ಬೆಂಗಳೂರು | ಹಾರ್ನ್‌ ವಿಚಾರ: ವೃದ್ಧನ ಮೇಲೆ ಅಮಾನುಷವಾಗಿ ಹಲ್ಲೆಗೈದ ಆರೋಪಿ ಬಂಧನ

Date:

ರಸ್ತೆ ಬದಿಯಲ್ಲಿ ನಡೆದು ಹೋಗುತ್ತದ್ದ ವೃದ್ಧನಿಗೆ ಜಾಗ ಬಿಡುವಂತೆ ಹಾರ್ನ್ ಮಾಡಿದ ವ್ಯಕ್ತಿಯೊಬ್ಬ, ಬಳಿಕ, ವೃದ್ಧನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ನವೀನ್ ಎಂದು ಗುರುಸಲಾಗಿದ್ದು, ಅತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಹಲ್ಲೆಗೊಳಗಾದ ವೃದ್ಧನನ್ನು ನಂಜುಂಡಪ್ಪ ಎಂದು ಹೇಳಲಾಗಿದೆ. ಅವರು ಫೆಬ್ರವರಿ 22ರ ಸಂಜೆ ಆರ್‌ಆರ್ ಲೇಔಟ್‌ನಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಹಿಂದಿನಿಂದ ಕಾರಿನಲ್ಲಿ ಬಂದ ರಿಲಯನ್ಸ್ ಜಿಯೋ ಫೈಬರ್ ಉದ್ಯೋಗಿಯಾಗಿರುವ ನವೀನ್, ನಂಜುಂಡಪ್ಪ ಅವರಿಗೆ ಜಾಗ ಬಿಡುವಂತೆ ಹಾರ್ನ್‌ ಮಾಡಿದ್ದಾರೆ. ಆಗಲೇ, ರಸ್ತೆಯ ಅಂಚಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ನಂಜುಂಡಪ್ಪ ಮತ್ತೂ ಪಕ್ಕಕ್ಕೆ ಹೋಗಲು ಜಾಗವಿಲ್ಲದೆ, ತಮ್ಮಷ್ಟಕ್ಕೆ ನಡೆದುಹೋಗಿದ್ದಾರೆ. ಆದರೆ, ಪದೇ-ಪದೇ ಹಾರ್ನ್‌ ಮಾಡಿದ ನವೀನ್, ಬಳಿಕ ಗಲಾಟೆ ಆರಂಭಿಸಿದ್ದು, ವೃದ್ಧನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಘಟನೆಯ ವಿಡಿಯೋ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ; ನವೀನ್ ತನ್ನ ಕಾರನ್ನು ಹಠಾತ್ತನೆ ನಿಲ್ಲಿಸಿ, ಹೊರಗೆ ಬಂದು, ವೃದ್ಧ ವ್ಯಕ್ತಿಯನ್ನು ಢಿಕ್ಕಿ ಹೊಡೆಯಲು ಪ್ರಯತ್ನಿಸುತ್ತಿರುವುದು ಮತ್ತು ಹಲ್ಲೆಗೈದಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂಜುಂಡಪ್ಪ ಅವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಆರೋಪಿ ನವೀನ್ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 115(2), 126(2), 351, ಹಾಗೂ 352ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...