ಬೆಂಗಳೂರು | ಹೆಣ್ಣು ಮಕ್ಕಳಿಗೆ ಅಶ್ಲೀಲ ನಿಂದನೆ: ಪ್ರಶ್ನಿಸಿದ ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಹೆಡ್‌ ಕಾನ್‌ಸ್ಟೆಬಲ್

Date:

ಹೆಣ್ಣು ಮಕ್ಕಳಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಪೇದೆಯೊಬ್ಬರಿಗೆ ದುರಹಂಕಾರಿ ಹೆಡ್‌ ಕಾನ್‌ಸ್ಟೆಬಲ್ ಒಬ್ಬ ಬೂಟುಗಾಲಿನಿಂದ ಒದ್ದು, ಹಲ್ಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಘಟನೆ ನಡೆದಿದೆ. ಠಾಣೆಯ ಮಹಿಳಾ ಕಾನ್‌ಸ್ಟೆಬಲ್ ರೇಣುಕಾ ಅವರ ಮೇಲೆ ಅದೇ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಬಿ.ಜಿ ಗೋವಿಂದರಾಜು ಎಂಬಾತ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇಬ್ಬರು ಹೆಣ್ಣು ಮಕ್ಕಳು ಮನೆ ತೊರೆದು ಬಂದಿದ್ದರು. ಅವರಿಗೆ ಅಗತ್ಯ ನೆರವು ಮತ್ತು ಊಟದ ವ್ಯವಸ್ಥೆ ಮಾಡುವಂತೆ ಠಾಣೆಯ ಎಎಸ್‌ಐ ತಿಮ್ಮೇಗೌಡ ಅವರು ರೇಣುಕಾ ಅವರಿಗೆ ಸೂಚಿಸಿದ್ದರು. ಆ ಮಕ್ಕಳಿಗೆ ಊಟ ಕೊಡುವ ವೇಳೆ, ಅವರನ್ನು ಹೆಡ್‌ ಕಾನ್‌ಸ್ಟೆಬಲ್ ಗೋವಿಂದರಾಜು ಅವಾಚ್ಯವಾಗಿ ನಿಂದಿಸಿದ್ದಾರೆ. ಗೋವಿಂದರಾಜು ವರ್ತನೆಯಿಂದ ಆತಂಕಗೊಂಡ ಹೆಣ್ಣು ಮಕ್ಕಳು ಆ ಬಗ್ಗೆ ರೇಣುಕಾ ಅವರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಕ್ಕಳಿಗೆ ನಿಂದಿಸಿದ ಕುರಿತು ಗೋವಿಂದರಾಜು ಅವರನ್ನು ರೇಣುಕಾ ಅವರು ಪ್ರಶ್ನಿಸಿದ್ದಾರೆ. ಆ ಕಾರಣಕ್ಕೆ, ರೇಣುಕಾ ಅವರ ಮೇಲೆ ಗೋವಿಂದರಾಜು ಹಲ್ಲೆ ನಡೆಸಿದ್ದಾರೆ. ಬೂಟು ಕಾಲಿನಿಂದ ಒದ್ದು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ರೇಣುಕಾ ಅವರು ತಮ್ಮದೇ ಠಾಣೆಯಲ್ಲಿ ಗೋವಿಂದರಾಜು ವಿರುದ್ಧ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿ ಗೋವಿಂದರಾಜು ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...