ಬೆಂಗಳೂರು | ಫ್ಲೆಕ್ಸ್‌, ಬ್ಯಾನರ್ ಹಾವಳಿ : ಬಿಬಿಎಂಪಿ ನಡೆಗೆ ಹೈಕೋರ್ಟ್‌ ತರಾಟೆ

Date:

  • ಬಿಬಿಎಂಪಿಯ ಎಂಟು ವಲಯಗಳಲ್ಲಿ ಒಟ್ಟು 9,750 ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌
  • ನಗರದ ಸೌಂದರ್ಯ ಹಾಳು ಮಾಡಿ ಬ್ಯಾನರ್ ಹಾಕಿದವರಿಂದ ದಂಡ ವಸೂಲಿ ಮಾಡಿ

ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌, ಹೋರ್ಡಿಂಗ್‌ಗಳನ್ನು ಹಾಕಿ ನಗರದ ಸೌಂದರ್ಯ ಹಾಳು ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ನಿರ್ಲಕ್ಷ್ಯ ವಹಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಮ ಆಘಾತಕಾರಿ ಮತ್ತು ನಾಮಕಾವಾಸ್ತೆ ಎಂದು ಹೈಕೋರ್ಟ್‌ ಕಿಡಿಕಾರಿದೆ.

ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್‌ ಹಾವಳಿ ಕುರಿತಂತೆ ನಗರದ ಮಾಯ್ಗೆಗೌಡ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಲೆ ಹಾಗೂ ನ್ಯಾ. ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ಅರ್ಜಿ ವಿಚಾರಣೆ ನಡೆಸಿತು.

ಈ ವೇಳೆ, ಬಿಬಿಎಂಪಿ, “2023ರ ಜನವರಿಯಿಂದ ಇಲ್ಲಿಯವರೆಗೆ ಬಿಬಿಎಂಪಿಯ ಎಂಟು ವಲಯಗಳಲ್ಲಿ ಒಟ್ಟಾರೆ 9,750 ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌, ಹೋರ್ಡಿಂಗ್ಸ್‌ ಹಾಗೂ ಇತರೆ ಪ್ರದರ್ಶನ ಫಲಕಗಳನ್ನು ಗುರುತಿಸಲಾಗಿದೆ. ಈ ಪೈಕಿ 9,040 ತೆರವುಗೊಳಿಸಲಾಗಿದೆ. 41 ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ. 80 ದೂರುಗಳನ್ನು ದಾಖಲಿಸಿಕೊಂಡು ಆ ಪೈಕಿ 53 ಎಫ್‌ಐಆರ್‌ ದಾಖಲಿಸಲಾಗಿದೆ. 2023ರ ಜನವರಿಯಿಂದ ಇಲ್ಲಿಯವರೆಗೆ ಅನಧಿಕೃತ ಫ್ಲೆಕ್ಸ್‌, ಬ್ಯಾನರ್ ಹಾಕಿರುವವರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಮಾಣಪತ್ರದಲ್ಲಿ ತಿಳಿಸಿದೆ.

ವಿಚಾರಣೆ ವೇಳೆ, “ಬಿಬಿಎಂಪಿ ಮಾ.18ರಂದು ಸಲ್ಲಿಸಿರುವ ಅನುಪಾಲನಾ ವರದಿ ಸಮಾಧಾನಕರವಾಗಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಸಮಗ್ರ ವರದಿಯನ್ನು ನಾಲ್ಕು ವಾರಗಳಲ್ಲಿ ಸಲ್ಲಿಸಬೇಕು. ನಗರದಲ್ಲಿ ದಾಖಲಾಗಿರುವ ಒಟ್ಟು 9,750 ಪ್ರಕರಣಗಳಲ್ಲಿ 53 ಎಫ್‌ಐಆರ್‌ ದಾಖಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಯಾಕಿಷ್ಟು ಹಿಂಜರಿಯುತ್ತಿದೆ” ಎಂದು ಹೈಕೋರ್ಟ್‌ ಪ್ರಶ್ನಿಸಿದೆ.

“ಬಿಬಿಎಂಪಿ ಕ್ರಮಗಳು ಕೇವಲ ನಾಮಕಾವಾಸ್ತೆಗೆ ಮಾತ್ರ ಸಿಮೀತವಾಗಿದೆ. ಆದರೆ, ಯಾವುದೂ ಕಾರ್ಯರೂಪಕ್ಕೆ ಬರುತ್ತಿಲ್ಲ. ಅನಧಿಕೃತ ಬ್ಯಾನರ್‌, ಫ್ಲೆಕ್ಸ್‌ ತೆರವುಗೊಳಿಸಲು ಸಿಬ್ಬಂದಿ ಮತ್ತು ಯಂತ್ರಗಳಿಗೆ ವೆಚ್ಚವಾಗುತ್ತದೆ. ಈ ವೆಚ್ಚವನ್ನು ನಗರದ ಸೌಂದರ್ಯ ಹಾಳು ಮಾಡಿ ಬ್ಯಾನರ್ ಹಾಕಿದವರಿಂದ ದಂಡ ವಸೂಲಿ ಮಾಡಬೇಕು. ಆದರೆ, ಬಿಬಿಎಂಪಿ ಈ ಕಾರ್ಯ ಮಾಡಿಲ್ಲ. ಹೀಗೆ ಆದರೆ, ಇದಕ್ಕೂ ಕೂಡ ಸಾರ್ವಜನಿಕರ ತೆರಿಗೆ ಹಣವೇ ವೆಚ್ಚವಾದಂತಾಗುತ್ತದೆ” ಎಂದು ಹೈಕೋರ್ಟ್‌ ಕಿಡಿಕಾರಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು ಟೌನ್‌ಹಾಲ್...

ಬೆಂಗಳೂರು | ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ನಿವಾಸಿಗಳು : ಎಫ್‌ಐಆರ್‌ ದಾಖಲು

ಬುಧವಾರ ಬೆಳಗ್ಗೆಯಿಂದ ಜ್ವರ ಹಾಗೂ ವಾಂತಿ–ಭೇದಿಯಿಂದ ಬಳಲಿದ ಮಕ್ಕಳು 140 ಜನರನ್ನು ಮತ್ತೆ...

‘ನಮ್ಮ ಮೆಟ್ರೋ’ ಯೋಜನೆಗಾಗಿ 203 ಮರ ಕಡಿಯಲು ಅನುಮತಿ ನೀಡಿದ ಹೈಕೋರ್ಟ್‌

ನಮ್ಮ ಮೆಟ್ರೋ ಕಾಮಗಾರಿ ವಿಳಂಬವಾದರೆ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆ ನಮ್ಮ ಮೆಟ್ರೋ ಸಾರ್ವಜನಿಕ...

ಬೆಂಗಳೂರು | ವಾಹನ ಕಳ್ಳರನ್ನು ಬಂಧಿಸಿದ ಪೊಲೀಸರು

10 ದ್ವಿಚಕ್ರ ವಾಹನಗಳೊಂದಿಗೆ ಜೂ. 3ರಂದು ಆರೋಪಿಗಳ ಬಂಧನ ವಾಹನಗಳನ್ನು ಕಡಿಮೆ ಬೆಲೆಗೆ...