‘ಬೆಂಗಳೂರು ನಮ್ಮನ್ನು ಕೊಲ್ಲುತ್ತಿದೆ’; ನಗರ ತೊರೆದ ದಂಪತಿಗಳ ವಿಡಿಯೋ ವೈರಲ್

Date:

ಬೆಂಗಳೂರಿನಲ್ಲಿ ಎರಡು ವರ್ಷಗಳಿಂದ ವಾಸಿಸುತ್ತಿದ್ದ ಉದ್ಯಮಿ ದಂಪತಿಗಳ ಕುಟುಂಬವೊಂದು ನಗರವನ್ನು ತೊರೆದಿದೆ. ನಗರದ ಕ್ಷೀಣಿಸುತ್ತಿರುವ ವಾಯು ಗುಣಮಟ್ಟವು ತಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದಿರುವ ದಂಪತಿಗಳು ಬೆಂಗಳೂರನ್ನು ತೊರೆದಿದ್ದಾರೆ.

- Advertisement -

ಉದ್ಯಮಿ ಅಸ್ವಿನ್ ಮತ್ತು ಅಪರ್ಣ ದಂಪತಿಗಳು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್‌ ಮಾಡಿದ್ದಾರೆ. ವಿಡಿಯೋದಲ್ಲಿ; “ಬೆಂಗಳುರಿನ ಕುರಿತು ಈ ರೀತಿ ಮಾತನಾಡುತ್ತಿರುವುದಕ್ಕೆ ನೀವು ನಮ್ಮನ್ನು ದ್ವೇಷಿಸಬಹುದು. ಆದರೆ, ಬೆಂಗಳೂರು ನಮ್ಮನ್ನು ನಿಧಾನವಾಗಿ ಕೊಲ್ಲುತ್ತಿದೆ. ಇದು ಯಾರಿಗೂ ಗೊತ್ತಾಗುತ್ತಿಲ್ಲ. ಬೆಂಗಳೂರಿನ ವಾಯು ಮಾಲಿನ್ಯವು ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ” ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬೆಂಗಳೂರಿನಲ್ಲಿ ಕಾರ್ಪೋರೇಟ್ ವ್ಯವಹಾರ ನಡೆಸುತ್ತಿದ್ದ ದಂಪತಿಗಳು, “ಜನರು ಬೆಂಗಳೂರಿನಲ್ಲಿ ಶುದ್ಧ ವಾಯು ಮತ್ತು ಉತ್ತಮ ಹವಾಮಾನವಿದೆ ಎಂದು ಹೇಳುತ್ತಾರೆ. ಆದರೆ, ನಿಜವಾಗಿಯೂ ಇದೆಯೇ” ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ಪೂರಕ ಎಂಬಂತೆ, ಇದೇ ವರ್ಷದ ಫ್ರಬವರಿಯಲ್ಲಿ ನಗರದ ವಾಯು ಗುಣಮಟ್ಟ ಸೂಚ್ಯಂಕವು (AQI) 297 ಆಗಿದೆ. ಇದು ತುಂಬಾ ತುಂಬಾ ಅನಾರೋಗ್ಯಕರ ಮತ್ತು ಅಪಾಯಕಾರಿ ವಲಯವಾಗುತ್ತದೆ ಎಂದು ಸೂಚ್ಯಂಕ ಹೇಳುತ್ತದೆ.

“ನಗರದ ವಾಯು ಮಾಲಿನ್ಯದ ಬಗ್ಗೆ ನಮಗೆ ಮೊದಲೇ ತಿಳಿದಿದ್ದರೆ, ಬೆಂಗಳೂರನ್ನು ಇನ್ನೂ ಬೇಗನೆ ತೊರೆಯುತ್ತಿದ್ದೆವು. ನಾವು ಈ ನಗರದ ವಾತಾವರಣ, ಜನರು, ಆಹಾರವನ್ನು ಪ್ರೀತಿಸುತ್ತೇವೆ. ಆದರೆ, ನಾವು ಪ್ರತಿದಿನ ಯಾವ ಗಾಳಿಯನ್ನು ಉಸಿರಾಡುತ್ತಿದ್ದೇವೆ ಎಂಬುದು ತಿಳಿದಿರಲಿಲ್ಲ” ಎಂದು ದಂಪತಿಗಳು ಹೇಳುತ್ತಾರೆ.

“ನಮ್ಮ ಬೆಂಗಳೂರು ಅದ್ಭುತವಾಗಿದೆ. ವ್ಯಾಪಾರಕ್ಕೂ ಉತ್ತಮ ಸ್ಥಳ. ಆದರೆ, ನಗರ ನಮ್ಮನ್ನು ಮುಳುಗಿಸುವ ಮೊದಲೇ ನಾವು ಈ ಆಯ್ಕೆಯನ್ನು ಮಾಡಬೇಕಾಯಿತು. ಆದ್ದರಿಂದ ನಾವು ಬೆಂಗಳೂರನ್ನು ತೊರೆಯುತ್ತಿದ್ದೇವೆ” ಎಂದು ಹೇಳಿಕೊಂಡಿದ್ದಾರೆ.

ಅವರ ವಿಡಿಯೋಗೆ ಸಕಾರಾತ್ಮಕ, ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ. “ಸತ್ಯವನ್ನು ಹೇಳಿದ್ದಕ್ಕೆ ಧನ್ಯವಾದಗಳು… ನಿಮ್ಮಂತೆಯೇ ನಾವೂ ತೀವ್ರ ತಲೆ ನೋವಿನ ಸಮಸ್ಯೆಗೆ ಒಳಗಾಗಿದ್ದೆವು. ಆ ಬಳಿಕ, ನಗರವನ್ನು ತೊರೆದೆವು. ಈಗ…ನಿಜಕ್ಕೂ ಖುಷಿಯಾಗಿ, ಆರೋಗ್ಯವಾಗಿದ್ದೇನೆ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

ಮತ್ತೊಬ್ಬರು ದಂಪತಿಗಳನ್ನು ದೂಷಿಸಿದ್ದಾರೆ, “ನಿಜವಾಗಿಯೂ ಬೆಂಗಳೂರಿನ ಜನರು ನಿಮ್ಮ ನಿರ್ಧಾರದಿಂದ ತುಂಬಾ ಖುಷಿಯಾಗಿದ್ದಾರೆ. ದಯವಿಟ್ಟು ಇನ್ನಷ್ಟು ಜನರನ್ನು ಕರೆದುಕೊಂಡು ಹೋಗಿ” ಎಂದಿದ್ದಾರೆ.

“ಜನರು ನಿಮ್ಮನ್ನು ದ್ವೇಷಿಸುತ್ತಿದ್ದಾರೆ. ಆದರೆ ನೀವು ಹೇಳುತ್ತಿರುವುದು 100% ಸರಿಯಾಗಿದೆ” ಎಂದು ಇನ್ನೊfಬರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...