ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

Date:

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎರಡೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಸಾವಿರಾರು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

“ಸರ್ಕಾರವು ತರಾತುರಿಯಲ್ಲಿ ಹೊರಡಿಸಿರುವ ನೇಮಕಾತಿ ಆದೇಶವನ್ನು ಹಿಂಪಡೆಯಬೇಕು. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಅಳವಡಿಕೆಗೆ ತೀರ್ಮಾನಿಸಿ, ಕೂಡಲೇ ಆದೇಶ ಹೊರಡಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ದಲಿತರ ಜನಸಂಖ್ಯೆ 18% ನಷ್ಟಿದೆ. ಹಾಗಾಗಿಯೇ ನಿವೃತ್ತ ನ್ಯಾಯಮರ್ತಿ ನಾಗಮೋಹನ್‌ದಾಸ್‌ರವರು 17%ಗೆ ಪರಿಶಿಷ್ಟ ಜಾತಿಗಳ ಮೀಸಲಾತಿ ಹೆಚ್ಚಿಸಲು ಶಿಫಾರಸ್ಸು ಮಾಡಿರುತ್ತಾರೆ ಮತ್ತು ಅದು ಜಾರಿಯಲ್ಲಿದೆ. ಈ ಸಾಮಾಜಿಕ ನ್ಯಾಯದ ನೀತಿಯನ್ನು ನ್ಯಾಯಾಂಗೀಯ ಸವಾಲುಗಳಿಂದ ರಕ್ಷಿಸಲು ರಾಜ್ಯದ 56% ಮೀಸಲಾತಿ ಸಂರಕ್ಷಣೆಗಾಗಿ ಕೇಂದ್ರ ರ‍್ಕಾರಕ್ಕೆ ಶಿಫಾರಸ್ಸು ಮಾಡಿ, ರ‍್ವ ಪಕ್ಷಗಳ ನಿಯೋಗದೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ನೇರ ನೇಮಕಾತಿ, ಬಡ್ತಿ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ 2001ರ ಹಿಂದಿನ ಬ್ಯಾಕ್‌ಲಾಗ್ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತಿದೆ. ಈ ನಿಯಮವನ್ನು 2001ರ ನಂತರದ ಬ್ಯಾಕ್‌ಲಾಗ್ ಹುದ್ದೆಗಳಿಗೂ ಮುಂದುವರೆಸಬೇಕು ಹಾಗೂ ಒಳ ಮೀಸಲಾತಿ ಜಾರಿಯಾಗಬೇಕು. ಎಸ್‌ಇಪಿ-ಟಿಎಸ್‌ಪಿ ಅನುದಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಒಳಮೀಸಲಾತಿ ಸಂಪೂರ್ಣವಾಗಿ ಜಾರಿಯಾಗಬೇಕು” ಎಂದು ಆಗ್ರಹಿಸಿದ್ದಾರೆ.

“ನೇಮಕಾತಿಗಳಲ್ಲಿ ವಿಶ್ವವಿದ್ಯಾಲಯಗಳು ಒಂದು ಘಟಕ ಎಂದು ಪರಿಗಣಿಸಬೇಕೆನ್ನುವ ಪ್ರಸ್ತಾವನೆಯನ್ನು ಕೈಬಿಡಬೇಕು. ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿ ನೀಡಲೇಬೇಕು. ಸಮಾಜ ಕಲ್ಯಾಣವನ್ನು ಸಮರ್ಪಕವಾಗಿ ನಿರ್ವಹಿಸದೇ ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿರುವ ಸಚಿವ ಎಚ್.ಸಿ. ಮಹಾದೇವಪ್ಪ ಅವರನ್ನು ಕೂಡಲೇ ಬದಲಾಯಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ವೇದಿಕೆಯಲ್ಲಿ ಮಾದರ ಚೆನ್ನಯ್ಯ ಸ್ವಾಮಿ, ಮಾರಸಂದ್ರ ಮುನಿಯಪ್ಪ, ಹನುಮೇಗೌಡ ಬೀರರಕಲ್ಲು, ಎಸ್.ಮಾರಪ್ಪ , ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ನರಸಪ್ಪ ದಂಡೋರ, ಬಿ.ಆರ್. ಭಾಸ್ಕರ್ ಪ್ರಸಾದ್, ಹರಿರಾಮ್, ಡಾ. ಪಿ.ಮರ್ತಿ, ಶಿವರಾಯ ಅಕ್ಕರಕಿ, ಕೇಶವಮೂರ್ತಿ, ಫರ್ನಾಂಡಿಸ್ ಇಪ್ಪಳಗಾಂವ್, ಕರಿಯಪ್ಪ ಗುಡಿಮನಿ, ಎಂ. ಶಕರಪ್ಪ, ಜೆ.ಬಿ. ರಾಜು, ಬಿ.ಪಿ. ಪ್ರಕಾಶ್ ಮರ್ತಿ, ರವಿಕುಮಾರ್ ಮರಡಿಪುರ, ನಾಗೇಂದ್ರ ಅರಕಲವಾಡಿ , ಕೃಷ್ಣಪ್ಪ ಕನಕೇನಹಳ್ಳಿ, ವೈ.ಸಿ. ಕಾಂಬ್ಳೆ , ಪಾವಗಡ ಶ್ರೀರಾಮ್, ಆರ್. ಮುನಿಯಪ್ಪ, ಗುರುಮರ್ತಿ ಶಿವಮೊಗ್ಗ , ಪ್ರಭುರಾಜ್ ಕೊಡ್ಲಿ ,  ವೇಣುಗೋಪಾಲ್ ಮೌರ್ಯ,   ಚಂದ್ರು ತರಹುಣಿಸೆ, ಹನುಮೇಶ್ ಗುಂಡೂರು, ಕೆ.ಬಿ. ವಾಸು, ಚಾವಡಿ ಲೋಕೇಶ್, ಪ್ರೇಮ ಕಲ್ಕೇರಿ, ಉಮಾದೇವಿ, ಸುಧಾರಾಣಿ, ಸುಬ್ಬಣ್ಣ ಹೊಸಕೋಟೆ, ಸುಬ್ಬರಾಯುಡು , ತ್ಯಾಗರಾಜು, ಎಂ.ಸಿ. ಶ್ರೀನಿವಾಸ್, ರಮೇಶ್ ಚಕ್ರವರ್ತಿ, ವೈ.ಕೆ. ಬಾಲಕೃಷ್ಣ ಇದ್ದರು. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ, ಬರ ಕುರಿತು ಗಂಭೀರ ಚರ್ಚೆ, ಪರಿಷತ್ತಿನಲ್ಲಿ ಗದ್ದಲ

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರ ಇತ್ತೀಚೆಗೆ...

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...