ಬೆಂಗಳೂರು | ಮುಸ್ಲಿಮರು ವಾಸಿಸುವ ಪ್ರದೇಶವನ್ನು ಪಾಕಿಸ್ತಾನ ಎಂದ ಹೈಕೋರ್ಟ್‌ ನ್ಯಾಯಾಧೀಶ

Date:

ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ವಾಸಿಸುತ್ತಿರುವ ಗೋರಿಪಾಳ್ಯ ಪ್ರದೇಶವನ್ನು ಉಲ್ಲೇಖಿಸಿ ಮಾತನಾಡಿದ್ದ ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಅವರು, ”ಗೋರಿಪಾಳ್ಯವು ಪಾಕಿಸ್ತಾನವಾಗಿದೆ. ಅದು ಭಾರತದಲ್ಲಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನ್ಯಾಯಾಧೀಶರೇ ಧಾರ್ಮಿಕ ದ್ವೇಷ ಬಿತ್ತುತ್ತಿದ್ದಾರೆ ಎಂಬ ಆರೋಪ ಮುನ್ನೆಲೆಗೆ ಬಂದಿದೆ.

- Advertisement -

ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ”ಮೈಸೂರು ರಸ್ತೆ ಮೇಲುಸೇತುವೆಗೆ ಹೋಗಿ ನೋಡಿ, ಪ್ರತಿ ಆಟೋರಿಕ್ಷಾದಲ್ಲೂ 10 ಮಂದಿಯಿರುತ್ತಾರೆ. ಇಲ್ಲಿ ಕಾನೂನು ಅನ್ವಯಿಸುವುದಿಲ್ಲ. ಮೈಸೂರು ಮೇಲ್ಸೇತುವೆಯು ಗೋರಿಪಾಳ್ಯದಿಂದ ಎಡಕ್ಕೆ ಮಾರುಕಟ್ಟೆಗೆ ತೆರಳುತ್ತದೆ. ಇದು ಪಾಕಿಸ್ತಾನದಲ್ಲಿದೆ, ಭಾರತದಲ್ಲಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಅಲ್ಲಿಗೆ (ಗೋರಿಪಾಳ್ಯ ಪ್ರದೇಶ) ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ನೇಮಕ ಮಾಡಿದರೂ, ಅಷ್ಟೇ” ಎಂದು ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಸಾಯಿ ಹೇಳಿದ್ದಾರೆ.

ಅವರ ಹೇಳಿಕೆ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವ, ಅದರಲ್ಲೂ ಜಾತ್ಯತೀತವಾಗಿ ವರ್ತಿಸಬೇಕಾದ ನ್ಯಾಯಾಧೀಶರು ಇಂತಹ ಹೇಳಿಕೆ ನೀಡುವುದು ಅವರ ಹುದ್ದೆ ಮೇಲಿನ ಭರವಸೆಯನ್ನು ಕಳಚುತ್ತದೆ ಎಂದಿದ್ದಾರೆ.

”ನ್ಯಾಯಾಧೀಶರು ಬಳಸಿದ ಪದಗಳು ಅತ್ಯಂತ ಅನಪೇಕ್ಷಿತವಾಗಿವೆ. ಕಾನೂನನ್ನು ಎತ್ತಿಹಿಡಿಯಬೇಕಾದವರು ಸಹ ಭಾರತೀಯ ಮುಸ್ಲಿಮರನ್ನು ಅಮಾನವೀಯರನ್ನಾಗಿ ಉಲ್ಲೇಖಿಸುವುದು ಸರಿಯಲ್ಲ. ಇದು ಭಾರತೀಯ ಮುಸ್ಲಿಮರನ್ನು ವ್ಯವಸ್ಥಿತವಾಗಿ ಅಮಾನವೀಕರಿಸುವುದರ ಭಾಗವಾಗಿದೆ” ಎಂದು ವಸೀಮ್ ಎಂಬವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ನ್ಯಾಯಾಂಗದಲ್ಲಿನ ವ್ಯಕ್ತಿಯೊಬ್ಬರು ಈ ರೀತಿ ಮಾಡಿದರೆ, ಭಾರತೀಯ ಮುಸ್ಲಿಮರೊಂದಿಗೆ ಸಾಮಾನ್ಯ ಜನರು ಮತ್ತಷ್ಟು ಅಮಾನುಷವಾಗಿ ನಡೆದುಕೊಳ್ಳುವಂತಾಗುತ್ತದೆ. ನ್ಯಾಯಾಂಗ, ಪೊಲೀಸ್, ಶೈಕ್ಷಣಿಕ ಸಂಸ್ಥೆಗಳು, ಮಾಧ್ಯಮಗಳು, ಸರಕಾರ ಹಾಗೂ ಸಮಾಜದ ದೊಡ್ಡ ಸಂಖ್ಯೆಯು ಭಾರತೀಯ ಮುಸ್ಲಿಮರನ್ನು ಅವರು ಮುಸ್ಲಿಮರು ಎಂಬ ಕಾರಣಕ್ಕೇ ಹೀಗೆ ನಡೆಸಿಕೊಳ್ಳುತ್ತಿದೆ” ಎಂದು ಅವರು ಕಿಡಿಕಾರಿದ್ದಾರೆ.

ಒಂದು ತಿಂಗಳ ಹಿಂದೆ ಕಲಾಪದ ವೇಳೆ ನ್ಯಾಯಾಧೀಶರು ಈ ಹೇಳಿಕೆ ನೀಡಿರುವುದಾಗಿ ಆಲ್ಟ್‌ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಮಾಹಿತಿ ಹಂಚಿಕೊಂಡಿದ್ದು, ಈ ವಿಡಿಯೋವನ್ನು ಈಗ ಬಿಜೆಪಿ ಸದಸ್ಯರು ಸೇರಿದಂತೆ ಬಲಪಂಥೀಯ ಖಾತೆಗಳು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಲು ಬಳಸಿಕೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.

“ನ್ಯಾಯಪೀಠದಲ್ಲಿ ಕುಳಿತಿರುವ ಆ ವ್ಯಕ್ತಿಗೆ ನಿಜಕ್ಕೂ ನ್ಯಾಯ ಪ್ರಜ್ಞೆ ಇದ್ದಿದ್ದರೆ ಗೋರಿಪಾಳ್ಯ, ಮಾರ್ಕೆಟ್ ರೋಡ್‌ಗಳಿಗೆ ಹೋದಾಗ ಅಲ್ಲಿ ‘ಪಾಕಿಸ್ತಾನ’ ಕಾಣುತ್ತಿರಲಿಲ್ಲ. ಬದಲಿಗೆ ಆ ಸ್ಲಂಗಳಲ್ಲಿ ಹೀನಾಯವಾಗಿ ಬದುಕುತ್ತಿರುವ ಮುಸ್ಲಿಮರ ಬಡತನ, ಹಸಿವು, ನಿರುದ್ಯೋಗ, ರೋಗ ರುಜಿನಗಳ ಘೋರ ಸ್ಥಿತಿ ಕಾಣುತ್ತಿತ್ತು. ಅಲ್ಲಿನ ಇಕ್ಕಟ್ಟಾದ ಗಲ್ಲಿಗಳು, ನಾಯಿ ಗೂಡಿನಂತಹ ವಸತಿಗಳು, ತೆರೆದ ಚರಂಡಿ, ಕೆಟ್ಟ ರಸ್ತೆಗಳ ದರ್ಶನ ಆಗುತ್ತಿತ್ತು. ಭಾರತದ ಮುಸ್ಲಿಮರನ್ನು ಇಲ್ಲಿನ ಪ್ರಭುತ್ವ ನಡೆಸಿಕೊಳ್ಳುತ್ತಿರುವ ರೀತಿ, ಮುಸ್ಲಿಮರ ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳ ಸ್ಥೂಲ ಚಿತ್ರಣ ದೊರಕುತ್ತಿತ್ತು. ಆದರೇನು ಮಾಡುವುದು, ಈ ‘ನ್ಯಾಯಾಧೀಶ’ನಿಗೆ ಸಾಮಾಜಿಕ ನ್ಯಾಯದ ಸಾಮಾನ್ಯ ಜ್ಞಾನವೂ ಇಲ್ಲದಂತಿದೆ. ಬಹುಷಃ ಇವರು ಸಂಘದ ಪ್ರಾಡಕ್ಟ್ ಇರಬಹುದು. ಇಂತವರು ನ್ಯಾಯ ಪೀಠದಲ್ಲಿ ಮುಂದುವರಿಯಕೂಡದು‌. ಅದು ಭಾರತದ ನ್ಯಾಯಾಂಗಕ್ಕೆ ದೊಡ್ಡ ಅವಮಾನ. ನ್ಯಾಯ ಪೀಠದಲ್ಲಿ ಕೂತು ಮುಸ್ಲಿಮರ ಕುರಿತಾಗಿ ಆತ ಆಡಿರುವ ಮಾತುಗಳು ಜನಾಂಗ ದ್ವೇಷದಿಂದ ಕೂಡಿದೆ. ಇದು ಅಕ್ಷಮ್ಯ” ಎಂದು ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...