ಬೆಂಗಳೂರು | ದಲಿತರ ಭೂಮಿ ಕಿತ್ತುಕೊಳ್ಳುತ್ತಿದೆ ಅರಣ್ಯ ಇಲಾಖೆ; ಕೋರ್ಟ್‌ ಆದೇಶಕ್ಕೂ ಕೇರ್‌ ಮಾಡದ ಸರ್ಕಾರ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕಾಡುಗೋಡಿ ಬಳಿ ಇರುವ ದಿನ್ನೂರು ಗ್ರಾಮದಲ್ಲಿ ದಲಿತರ ಭೂಮಿಯನ್ನು ಅರಣ್ಯ ಇಲಾಖೆ ಕಸಿದುಕೊಳ್ಳಲು ಮುಂದಾಗಿದೆ. ದಲಿತರ ಹೆಸರಿನಲ್ಲಿರುವ ಭೂಮಿಯನ್ನು ಅರಣ್ಯ ಭೂಮಿಯ ಅಕ್ರಮ ಒತ್ತುವರಿ ಎಂದು ಬಿಂಬಿಸಿರುವ ಸರ್ಕಾರ, ಆ ಭೂಮಿಯಲ್ಲಿ ಗಿಡಗಳನ್ನು ನೆಡಲು ಮುಂದಾಗಿದೆ ಎಂದು ಆರೋಪಿಸಲಾಗಿದೆ. ಆ ಭೂಮಿಯ ವಿಚಾರವಾಗಿ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ನೀಡಿರುವ ‘ತಡೆಯಾಜ್ಞೆ’ಯನ್ನೂ ಉಲ್ಲಂಘಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ದಲಿತರ ಭೂಮಿಯಲ್ಲಿ ಗುಂಡಿಗಳನ್ನು ತೆಗೆದು, ಸಸಿ ನೆಡಲು ಮುಂದಾಗಿದ್ದಾರೆ. ದಿನ್ನೂರಿನ ದಲಿತ ಮಹಿಳೆಯರು ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -

ದಿನ್ನೂರಿನ ದಲಿತ ಕಾಲೋನಿಯಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ 120.6 ಎಕರೆ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಆ ಭೂಮಿಯನ್ನೇ ನಂಬಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಈಗ ಅರಣ್ಯ ಇಲಾಖೆ ಏಕಾಏಕಿ ಆ ಪ್ರದೇಶಕ್ಕೆ ನುಗ್ಗಿದ್ದು, ಅದನ್ನು ಅರಣ್ಯ ಭೂಮಿಯೆಂದು ವಾದಿಸುತ್ತಿದ್ದಾರೆ. ಅರಣ್ಯ ಭೂಮಿಯನ್ನು ದಲಿತರು ಒತ್ತುವರಿ ಮಾಡಿಕೊಂಡಿದ್ದಾರೆ. ಅದನ್ನು ತೆರವುಗೊಳಿಸುತ್ತಿದ್ದೇವೆ ಎನ್ನುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಅರಣ್ಯ ಇಲಾಖೆಯ ಕಣ್ಣು ತಮ್ಮ ಭೂಮಿಯ ಮೇಲೆ ಬಿದ್ದಿದೆ ಎಂಬುದನ್ನು ಅರಿತ ದಲಿತರು, ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. ಆದಾಗ್ಯೂ, ಪೊಲೀಸರ ಸಮ್ಮುಖದಲ್ಲಿ ಅರಣ್ಯ ಅಧಿಕಾರಿಗಳು ಜೆಸಿಬಿಗಳ ಮೂಲಕ ಗುಂಡಿಗಳನ್ನು ತೆಗೆದು, ಸಸಿ ನೆಡಲು ಮುಂದಾಗಿದ್ದಾರೆ.

ಸ್ಥಳದಲ್ಲಿ ದಲಿತ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮ ಪ್ರಾಣ ಹೋದರೂ ಸರಿಯೇ – ಭೂಮಿಯನ್ನು ಮಾತ್ರ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

“ಗ್ರಾಮದ ಪುರುಷರನ್ನು ಅಧಿಕಾರಿಗಳು ಮತ್ತು ಪೊಲೀಸರು ಬಲವಂತವಾಗಿ ಖಾಲಿ ಮಾಡಿದ್ದಾರೆ. ಪುರುಷರನ್ನೆಲ್ಲಾ ಹೊರದೂಡಿ, ಮಾಧ್ಯಮಗಳ ಕಣ್ಣು ತಪ್ಪಿಸಿ ಅಧಿಕಾರಿಗಳು ಸಸಿ ನೆಡಲು ಬಂದಿದ್ದಾರೆ. ಬಡ ಜನರಾದ ನಮ್ಮ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ” ಎಂದು ಅಲ್ಲಿನ ಮಹಿಳೆಯರು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಧನಕರ್ ರಾಜೀನಾಮೆ ಹಿಂದಿದೆಯೇ ಅಧಿಕಾರದಾಹಿ BJPಯ ಬಿಹಾರ ಚುನಾವಣಾ ಲೆಕ್ಕಾಚಾರ?

“ನಮ್ಮ ಜಮೀನಿನ ಸುತ್ತಮುತ್ತ ಐಟಿ-ಬಿಟಿ ಕಂಪನಿಗಳಿವೆ. ಹೀಗಾಗಿ, ಭೂಮಿಗೆ ಭಾರೀ ಬೆಲೆ ಇದೆ. ಈ ಭೂಮಿಯನ್ನು ನಮ್ಮಿಂದ ಕಸಿದುಕೊಳ್ಳಲು ನಮ್ಮ ಭೂಮಿಯನ್ನು ಅರಣ್ಯ ಭೂಮಿಯೆಂದು ಇಲಾಖೆ ಸುಳ್ಳು ಹೇಳುತ್ತಿದೆ. ನಮ್ಮ ಭೂಮಿಯನ್ನು ಬಲವಂತವಾಗಿ ಕಿತ್ತುಕೊಳ್ಳಲು ಮುಂದಾಗಿದೆ” ಎಂದು ದೂರಿದ್ದಾರೆ.

ಪ್ರತಿಭಟನಾನಿರತ ಮಹಿಳೆಯರು ಅರಣ್ಯ ಇಲಾಖೆಗೆ ತೆಗೆದಿರುವ ಗುಂಡಿಗಳಲ್ಲಿ ಕುಳಿತು, ಮೊದಲು ನಮ್ಮನ್ನು ಹೂತು ಹಾಕಿ, ನಂತರ, ಸಸಿಗಳನ್ನು ನೆಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಭೂಮಿಯಲ್ಲಿ ಪರಿಸರವನ್ನು ಉಳಿಸಿಕೊಳ್ಳುವುದು ನಮಗೆ ಗೊತ್ತಿದೆ. ಅರಣ್ಯ ಇಲಾಖೆ ನಮ್ಮ ಭೂಮಿಯನ್ನು ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸದ ಚಾಲಕ: ರಸ್ತೆ ತಡೆದ ವಿದ್ಯಾರ್ಥಿಗಳು 

ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ನಿಡುವಣಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ವಿದ್ಯಾರ್ಥಿಗಳಿಗೆ...

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ ಕುತ್ತು, ರೈತರ ಬದುಕಿಗೆ ಹೊಡೆತ

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ

ಬೀದರ್‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ನ.21, 22ರಂದು...