ಬೆಂಗಳೂರು | ‘ನಿನಗಾಗಿ ನನ್ನ ಹೆಂಡತಿಯನ್ನು ಕೊಂದಿದ್ದೇನೆ’: ಪ್ರೇಯಸಿಗೆ ಸಂದೇಶ ಕಳಿಸಿದ್ದ ವೈದ್ಯ

Date:

ವೈದ್ಯೆಯಾಗಿದ್ದ ಪತ್ನಿಯನ್ನು ಕೊಂದಿದ್ದಾರೆಂಬ ಆರೋಪ ಹೊತ್ತಿರುವ ಬೆಂಗಳೂರಿನ ಸರ್ಜನ್ (ಶಸ್ತ್ರಚಿಕಿತ್ಸಕ), ಕೊಲೆ ಮಾಡಿದ ಕೆಲವೇ ನಿಮಿಷದಲ್ಲಿ ತನ್ನ ಪ್ರೇಯಸಿಗೆ ‘ನಿನಗಾಗಿ ನನ್ನ ಪತ್ನಿಯನ್ನು ಕೊಂದಿದ್ದೇನೆ’ ಎಂದು ಸಂದೇಶ ಕಳಿಸಿದ್ದರು ಎಂಬುದು ವರದಿಯಾಗಿದೆ.

- Advertisement -

ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳ ಪ್ರಕಾರ, ಆರೋಪಿ ಜನರಲ್ ಸರ್ಜನ್ ಡಾ. ಮಹೇಂದ್ರ ರೆಡ್ಡಿ ಅವರು ಡಿಜಿಟಲ್ ಪಾವತಿ ಆ್ಯಪ್‌ನಲ್ಲಿ ತನ್ನ ಪ್ರೇಯಸಿಗೆ ಸಂದೇಶ ಕಳಹಿಸಿದ್ದಾರೆ. ಅವರ ಫೋನ್‌ಅನ್ನು ವಿಧಿವಿಜ್ಞಾನ ವಿಶ್ಲೇಷಣೆಗೆ ಒಳಪಡಿಸಿದಾಗ ಈ ಸಂದೇಶ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆರೋಪಿಯ ಪ್ರೇಯಸಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಆಕೆಯ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯು, ಮೃತ ವೈದ್ಯೆಯ ಅಂಗಗಳಲ್ಲಿ ಹೆಚ್ಚಿನ ಪ್ರಮಾಣದ ಅರಿವಳಿಕೆ ಔಷಧ ಇರುವುದನ್ನು ದೃಢಪಡಿಸಿದೆ. ಇದು ಅಪರಾಧ ಕೃತ್ಯವನ್ನು ಸೂಚಿಸುತ್ತದೆ. ಅವರ ಮನೆಯಲ್ಲಿ ತಪಾಸಣೆ ನಡೆಸಿದಾಗ, ಕ್ಯಾನುಲಾ ಸೆಟ್, ಇಂಜೆಕ್ಷನ್ ಟ್ಯೂಬ್ ಹಾಗೂ ಇತರ ವೈದ್ಯಕೀಯ ವಸ್ತುಗಳು ಪತ್ತೆಯಾಗಿವೆ. ಆ ವಸ್ತುಗಳು ಸೇರಿದಂತೆ ಪ್ರಮುಖ ಪುರಾವೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹೇಂದ್ರ ತನ್ನ ಪತ್ನಿ, ಚರ್ಮರೋಗ ತಜ್ಞೆ ಡಾ. ಕೃತಿಕಾ ರೆಡ್ಡಿಗೆ ಅಧಿಕ ಪ್ರಮಾಣದಲ್ಲಿ ಅರಿವಳಿಕೆ ಔಷಧ ನೀಡಿ, ಕೊಂದಿದ್ದಾರೆ. ಘಟನೆಯು ಏಪ್ರಿಲ್ 21ರಂದು ನಡೆದಿದ್ದರೂ, ತಡವಾಗಿ ಪ್ರಕರಣ ದಾಖಲಾಗಿತ್ತು. ಕೃತಿಕಾ ಅವರ ತಂದೆ ತಮ್ಮ ಮಗಳನ್ನು ಆಕೆಯ ಪತಿ ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಅಕ್ಟೋಬರ್ 15ರಂದು ಆರೋಪಿಯನ್ನು ಬಂಧಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಹಿಂದುತ್ವವಾದಿಗಳ ಕೃತ್ಯಕ್ಕೆ ಮುಸ್ಲಿಮರ ಹೆಸರು!

“ಇಲ್ಲಿಯವರೆಗೆ ಸಂಗ್ರಹಿಸಲಾದ ಪುರಾವೆಗಳು ಡಾ. ಮಹೇಂದ್ರ ಕೃತ್ಯ ಎಸಗಿದ್ದಾರೆ ಎಂಬುದನ್ನು ಸೂಚಿಸುತ್ತವೆ. ಯಾಕೆಂದರೆ, ಆರಂಭದಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆತಂದದ್ದೂಆತನೇ. ಆದರೆ, ಆಕೆಗೆ ಏನಾಗಿದೆ ಎಂಬುದನ್ನು ಆತ ತಿಳಿಸಿರಲಿಲ್ಲ. ಬದಲಾಗಿ, ಆಕೆ ಹಲವು ಸಮಯಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು, ಚಿಕಿತ್ಸೆ ಪಡೆಯುತ್ತಿದ್ದರೆಂದು ಹೇಳಿಕೊಂಡಿದ್ದರು. ಆದರೆ, ಆಕೆಗೆ ನಿದ್ರಾಜನಕಗಳನ್ನು ಚುಚ್ಚುಮದ್ದು ನೀಡಲಾಗಿದೆ ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಇದು ದುರುದ್ದೇಶಪೂರಿತ ಕೃತ್ಯವೆಂದು ಕಾಣುತ್ತಿದೆ” ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಕಳೆದ ವರ್ಷ ಮೇ 26ರಂದು ಮಹೇಂದ್ರ ಮತ್ತು ಕೃತಿಕಾ ವಿವಾಹವಾದರು. ಅವರಿಬ್ಬರೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...