ಮೆಟ್ರೋ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ. ಕೇಂದ್ರ ಶೇ. 50, ರಾಜ್ಯ ಶೇ. 50 ರಷ್ಟು ಖರ್ಚು ಮಾಡುವ ಒಪ್ಪಂದ ಆಗಿದೆ. ಆದರೆ ರಾಜ್ಯ ಸರ್ಕಾರವೇ ಹೆಚ್ಚು ಖರ್ಚು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಎದುರೇ ಸರ್ಕಾರದ ಸಾದನೆ ಬಗ್ಗೆ ಹೇಳಿದರು.
ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ ಹಾಗೂ ಜೆ.ಪಿ.ನಗರ 4ನೇ ಹಂತದ ಶಂಕುಸ್ಥಾಪನೆ ನೆರವೇರಿಸಿ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು.
ಐಐಐಟಿಯಲ್ಲಿ ನಮ್ಮ ಮೆಟ್ರೋದ ಕಿತ್ತಳೆ ಮಾರ್ಗಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತಮಾಡಿದ ಸಿಎಂ ಮೋದಿ ಎದುರೇ ಮನ್ನಣೆ ಪಡೆದುಕೊಂಡರು.
ಮೋದಿಯವರು ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಮೆಟ್ರೋ ಕೇಂದ್ರ ರಾಜ್ಯಗಳ ಸಹಯೋಗದೊಂದಿಗೆ ನಡೆಯುವ ಯೋಜನೆ. ಈ ಯೋಜನೆಗೆ ಕೇಂದ್ರ ಶೇ. 50, ರಾಜ್ಯ ಶೇ. 50 ಖರ್ಚು ಮಾಡುವ ಒಪ್ಪಂದ ಆಗಿದೆ. ಆದರೆ ರಾಜ್ಯ ಸರ್ಕಾರವೇ ಹೆಚ್ಚು ಕರ್ಚು ಮಾಡುತ್ತಿದೆ. ಕೇಂದ್ರ ತಾಂತ್ರಿಕ ಮತ್ತು ಹಣಕಾಸು ನೆರವು ಕೊಡುತ್ತಿದೆ. ಹಾಗಾಗಿ ಇದು ಕೇಂದ್ರ, ರಾಜ್ಯಗಳ ಜಂಟಿ ಕಾರ್ಯಕ್ರಮ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್‌ಎಸ್‌ಎಸ್ ಕಗ್ಗಂಟು?
ಈಗಾಗಲೇ 96.10 ಕಿಮೀ ಮೆಟ್ರೋ ರೈಲು ಕೆಲಸ ಮುಗಿದಿದೆ. ಇದಕ್ಕೆ ರಾಜ್ಯ 25,387 ಕೋಟಿ ರೂ. ಖರ್ಚು ಮಾಡಿದೆ. ಕೇಂದ್ರ 7,468.86 ಕೋಟಿ ಖರ್ಚು ಮಾಡಿದೆ, ಹಳದಿ ಮಾರ್ಗಕ್ಕೆ 7,160 ಕೋಟಿ ಖರ್ಚಾಗಿದೆ ಎಂದು ಹೇಳಿದ ಸಿಎಂ ನರೇಮದ್ರ ಮೋದಿ ಎದುರಲ್ಲೇ ತಮ್ಮ ಸಾಧನೆ ಎಂದು ಹೇಳಿದರು.
ಇಂದು ಲೋಕಾರ್ಪಣೆಗೊಂಡಿರುವ ರೂ.7,160 ಕೋಟಿ ವೆಚ್ಚದ ಹಳದಿ ಲೇನ್ ಬೆಂಗಳೂರಿನ ಪ್ರಮುಖ ಐಟಿ ಮತ್ತು ತಂತ್ರಜ್ಞಾನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ವೃತ್ತಿಪರರಿಗೆ, ಉದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ತ್ವರಿತ ಪ್ರಯಾಣವನ್ನು ಖಾತ್ರಿಪಡಿಸುತ್ತದೆ. ಪ್ರತಿನಿತ್ಯ ಸುಮಾರು 3.5 ಲಕ್ಷ ಪ್ರಯಾಣಿಕರು ಹಳದಿ ಲೇನ್ ಬಳಸುವ ನಿರೀಕ್ಷೆಯಿದೆ. ಇದರಿಂದ ಮುಖ್ಯವಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಮತ್ತು ಜಯದೇವ ಆಸ್ಪತ್ರೆ ಸುತ್ತಲಿನ ಭಾರೀ ಟ್ರಾಫಿಕ್ ಸಮಸ್ಯೆ ಸುಧಾರಿಸುವ ವಿಶ್ವಾಸ ಹೊಂದಿದ್ದೇವೆ ಎಂದರು.
ಇಂದು ಉದ್ಘಾಟನೆಗೊಂಡಿರುವ ಈ ಹಳದಿ ಲೇನ್ ಪ್ರಮುಖ ಬಯೋಟೆಕ್ ಮತ್ತು ಐಟಿ ಹಬ್ಗಳನ್ನು ಪರಸ್ಪರ ಜೋಡಿಸುತ್ತದೆ ಮಾತ್ರವಲ್ಲದೆ ಹಲವು ಪ್ರಮುಖ ಆಸ್ಪತ್ರೆಗಳು ಮತ್ತು ಕೈಗಾರಿಕಾ ವಲಯಗಳಿಗೂ ಸುಲಭದ ಸಂಪರ್ಕ ಸಾಧ್ಯವಾಗಿಸಿದೆ. ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ವರೆಗೆ ರಾಜ್ಯ ಸರಕಾರದ ಅನುದಾನದಲ್ಲಿ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಫ್ಲೈಓವರ್, ಬೆಂಗಳೂರಿನ ಅತ್ಯಂತ ನಿಬಿಡ ಜಂಕ್ಷನ್ಗಳಲ್ಲಿನ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂಬುವುದಕ್ಕೆ ಇದು ನಿದರ್ಶನವಾಗಿದೆ ಎಂದರು.
ಹೆಚ್ಚುತ್ತಿರುವ ನಗರೀಕರಣ ಮತ್ತು ಜನಸಂಖ್ಯೆ ನಗರದ ರಸ್ತೆಗಳ ಮೇಲೆ ವಿಪರೀತ ಒತ್ತಡವನ್ನು ಹೇರುತ್ತಿದೆ. ಪ್ರತಿದಿನ ಸುಮಾರು 9 ಲಕ್ಷ ಪ್ರಯಾಣಿಕರು ಬೆಂಗಳೂರು ಮೆಟ್ರೋ ಸೇವೆ ಬಳಸುತ್ತಿದ್ದಾರೆ. ಹಳದಿ ಲೇನ್ ಸೇರ್ಪಡೆಯಿಂದ ಪ್ರಯಾಣಿಕರ ಸಂಖ್ಯೆ 12.5 ಲಕ್ಷ ದಾಟುವ ನಿರೀಕ್ಷೆ ಹೊಂದಲಾಗಿದೆ. ಬೆಂಗಳೂರು ಮೆಟ್ರೋ ಹಾದಿಯಲ್ಲಿ ನಾವು ಸಾಗಬೇಕಾದ ದೂರ ಇನ್ನೂ ಬಹಳಷ್ಟಿದೆ. ಎರಡನೇ ಹಂತದ ಮಾರ್ಗದ ಕಾರ್ಯಾಚರಣೆಯೊಂದಿಗೆ, ನಾವು 117 ಕಿ.ಮೀ ಮೆಟ್ರೋ ಸಂಪರ್ಕ ಸಾಧಿಸಲಿದ್ದೇವೆ. ಇದರಿಂದ 15 ಲಕ್ಷ ಮಂದಿ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶವಾಗಲಿದೆ ಎಂದರು.
ನಮ್ಮ ರಾಜ್ಯವು ದೇಶದ ಐಟಿ ರಫ್ತಿನಲ್ಲಿ ಶೇ.35-40 ರಷ್ಟು ಕೊಡುಗೆ ಕೊಡುತ್ತಿದೆ. ಇದರಲ್ಲಿ ಬೆಂಗಳೂರಿನ ಪಾಲು ದೊಡ್ಡದು. ಎಲೆಕ್ಟ್ರಾನಿಕ್ಸ್ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿಯ ರಫ್ತಿನಲ್ಲಿ ಶೇ.40 ಕ್ಕೂ ಹೆಚ್ಚಿನ ಪಾಲು ರಾಜ್ಯದ್ದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು 1.35 ಲಕ್ಷ ಕೋಟಿ ರೂಗಳಿಗೂ ಅಧಿಕ ಮೊತ್ತದ ಯೋಜನೆಗಳನ್ನು ರೂಪಿಸಿ ಸಂಪನ್ಮೂಲಗಳನ್ನು ವಿನಿಯೋಗಿಸಿ ಬೆಂಗಳೂರನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಅನೇಕ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ. ದೇಶದ ಆರ್ಥಿಕತೆಗೆ ಬೃಹತ್ ಕೊಡುಗೆ ಕೊಡುತ್ತಿರುವ ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರಕಾರವೂ ಸಹ ಕೈ ಜೋಡಿಸಬೇಕೆಂದು ವಿನಂತಿಸುತ್ತೇನೆ ಎಂದರು.
2030ರ ಹೊತ್ತಿಗೆ 220 ಕಿ.ಮೀ ಉದ್ದದ ಮೆಟ್ರೋ ಮಾಡುವುದು ಕೇಂದ್ರದ ಉದ್ದೇಶ. ಇದು ಆದರೆ, ನಿತ್ಯ 30 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಬಹುದು. ಇವತ್ತು 3ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. 3ಎ ಯೋಜನೆಗೆ ಡಿಪಿಆರ್ ಸಿದ್ಧವಾಗಿದ್ದು, ಕೇಂದ್ರಕ್ಕೆ ಕಳಿಸಿದ್ದೇವೆ. ಕೇಂದ್ರ ಇದಕ್ಕೆ ಅನುಮತಿ ಕೊಟ್ಟರೆ ಶೀಘ್ರ ಕಾಮಗಾರಿ ಆರಂಭಿಸಬಹುದು. ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಒತ್ತು ಕೊಡುವಷ್ಟೇ ಕರ್ನಾಟಕಕ್ಕೂ ಒತ್ತು ಕೊಡಿ ಎಂದು ವೇದಿಕೆಯಲ್ಲೇ ಪ್ರಧಾನಿಗೆ ಸಿಎಂ ಮನವಿ ಮಾಡಿದರು.