ಬೆಂಗಳೂರು: ಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದ ಯುವಕನ ವಿರುದ್ಧ ಪ್ರಕರಣ ದಾಖಲು

Date:

Advertisements

ಸರಿಯಾಗಿ ಬಟ್ಟೆ ಧರಿಸು ಇಲ್ಲದಿದ್ದರೆ ಆಸಿಡ್ ಎರಚುವೆ ಎಂದು ಮಹಿಳಾ ಉದ್ಯೋಗಿಗೆ ಬೆದರಿಸಿದ ಯುವ ಉದ್ಯೋಗಿಯೋರ್ವನನ್ನು ಸಂಸ್ಥೆಯೊಂದು ಕೆಲಸದಿಂದ ವಜಾಗೊಳಿಸಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಮಹಿಳೆಯ ಪತಿ ಶಹ್ಬಾಜ್ ಅನ್ಸರ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಪೊಲೀಸರು ಹಾಗೂ ಯುವಕ ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಟ್ಯಾಗ್ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಈಗ ಯುವಕನ ವಿರುದ್ಧ ಪ್ರಕರಣವೂ ದಾಖಲಾಗಿದೆ. ನಿಕಿತ್ ಶೆಟ್ಟಿ ಎಂಬ ವ್ಯಕ್ತಿ ನನ್ನ ಪತ್ನಿಗೆ ಆಕೆ ಧರಿಸುವ ಬಟ್ಟೆಯ ಬಗ್ಗೆ ಅವಹೇಳನ ಮಾಡಿ ಆಕೆಯ ಮುಖದ ಮೇಲೆ ಆಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತನ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಾಗುವ ಅನಾಹುತ ತಪ್ಪಿಸಬೇಕು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ಸಿಎಂ, ಡಿಜಿಪಿಗೆ ಟ್ಯಾಗ್ ಮಾಡಿದ್ದರು.

ಈತ ಯಾರು ಎಂಬುದನ್ನು ನೆಟ್ಟಿಗರು ಸಾಮಾಜಿಕ ಮಾಧ್ಯಮ ಬಳಕೆದಾರರು ಪತ್ತೆ ಮಾಡಿದ್ದು, ಆತ ಇಟಿಯೋಸ್‌ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂಬುದು ತಿಳಿದು ಬಂದಿದೆ. ಕೂಡಲೇ ಈ ವಿಚಾರ ಸಂಸ್ಥೆಯ ಗಮನಕ್ಕೂ ಬಂದಿದ್ದು, ಸಂಸ್ಥೆ ನಿಖಿತ್‌ ಶೆಟ್ಟಿಯನ್ನು ಕೆಲಸದಿಂದ ವಜಾಗೊಳಿಸಿದೆ.

Advertisements

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿರುವ ಸಂಸ್ಥೆ, ನಮ್ಮ ಉದ್ಯೋಗಿಯೊಬ್ಬರು ಭಾಗಿಯಾಗಿರುವ ಗಂಭೀರ ಘಟನೆಯೊಂದರಿಂದ ನಾವು ತೀವ್ರ ಬೇಸರಕ್ಕೊಳಗಾಗಿದ್ದೇವೆ. ನಿಖಿತ್ ಶೆಟ್ಟಿ, ಮತ್ತೊಬ್ಬ ಮಹಿಳಾ ಉದ್ಯೋಗಿಯ ಅವರಿಷ್ಟದ ಬಟ್ಟೆ ಧರಿಸಿದ್ದ ಕಾರಣ ಆಸಿಡ್ ಎರಚುವುದಾಗಿ ಬೆದರಿಕೆಯೊಡ್ಡಿದ್ದು, ಇಂತಹ ವರ್ತನೆಯನ್ನು ಸಹಿಸಲಾಗದು ಹಾಗೂ ಇಟಿಯೋಸ್‌ನ ಸೇವಾ ಮೌಲ್ಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

ಉದ್ಯೋಗಿಗಳಿಗೆ ಸುರಕ್ಷಿತ ಮತ್ತು ಗೌರವಾನ್ವಿತ ವಾತಾವರಣವನ್ನು ಬೆಳೆಸಲು ಬದ್ಧವಾಗಿರುವ ನಮ್ಮ ಕಂಪನಿಯೂ ನಿಕಿತ್ ಶೆಟ್ಟಿ ವಿರುದ್ಧ ತಕ್ಷಣದ ಕ್ರಮವನ್ನು ತೆಗೆದುಕೊಂಡಿದ್ದೇವೆ. ನಿಕಿತ್ ಅವರ ಉದ್ಯೋಗವನ್ನು ಐದು ವರ್ಷಗಳ ಕಾಲದ ಅವಧಿಗೆ ವಜಾ ಮಾಡಲಾಗಿದೆ ಮತ್ತು ಆತನ ವರ್ತನೆ ಖಚಿತಪಡಿಸಿಕೊಳ್ಳಲು ನಾವು ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಎಟಿಯೋಸ್ ಡಿಜಿಟಲ್ ಹೇಳಿದೆ. ಇಟಿಯೋಸ್ ಪೂರ್ಣ ಸ್ಟಾಕ್ ಮಾರ್ಕೆಟಿಂಗ್ ಏಜೆನ್ಸಿಯಾಗಿದೆ.

ನನ್ನ ಪತ್ನಿ ಮೇಲೆ ಆಸಿಡ್ ದಾಳಿ ಮಾಡುವುದಾಗಿ ಹೇಳಿದ ವ್ಯಕ್ತಿ ತನ್ನ ಉದ್ಯೋಗವನ್ನು ಕಳೆದುಕೊಂಡಿದ್ದಾನೆ. ಕಂಪನಿಯೂ ದೂರು ನೀಡಿದ ಕೂಡಲೇ ಕ್ರಮ ಕೈಗೊಂಡು ಆತನನ್ನು ವಜಾ ಮಾಡಿದೆ. ಎಲ್ಲರಿಗೂ ಧನ್ಯವಾದಗಳು ಎಂದು ಅನ್ಸರ್ ಸಾಮಾಜಿಕ ಜಾಲತಾಣದಲ್ಲಿ ನಂತರ ಬರೆದುಕೊಂಡಿದ್ದಾರೆ. ನಿಕಿತ್ ಶೆಟ್ಟಿ ವಿರುದ್ಧ ಈಗ ಭಾರತದ ನ್ಯಾಯ ಸಂಹಿತೆಯ ಸೆಕ್ಷನ್ 124ರ ಅಡಿ ಪ್ರಕರಣ ದಾಖಲಾಗಿದೆ. 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X