲದಲ್ಲೇ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ತನ್ನ ಬ್ಯಾಗ್‌ನಲ್ಲೇ ಕದ್ದ ವಸ್ತು ಸಿಕ್ಕಿಬಿದ್ದರೂ, ಆ ಮಹಿಳೆ ತನಗೆ ಏನೂ ಗೊತ್ತಿಲ್ಲ ಎಂದು ವಾದಿಸಿದ್ದಾರೆ. ತಕ್ಷಣ ಬಸ್‌ನ ಬಾಗಿಲು ತೆರೆಯುವಂತೆ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ. ಆದರೆ, ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರು ಆಕೆ ನಿರ್ವಾಹಕರ ಬ್ಯಾಗ್ ತೆಗೆದುಕೊಳ್ಳುವುದನ್ನು ಪ್ರತ್ಯಕ್ಷವಾಗಿ ನೋಡಿರುವುದಾಗಿ ಪೊಲೀಸರ ಮುಂದೆ ಸಾಕ್ಷಿ ನುಡಿದಿದ್ದಾರೆ ಎಂದು ವರದಿಯಾಗಿದೆ.

ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಕೊಂಡು ತನಿಖೆ ಆರಂಭಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ |ಕನ್ನಡ ಭಾಷೆಯ ವೈಭವ, ಏಕೀಕರಣದ ಹೆಮ್ಮೆ ಸಾರಿದ ‘ಹಚ್ಚೇವು ಕನ್ನಡದ ದೀಪ’ ಕಾರ್ಯಕ್ರಮ

ಕನ್ನಡ ಭಾಷೆ ಹಳೆಗನ್ನಡ, ನಡುಗನ್ನಡ, ಆಧುನಿಕ ಸಾಹಿತ್ಯ ಸೇರಿದಂತೆ ಶರಣರು, ದಾಸರು,...

2022ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಿರ್ದೇಶಕ ಲಿಜು ಕೃಷ್ಣ ಖುಲಾಸೆ

2022ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಚಿತ್ರರಂಗದ ನಿರ್ದೇಶಕ...

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...