ಬೆಂಗಳೂರು | ದರ್ಶನ್ ಕಸ್ಟಡಿ ಸಾವು ಪ್ರಕರಣ: ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಪೊಲೀಸರ ಅಮಾನತು

Date:

ಅಪರಾಧ ಆರೋಪ ಹೊತ್ತಿದ್ದ ಯುವಕ ದರ್ಶನ್‌ ಎಂಬಾತ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನನ್ನು ಪೊಲೀಸರೇ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಕಸ್ಟಡಿ ಸಾವು ಪ್ರಕರಣದಲ್ಲಿ ಬೆಂಗಳೂರಿನ ವಿವೇಕನಗರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಶಿವಕುಮಾರ್ ಸೇರಿದಂತೆ ನಾಲ್ವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

- Advertisement -

ಬೆಂಗಳೂರಿನ ವಿವೇಕನರದ ಸೊಣ್ಣೆನಹಳ್ಳಿ ನಿವಾಸಿಯಾಗಿರುವ ದರ್ಶನ್‌ (23) ಅವರನ್ನು ನವೆಂಬರ್ 12ರಂದು ಪೊಲೀಸರು ಅಕ್ರಮವಾಗಿ ಬಂಧಿಸಿಟ್ಟಿದ್ದರು. ಸುಮಾರು ಮೂರು ದಿನಗಳ ಕಾಲ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಕೂಡಿಹಾಕಿದ್ದರು. ಬಳಿಕ, ಆತನನ್ನು ರಿಯಾಬ್ ಸೆಂಟರ್‌ಗೆ ಸೇರಿಸಿದ್ದರು ಎಂದು ಆರೋಪಿಸಲಾಗಿದೆ. ರಿಯಾಬ್‌ ಸೆಂಟರ್‌ಗೆ ಸೇರಿದ ಕೆಲವೇ ದಿನಗಳಲ್ಲಿ ದರ್ಶನ್‌ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ದರ್ಶನ್‌ ಸಾವು ಸಾಮಾನ್ಯ ಸಾವಲ್ಲ. ಅದು ಕೊಲೆ. ಪೊಲೀಸರೇ ಆತನನ್ನು ಕೊಂದಿದ್ದಾರೆ ಎಂದು ಯುವಕನ ಪೋಷಕರು ಆರೋಪಿಸಿದ್ದಾರೆ. ವಿವೇಕನಗರ ಪೊಲೀಸ್‌ ಠಾಣೆಯ ಪೊಲೀಸರವಿರುದ್ಧ ದೂರು ನೀಡಿದ್ದಾರೆ.

“ಮೂರು ದಿನಗಳ ದರ್ಶನ್‌ನನ್ನು ಅಕ್ರಮ ಬಂಧನದಲ್ಲಿ ಇರಿಸಿಕೊಂಡಿದ್ದ ಪೊಲೀಸರು, ಆತನ ಮೇಲೆ ಲಾಠಿ, ಪೈಪ್​ನಿಂದ ಹಲ್ಲೆ ನಡೆಸಿದ್ದರು. ಈ ಹಲ್ಲೆಯನ್ನು ಮರೆಮಾಚಲು ರಿಯಾಬ್ ಸೆಂಟರ್​ಗೆ ಸೇರಿಸಿದ್ದರು. ಆದರೆ, ರಿಯಾಬ್ ಸೆಂಟರ್‌ನಲ್ಲಿಯೂ ಆತನಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಹೀಗಾಗಿ, ರಿಯಾಬ್ ಸೆಂಟರ್‌ಗೆ ಸೇರಿದ ಎಂಟೇ ದಿನಗಳಲ್ಲಿ ದರ್ಶನ್‌ ಸಾವನ್ನಪ್ಪಿದ್ದಾರೆ. ಇದೊಂದು ಕೊಲೆ” ಎಂದು ದರ್ಶನ್‌ ಪೋಷಕರು ಆರೋಪಿಸಿರುವುದಾಗಿ ‘ಟಿವಿ9 ಕನ್ನಡ’ ವರದಿ ಮಾಡಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವೇಕನಗರ ಪೊಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್, ಪವನ್ ಸೇರಿದಂತೆ ನಾಲ್ಕು ಪೊಲೀಸರು ಮತ್ತು ಯೂನಿಟಿ ರಿಯಾಬ್ ಸೆಂಟರ್ ಮಾಲೀಕರ ವಿರುದ್ಧ ಕೊಲೆ ಮತ್ತು ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಕಸ್ಟಡಿಯಲ್ ಡೆತ್‌ ಎಂದು ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಲಾಗಿದೆ.

ಇದೀಗ, ಪ್ರಕರಣಕ್ಕೆ ಸಂಬಂದಿಸಿದಂತೆ ವಿವೇಕನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್ ಸೇರಿದಂತೆ ನಾಲ್ಕು ಸಿಬ್ಬಂದಿಗಳನ್ನು ಅಮಾನತು ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...