ಬೆಂಗಳೂರನ್ನು ಕಾಡುತ್ತಿದೆ ಕೆಮ್ಮು: ಗಾಳಿ ಗುಣಮಟ್ಟ ಕುಸಿತ; ದುಪ್ಪಟ್ಟಾದ NO2

Date:

ಬೆಂಗಳೂರು ವಾಸಿಗಳನ್ನು ಶೀತ, ಕೆಮ್ಮು ಕಾಡಲಾರಂಭಿಸಿದೆ. ಇಡೀ ನಗರದಲ್ಲಿ ಬಹುಸಂಖ್ಯಾತರು ಕೆಮ್ಮಿನಿಂದ ಬಳಲುತ್ತಿದ್ದಾರೆ. ಇದಕ್ಕೆ ಚಳಿಗಾಲದ ಶೀತ ಕಾರಣವೆಂದು ಹಲವರು ಭಾವಿಸಿದ್ದಾರೆ. ಆದರೆ, ಶೀತದ ಜೊತೆಗೆ ಬೆಂಗಳೂರಿನ ಗಾಳಿಯ ಗುಣಮಟ್ಟ ಕುಸಿದಿರುವುದು ಆರೋಗ್ಯ ಸಮಸ್ಯೆಗೆ ಪ್ರಮುಖ ಕಾರಣವೆಂದು ತಜ್ಞರು ಹೇಳುತ್ತಿದ್ದಾರೆ.

- Advertisement -

ನಗರದಲ್ಲಿ ನೈಟ್ರೋಜನ್ ಡೈಆಕ್ಸೈಡ್ (NO2) ಸಾಂದ್ರತೆಯು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಟಿಒ) ನಿಗದಿಪಡಿಸಿದ್ದ ಮಾನದಂಡಕ್ಕಿಂತ ದುಪ್ಪಟ್ಟು ಹೆಚ್ಚಾಗಿದೆ. ಅದರಲ್ಲೂ ಮೆಜೆಸ್ಟಿಕ್ ಅತೀ ಹೆಚ್ಚು ಮಾಲಿನ್ಯಕ್ಕೊಳಗಾಗಿರುವ ಪ್ರವೇಶವೆಂದು ‘ಗ್ರೀನ್‌ಪೀಸ್ ಇಂಡಿಯಾ’ದ ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಡಬ್ಲ್ಯೂಟಿಒ ಮಾನದಂಡದ ಪ್ರಕಾರ, ಪ್ರತಿ ಘನ ಮೀಟರ್‌ಗೆ ಸರಾಸರಿ 10 ಮೈಕ್ರೋಗ್ರಾಂನಷ್ಟು ನೈಟ್ರೋಜನ್ ಡೈಆಕ್ಸೈಡ್ ಇರಬೇಕು. ಇದು ವರ್ಷದ 365 ದಿನಗಳೂ ಇದೇ ಪ್ರಮಾಣದಲ್ಲಿದ್ದರೆ, ಗಾಳಿಯ ಗುಟ್ಟಮಟ್ಟ ಶುದ್ಧವಾಗಿದೆ ಎಂದು ಪರಿಗಣಿಸಲಾಗುತ್ತದೆ. ಆದರೆ, ಬೆಂಗಳೂರಿನಲ್ಲಿ 2023ರಲ್ಲಿ 365 ದಿನಗಳ ಪೈಕಿ 295 ದಿನಗಳಲ್ಲಿ ಡಬ್ಲ್ಯೂಟಿಒ ಮಾನದಂಡಗಳನ್ನು ಮೀರಿ ನೈಟ್ರೋಜನ್ ಡೈಆಕ್ಸೈಡ್‌ ಇರುವುದು ವರದಿಯಾಗಿದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ಪ್ರತಿ ಘನ ಮೀಟರ್‌ಗೆ ಬರೋಬ್ಬರಿ 20 ಮೈಕ್ರೋಗ್ರಾಂ ನೈಟ್ರೋಜನ್ ಡೈಆಕ್ಸೈಡ್ ಕಂಡುಬಂದಿದೆ. ನಗರದಲ್ಲಿ 13 ಮಾನಿಟರಿಂಗ್ ಕೇಂದ್ರಗಳ ಪೈಕಿ 8 ಕೇಂದ್ರಗಳಲ್ಲಿ ವಾರ್ಷಿಕ ಸರಾಸರಿ ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಪ್ರತಿ ಘನ ಮೀಟರ್‌ಗೆ 20 ಮೈಕ್ರೋಗ್ರಾಂಗಳಿಗಿಂತಲೂ ಹೆಚ್ಚಿದೆ. ಶಿವಪುರ ಕೇಂದ್ರದಲ್ಲಿ 15 ಮೈಕ್ರೋಗ್ರಾಂಗಳಷ್ಟು ಕಂಡುಬಂದಿದ್ದರೆ, ಉಳಿದ ನಾಲ್ಕು ಕೇಂದ್ರಗಳಲ್ಲಿ 10 ರಿಂದ 13 ಮೈಕ್ರೋಗ್ರಾಂಗಳಷ್ಟು ನೈಟ್ರೋಜನ್ ಡೈಆಕ್ಸೈಡ್ ಇರುವುದಾಗಿ ವರದಿಯಾಗಿದೆ.

ಭಾರತದಲ್ಲಿಯೇ ದೆಹಲಿ ಅತ್ಯಂತ ಕೆಟ್ಟ ಗಾಳಿಯ ಗುಣಮಟ್ಟವನ್ನು ಹೊಂದಿದೆ. ಅಲ್ಲದೆ, ಜೈಪುರ, ಪುಣೆ, ಮುಂಬೈ, ಕೋಲ್ಕತ್ತಾ, ಹೈದರಾಬಾದ್ ಹಾಗೂ ಚೆನ್ನೈನಲ್ಲಿಯೂ ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಹೆಚ್ಚಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...