ಬೆಂಗಳೂರು | ಸುಪ್ರೀಂ ಕೋರ್ಟ್‌ ಆದೇಶದ ಬಳಿಕವೂ ಭೂಸ್ವಾಧೀನ ಖಂಡನೀಯ: ಎಚ್‌ ಡಿ ದೇವೇಗೌಡ

Date:

ಹಾಲುಕೊಡುವ ಹಸುಗಳಿಗೆ ಮೇವು ಬೆಳೆದು, ಹೈನುಗಾರಿಕೆ ನಡೆಸಿ ಸುಮಾರು 6 ಲಕ್ಷ ಲೀಟರ್‌ ಹಾಲನ್ನು ಸರಬರಾಜು ಮಾಡಲಾಗುತ್ತದೆ. ಇದರ ಬಗ್ಗೆ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರು ಎರಡು ದಿನ ಸ್ಥಳ ಪರಿಶೀಲಿಸಿ, ಅತಿ ಸಣ್ಣ ರೈತರು, ಇತರೆ ರೈತರು ಬದುಕು ಕಟ್ಟಿಕೊಂಡಿರುವುದನ್ನು ಗಮನಿಸಿದ್ದು, ಯಾವುದೇ ಕಾರಣಕ್ಕೂ ಟೌನ್‌ಶಿಪ್‌ ಯೋಜನೆ ಕೈಗೊಳ್ಳಬಾರದು, ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಾರದೆಂದು ಹೇಳಿದ್ದಾರೆ. ಆದರೂ ಭೂಸ್ವಾಧೀನಕ್ಕೆ ಮುಂದಾಗಿರುವುದು ಖಂಡನೀಯ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಡದಿ ಟೌನ್‌ಶಿಪ್(GBIT) ಯೋಜನೆ ಮತ್ತು ಭೂಸ್ವಾಧೀನ ವಿರೋಧಿಸಿ ಜೆಡಿಎಸ್‌ ನೇತೃತ್ವದೊಂದಿಗೆ ರೈತರು ಹಾಗೂ ಬಿಜೆಪಿ ಪಕ್ಷಗಳಿಂದ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಳೆದ ಒಂದು ವರ್ಷಕ್ಕೂ ಅಧಿಕ ದಿನಗಳಿಂದ ಬಿಡದಿಯಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಇದನ್ನು ಸರ್ಕಾರದ ಗಮನಕ್ಕೆ ತರಲು ಕುಮಾರಸ್ವಾಮಿ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ರೈತರೂ ಸುದೀರ್ಘ ಹೋರಾಟ ನಡೆಸಿದ್ದಾರೆ. ಆದರೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಕುಮಾರಸ್ವಾಮಿಯವರು ಕೈಗೊಂಡಿದ್ದ ಯೋಜನೆಯನ್ನೇ ನಾನು ಮುಂದುವರೆಸುತ್ತಿದ್ದೇನೆ ಎನ್ನುತ್ತ ಸತ್ಯವನ್ನು ಮುಚ್ಚಿಟ್ಟು ನುಣಿಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ” ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು ಅಭಿಪ್ರಾಯಪಟ್ಟರು.

“ನಾವಿನ್ನೂ ಪ್ರಥಮ ಹಂತದಲ್ಲಿದ್ದೇವೆ. ಯಾವುದೇ ಕಠಿಣ ನಿಲುವು ಕೈಗೊಂಡಿಲ್ಲ. ಕುಮಾರಸ್ವಾಮಿಯವರು ಪತ್ರ ಬರೆದಿದ್ದಾರೆ, ರೈತರು ಕೂಡ ಜೆಡಿಎಸ್‌ ಪಕ್ಷದ ನಿಲುವೇನು ಎಂಬುದನ್ನು ತಿಳಿಸಿದ್ದಾರೆ. ಬೆಂಗಳೂರು-ಮೈಸೂರು ರಸ್ತೆ ವಿಷಯದಲ್ಲಿ ಅದರ ಜವಾಬ್ದಾರಿ ಹೊತ್ತಿರುವವರ ಕುರಿತು ಕುಮಾರಸ್ವಾಮಿಯವರು ಸುದೀರ್ಘ ಪತ್ರ ಬರೆದಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಡದಿ ಟೌನ್‌ಶಿಪ್ ಯೋಜನೆ, ಭೂಸ್ವಾಧೀನ ವಿರೋಧಿಸಿ ಜೆಡಿಎಸ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ

“ನಮ್ಮ ಕಾಂಗ್ರೆಸ್‌ ಮುಂಡರು ರಾಜ್ಯಾಂಗ ನ್ಯಾಯಾಂಗ ಮತ್ತು ಅಂಬೇಡ್ಕರ್‌ ಬಗ್ಗೆ ಮಾತನಾಡುತ್ತಾರೆ. ರಾಜ್ಯಾಂಗ, ಕಾರ್ಯಾಂಗ, ಶಾಸಕಾಂಗಗಳು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಅಂಬೇಡ್ಕರ್‌ ಸಂವಿಧಾನದಲ್ಲಿ ಹೇಳಿದ್ದಾರೆ. ಅಂತೆಯೇ ಈ ಯೋಜನೆಯ ಬಗ್ಗೆ ನ್ಯಾಯಾಂಗಗಳು ನೀಡಿರುವ ತೀರ್ಪನ್ನು ಅನುಷ್ಠಾನಕ್ಕೆ ತರಬೇಕಾದ ಜವಾಬ್ದಾರಿ ಕಾರ್ಯಾಂಗಕ್ಕಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...