ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಯಾವುದೋ ರಹಸ್ಯ ವಿಷಯವನ್ನು ಸಾರ್ವಜನಿಕವಾಗಿ ಹಂಚಿಕೊಂಡ ಕಾರಣಕ್ಕೆ ಘರ್ಷಣೆ ನಡೆದಿದೆ ಎಂದು ಹೇಳಲಾಗಿದೆ.
ಶುಕ್ರವಾರ ಸಂಜೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂದು ಹೋಳಿ ಹಬ್ಬವಾದ್ದರಿಂದ, ಹೋಳಿ ಆಚರಣೆಗೆ ಅವಕಾಶ ನೀಡಲಾಗಿತ್ತು. ಯುವಕ-ಯುವತಿಯರು ಹೋಳಿ ಎರಚಿಕೊಂಡು ಸಂಭ್ರಮಿಸುತ್ತಿದ್ದರು. ಈ ವೇಳೆ, ಎರಡು ಗುಂಪುಗಳ ಹೊಡೆದಾಡಿಕೊಂಡಿವೆ.
Should migrants be allowed in public spaces of Karnataka or confined to Sudha Murthy's 7-8 language Infosys campus and 16-20 language Biocon campus of Kiran Majumdar Shaw? #ಬೆಂಗಳೂರು_ಬೆಳೆದಿದ್ದು_ಸಾಕು #ವಲಸೆ_ನಿಲ್ಲಲಿ pic.twitter.com/CVpFvEjIud
— ಎಸ್ ಶ್ಯಾಮ್ ಪ್ರಸಾದ್ | S Shyam Prasad (@ShyamSPrasad) March 15, 2025
ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಹೇಳಲಾಗಿದೆ. ಕಾನೂನು-ಸುವ್ಯವಸ್ಥೆಗೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕೆಲವರ ನಡುವೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.