ಬೆಂಗಳೂರು | ‘ಮೋದಿಯನ್ನೇ ರಾಜೀನಾಮೆ ಕೇಳ್ತೀಯಾ’; ವಿದ್ಯಾರ್ಥಿ ಮೇಲೆ ಸಂಘಿಗಳಿಂದ ಹಲ್ಲೆ

Date:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಯ ಮೇಲೆ ಸಂಘಪರಿವಾರದ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಗಿಸಲಾಗಿದೆ. ಪರೀಕ್ಷಾ ಅಕ್ರಮಗಳ ಕಾರಣಕ್ಕಾಗಿ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಆಗ್ರಹಿಸಿದ್ದರು. ಆ ಕಾರಣಕ್ಕಾಗಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

ಬೆಂಗಳೂರಿನ ಜಾಲಹಳ್ಳಿಯಲ್ಲಿ ಹಲ್ಲೆ ಘಟನೆ ನಡೆದಿದೆ. ಜುಲೈ 28ರ ರಾತ್ರಿ ವಿದ್ಯಾರ್ಥಿ ತನ್ನ ಮನೆಗೆ ತೆರಳುತ್ತಿದ್ದಾಗ, ನಾಲ್ವರು ಅಪರಿಚಿತ ಮುಸುಕುಧಾರಿಗಳು ಆತನ ಮೇಲೆ ಹಲ್ಲೆ ನಡೆದಿದ್ದಾರೆ ಎಂದು ಹೇಳಲಾಗಿದೆ. ಜಾಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮರದ ದಿಮ್ಮಿಗಳಿಂದ ಹಲ್ಲೆ ನಡೆಸಿರುವ ಗೂಂಡಾಗಳು, “ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೇಳಲು ನಿನಗೆಷ್ಟು ಧೈರ್ಯ” ಎಂದು ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿ ಆರೋಪಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ‘ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ (ಎಐಎಸ್‌ಎ), “ತಮ್ಮ ಸಂಘಟನೆಯ ಸದಸ್ಯನ ಮೇಲೆ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಈ ಕೃತ್ಯದ ಹಿಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ)ಗೆ ಸಂಬಂಧಿಸಿದವರು ಇದ್ದಾರೆ” ಎಂದು  ಆರೋಪಿಸಿದೆ.

ವಿದ್ಯಾರ್ಥಿಯ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಗುರುತು ಪತ್ತೆ ಹಚ್ಚಿ, ಬಂಧಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...