ಕಾಮುಕನೊಬ್ಬ ಮೂಕ ಪ್ರಾಣಿಯ ಮೇಲೆ ಅತ್ಯಾಚಾರ ಎಸಗಿ, ಗಾಯಗೊಳಿಸಿ ವಿಕೃತಿ ಮರೆದಿರುವ ಆಘಾತಕಾರಿ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕೃತ್ಯದ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯನಗರದ ಶಾಲಿನಿ ಗ್ರೌಂಡ್ ಬಳಿ ಬೀದಿ ನಾಯಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ನಾಯಿಯ ಖಾಸಗಿ ಅಂಗವನ್ನು ಕೊಯ್ಡು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಕೃತ್ಯದಲ್ಲಿ ಇಬ್ಬರು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೃತ್ಯವನ್ನು ಗಮನಿಸಿದ ಸಾರ್ವಜನಿಕರು ಓರ್ವನನ್ನು ಹಿಡಿದಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ವಿದ್ಯಾ ಎಂಬ ಯುವತಿ ದಿನನಿತ್ಯ ಬೀದಿ ನಾಯಿಗಳಿಗೆ ಊಟ ಹಾಕುತ್ತಾರೆ. ಶುಕ್ರವಾರ ರಾತ್ರಿಯೂ ಊಟ ಹಾಕಲು ಬಂದಾಗ, ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವುದನ್ನು ಕಂಡು ಸ್ಥಳೀಯರನ್ನು ಕರೆದಿದ್ದಾರೆ. ಸ್ಥಳಕ್ಕೆ ಬಂದ ಸಾರ್ವಜನಿಕರು ಕಾಮುಕನಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ಗಾಯಗೊಂಡಿದ್ದ ನಾಯಿಯನ್ನು ಪ್ರಾಣಿ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.