ಬೆಂಗಳೂರು | ಎಲ್ಲೆಂದರಲ್ಲಿ ಕಸ ಎಸೆಯುವವರ ಮನೆ ಮುಂದೆಯೇ ‘ಕಸ’ ಸುರಿದ ಜಿಬಿಎ

Date:

ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳು, ರಸ್ತೆ ಬದಿ, ಕೆರೆಗಳ ಪಕ್ಕದಲ್ಲಿ ಸೇರಿದಂತೆ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಡೆಯಲು ಬಿಬಿಎಂಪಿ ಭಾರೀ ಕಸರತ್ತು ನಡೆಯುತ್ತಿತ್ತು. ಕಸವನ್ನು ಬಿಬಿಎಂಪಿ ಕಸದ ವಾಹನಕ್ಕೆ ನೀಡದೆ, ಎಲ್ಲೆಂದರಲ್ಲಿ ಎಸೆಯುತ್ತಿದ್ದವರಿಗೆ ದಂಡವನ್ನೂ ವಿಧಿಸುತ್ತಿತ್ತು. ಆದರೂ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಸಾಧ್ಯವಾಗಿರಲಿಲ್ಲ. ಇದೀಗ, ‘ಗ್ರೇಟರ್ ಬೆಂಗಳೂರು ಅಥಾರಿಟಿ’ (ಜಿಬಿಎ) ಹೊಸ ಕ್ರಮಕ್ಕೆ ಮುಂದಾಗಿದ್ದು, ಕಸ ಎಸೆಯುವವರನ್ನು ಗುರುತಿಸಿ, ಅವರ ಮನೆಯ ಮುಂದೆಯೇ ಕಸ ಸುರಿಯುವ ಕ್ರಮಕ್ಕೆ ಮುಂದಾಗಿದೆ.

- Advertisement -

ಸಾರ್ವಜನಿಕ ಸ್ಥಳಗಳಲ್ಲಿ ಕಸದ ಕವರ್‌ಗಳನ್ನು ಎಸೆಯುವವರ ಮನೆಗಳ ಮುಂದೆಯೇ ಕಸ ಸುರಿಯುವ ಅಭಿಯಾನವನ್ನು ಗುರುವಾರದಿಂದ ಆರಂಭಿಸಿದೆ. ಗುರುವಾರ, ಮಾರ್ಷಲ್‌ಗಳು, ಪೌರಕಾರ್ಮಿಕರು ಹಾಗೂ ಆರೋಗ್ಯ ಅಧಿಕಾರಿಗಳ ತಂಡವು ಆಟೋಗಳಲ್ಲಿ ಕಸ ಕೊಂಡೊಯ್ದು ನಗರದ ದತ್ತಾತ್ರೇಯ ನಗರ, ಎಸ್‌ಆರ್‌ ನಗರ, ಸಂಪಂಗಿರಾಮನಗರ ಸೇರಿದಂತೆ ಹಲವೆಡೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದಿದ್ದವರ ಮನೆಯ ಎದುರೇ ಸುರಿದು, 500 ರೂ. ದಂಡವನ್ನೂ ವಿಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಮನೆ ಎದುರು ಕಸ ಸುರಿಯುವ ಕ್ರಮದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಎಸ್‌ಡಬ್ಲ್ಯೂಎಂಎಲ್ ವ್ಯವಸ್ಥಾಪಕ ನಿರ್ದೇಶಕ ಕರೀ ಗೌಡ, “ಕಸ ಎಸೆಯುವವವರ ವಿರುದ್ಧ ಅಭಿಯಾನ ಪ್ರಾರಂಭವಾಗಿದೆ. ನಮ್ಮ ಮಾರ್ಷಲ್‌ಗಳು ಎಲ್ಲೆಂದರಲ್ಲಿ ಕಸ ಸುರಿಯುವವರ ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದಾರೆ. ಅವರ ಮನೆಗಳನ್ನೂ ಗುರುತಿಸಿದ್ದಾರೆ. ಕಸ ಎಸೆದವರನ್ನು ಗುರುತಿಲಾಗಿದ್ದು, ಅವರ ಮನೆಗಳ ಎದುರು ಆಟೋ ಟಿಪ್ಪರ್‌ಗಳ ಮೂಲಕ ಕಸ ಸುರಿಯಲಾಗುತ್ತಿದೆ” ಎಂದು ಹೇಳಿದ್ದಾರೆ.

ನಗರ ವಾಸಿಗಳು ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಸಿ ಕಸ, ಒಣ ಕಸಗಳಾಗಿ ವಿಂಗಡಿಸಿ ಕಸ ಸಂಗ್ರಹಣೆಗೆ ಬರುವ ಆಟೋಗಳಿಗೆ ಕೊಡಬೇಕು. ಆದರೆ, ಹಲವೆಡೆ, ಜನರು ಎಲ್ಲ ಕಸವನ್ನೂ ಒಟ್ಟಿಗೆ ಸೇರಿಸಿ ಕವರ್‌ಗಳಲ್ಲಿ ಕಟ್ಟಿ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವುದು ಮುಂದುವರೆದಿದೆ. ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಅಗತ್ಯ ಮತ್ತು ಅನಿವಾರ್ಹ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...