ಬೆಂಗಳೂರು | SSLC ಪರೀಕ್ಷೆಯಲ್ಲಿ ಹಿಂದಿ ಕಡ್ಡಾಯ; ಕನ್ನಡಪರ ಸಂಘಟನೆಗಳ ವಿರೋಧ, ಮುತ್ತಿಗೆ ಎಚ್ಚರಿಕೆ

Date:

SSLC ಪರೀಕ್ಷೆಯಲ್ಲಿ ಹಿಂದಿ ವಿಷಯ ಕಡ್ಡಾಯಗೊಳಿಸಿರುವುದನ್ನು ಹಿಂದಿ ಹೇರಿಕೆ ವಿರೋಧಿ ಕರ್ನಾಟಕದ ಒಕ್ಕೂಟದ ಅಡಿಯಲ್ಲಿ ಹಲವು ಕನ್ನಡಪರ ಸಂಘಟನೆಗಳು ವಿರೋಧಿಸಿವೆ. ಜೊತೆಗೆ ಹಿಂದಿ ವಿಷಯವನ್ನು ರದ್ದುಗೊಳಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿವೆ.

- Advertisement -

ಈ ಕುರಿತು ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಗಾಂಧಿಭವನದಲ್ಲಿರುವ ಮಹಾದೇವಿ ತಾಯಿ ಕಿರು ಸಭಾಂಗಣದಲ್ಲಿ ಬುಧವಾರ ʼಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಒಕ್ಕೂಟʼ ದ ಕಡೆಯಿಂದ ಸಭೆ ನಡೆಸಿ ಚರ್ಚಿಸಲಾಗಿತ್ತು. ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಆಯೋಗದ ಸಲಹೆಗಳಲ್ಲಿ ಪ್ರಮುಖವಾದ ಸಲಹೆ ‘ಎರಡು ನುಡಿ ನೀತಿ ’ 2026-2027 ನೇ ಸಾಲಿನಿಂದ ಕಡ್ಡಾಯವಾಗಿ, ಶಾಶ್ವತವಾಗಿ ಕರ್ನಾಟಕ ಸರ್ಕಾರ ಜಾರಿ ಮಾಡಬೇಕು ಎಂಬುದು. ಆದರೆ ಕನ್ನಡ ವಿರೋಧಿಗಳ ಕುತಂತ್ರಕ್ಕೆ ಕರ್ನಾಟಕ ಸರ್ಕಾರ ಒಳಗಾಗಿ ಈ ಕಾರ್ಯಯೋಜನೆ ಇಲ್ಲಿಯವರೆಗೂ ಸಾಕಾರಗೊಳ್ಳಲಿಲ್ಲ. ಈ ವಿಷಯವಾಗಿ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಲು ಸಾಕಷ್ಟು ಬಾರಿ ಪ್ರಯತ್ನಿಸಿದ್ದರು. ಫಲಕಾರಿಯಾಗಲಿಲ್ಲದ ಕಾರಣ, ಹಿಂದಿ ಹೇರಿಕೆ ವಿರೋಧಿ ಒಕ್ಕೂಟವು ಸಭೆ ನಡೆಸಿ, ʼಹಿಂದಿ ತೊಲಗಲಿ – ಕನ್ನಡ ಬೆಳಗಲಿʼ ಬ್ಯಾನರ್ ಅಡಿಯಲ್ಲಿ ಇಂದು (ಮಾ.27) ಬೆಳಗ್ಗೆ 8:45 ಕ್ಕೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಮಧು ಬಂಗಾರಪ್ಪ ರವರ ಮನೆಗೆ ಮುತ್ತಿಗೆ ಹಾಕಲು ಕೂಡ ತೀರ್ಮಾನಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದೇ ವಿಷಯವಾಗಿ ಮಾ.11ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಗೆ ಮುತ್ತಿಗೆ ಹಾಕಿ ಮನವಿ ಸಲ್ಲಿಸಲಾಗಿತ್ತು ಮತ್ತು ಮಾ.30ರಂದು ಹಿಂದಿ ಭಾಷಾ ಪರೀಕ್ಷೆ ನಡೆಸುವ ದಿನದಂದು ಎಲ್ಲ ಕನ್ನಡಪರ, ದಲಿತಪರ, ರೈತ ಪರ, ಜನಪರ ಸಂಘಟನೆಗಳು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕೇಂದ್ರಗಳಿಗೆ ಮುತ್ತಿಗೆ ಹಾಕಲಾಗುವುದೆಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರು | ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರ ಸಾವು

ಈ ಸಭೆಯಲ್ಲಿ ಸಾರಾ ಗೋವಿಂದು, ರಾಧಾಕೃಷ್ಣ, ಪಾರ್ವತೀಶ್, ಅಭಿ ಒಕ್ಕಲಿಗ, ಶಿವರಾಮೇಗೌಡ, ಶಂಕರೇಗೌಡ, ಚೇತನ್ ಒಕ್ಕಲಿಗ ಇನ್ನು ಮುಂತಾದ ಹೋರಾಟಗಾರರು ಉಪಸ್ಥಿತಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...