ಬೆಂಗಳೂರು | ಯುವ ಆಯೋಗ ಸ್ಥಾಪನೆಗೆ ಆಗ್ರಹಿಸಿ ಸಚಿವ ಯು.ಟಿ ಖಾದರ್‌ಗೆ ಮನವಿ

Date:

2023ರ ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕ ರಾಜ್ಯ ಯುವ ಆಯೋಗವನ್ನು ತಕ್ಷಣವೇ ಸ್ಥಾಪಿಸಲು ಅಗತ್ಯ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗೆ ಶಿಫಾರಸು ಮಾಡುವಂತೆ ಆಗ್ರಹಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್‌ಗೆ ಸೊಲಿಡಾರಿಟಿ ಯೂತ್ ಮೂಮೆಂಟ್‌ ಮನವಿ ಸಲ್ಲಿಸಿತು.

- Advertisement -

ಮನವಿ ಸಲ್ಲಿಸಿದ ಸಂದರ್ಭದಲ್ಲಿ, ರಾಜ್ಯದ ಯುವಜನರ ಹಿತಾಸಕ್ತಿಗಳನ್ನು ಪ್ರತಿನಿಧಿಸುವ, ಅವರ ಸಮಸ್ಯೆಗಳಿಗೆ ನೀತಿ ಮಟ್ಟದಲ್ಲಿ ಸ್ಪಂದಿಸುವ ಹಾಗೂ ಯುವಜನರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಯುವ ಆಯೋಗದ ಸ್ಥಾಪನೆಯ ಅಗತ್ಯವನ್ನು ವಿವರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ವೇಳೆ, ರಾಜ್ಯದ ಯುವಜನರನ್ನು ಸಾಮಾಜಿಕ, ಪ್ರಜಾಸತ್ತಾತ್ಮಕ ಮತ್ತು ಅಭಿವೃದ್ಧಿಯ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ಘೋಷಿಸಿರುವ ಭಾರತ್ ಜೋಡೋ ಯುವ ಸಂಘಟನೆ ರಚನೆಯ ನಿರ್ಧಾರವನ್ನು ಸೋಲಿಡಾರಿಟಿ ಯೂತ್ ಮೂಮೆಂಟ್‌ ಸ್ವಾಗತಿಸಿತು. ಜೊತೆಗೆ, ರಾಜ್ಯ ಯುವ ಆಯೋಗವನ್ನು ಸ್ಥಾಪಿಸಿದಲ್ಲಿ ಯುವಪರ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಯುವಜನರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸಲು ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂಮೆಂಟ್‌ ಕರ್ನಾಟಕದ ರಾಜ್ಯಾಧ್ಯಕ್ಷ ಡಾ. ನಸೀಂ ಅಹ್ಮದ್, ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ತೀರ್ಥಹಳ್ಳಿ, ಅಸದುಲ್ಲಾ ಖಾನ್ ಝಕಿ, ರೆಹಾನ್ ಉಡುಪಿ ಹಾಗೂ ರಾಜ್ಯ ಮಾಧ್ಯಮ ಸಂಯೋಜಕ ಇರ್ಷಾದ್ ವೇಣೂರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...