ಬೆಂಗಳೂರು | ಭಾನುವಾರದಿಂದ ಮೆಟ್ರೋ ಟಿಕೆಟ್‌ ದರ ಹೆಚ್ಚಳ

Date:

Advertisements

ಮೆಟ್ರೋದಲ್ಲಿನ ಪ್ರಯಾಣ ದರವನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಟಿಕೆಟ್‌ ದರವನ್ನು ಹೆಚ್ಚಿಸಲಾಗಿದೆ. ಭಾನುವಾರದಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ.

ಬೆಂಗಳೂರಿನ ‘ನಮ್ಮ ಮೆಟ್ರೋ’ ಪ್ರಯಾಣ ದರ ಪರಿಶೀಲನೆಗಾಗಿ ಮೆಟ್ರೋ ಕಾಯ್ದೆ-2002ರ ಸೆಕ್ಷನ್ 34ರ ಅಡಿಯಲ್ಲಿ ಕಳೆದ ವರ್ಷ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯಿ ವರದಿ ಸಲ್ಲಿಸಿದ್ದು, ದರ ಏರಿಕೆಗೆ ಶಿಫಾರಸು ಮಾಡಿದೆ. ಅದರಂತೆ, ಟಿಕೆಟ್‌ ದರ ಹೆಚ್ಚಿಸಲಾಗುತ್ತದೆ ಎಂದು ಬಿಎಂಆರ್‌ಸಿಲ್ ಹೇಳಿದೆ.

ಪರಿಷ್ಕೃತ ದರದಂತೆ, 0-2 ಕಿ.ಮೀ ವರೆಗಿನ ಪ್ರಯಾಣ ದರವು 10 ರೂ., 2-4 ಕಿ.ಮೀ ವರೆಗಿನ ಪ್ರಯಾಣಕ್ಕೆ 20 ರೂ., 4-6 ಕಿ.ಮೀ ವರೆಗಿನ ಪ್ರಯಾಣ ದರವು 30 ರೂ., 6-8 ಕಿ.ಮೀ ವರೆಗಿನ​ ಪ್ರಯಾಣಕ್ಕೆ 40 ರೂ., 8-10 ಕಿ.ಮೀ ವರೆಗಿನ ಪ್ರಯಾಣ ದರವು 50 ರೂ., 10-15 ಕಿ.ಮೀ ವರೆಗಿನ ಪ್ರಯಾಣ 60 ರೂ., 15-20 ಕಿ.ಮೀ ವರೆಗಿನ ಪ್ರಯಾಣ ದರವು 70 ರೂ., 20-25 ಕಿ.ಮೀ ವರೆಗಿನ ಪ್ರಯಾಣಕ್ಕೆ 80 ರೂ., 25-30 ಕಿ.ಮೀ ವರೆಗಿನ ಪ್ರಯಾಣ ದರವು 90 ರೂ. ಹಾಗೂ 30 ಕಿ.ಮೀ.​​ಗಿಂತಹ ಹೆಚ್ಚಿನ ಪ್ರಯಾಣವು 90 ರೂ. ಇರಲಿದೆ.

Advertisements
image 41 4

ಜೊತೆಗೆ, ಸ್ಮಾರ್ಟ್‌ ಕಾರ್ಡ್‌ಗಳಲ್ಲಿ ಇರಬೇಕಾದ ಕನಿಷ್ಠ ಮೊತ್ತವನ್ನು 50 ರೂ. ಇಂದ 90 ರೂ.ಗೆ ಏರಿಕೆ ಮಾಡಲಾಗಿದೆ. ಸ್ಮಾರ್ಟ್‌ ಕಾರ್ಡ್‌ ಬಳಸಿ ಪ್ರಯಾಣಿಸುವವರಿಗೆ ಗರಿಷ್ಠ 5 ರೂ. ರಿಯಾಯತಿ ಇರಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X