ಬೆಂಗಳೂರು | ರಸ್ತೆಗುಂಡಿ ಮುಚ್ಚುವಂತೆ ಪ್ರತಿಭಟನೆ; ಕೇಕ್ ಕತ್ತರಿಸಿ ವಾರ್ಷಿಕೋತ್ಸವ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಹಾವಳಿ ಹೇಳತೀರದಾಗಿದೆ. ರಸ್ತೆಗುಂಡಿಗಳಿಂದ ಹಲವಾರು ಮಂದಿ ಅಪಘಾತಕ್ಕೀಡಾಗಿದ್ದು, ಕೆಲವರು ಜೀವತೆತ್ತಿರುವ ಪ್ರಕರಣಗಳೂ ಇವೆ. ಆದರೂ, ರಸ್ತೆಗುಂಡಿಗಳ ಸಮಸ್ಯೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಕ್ತಿ ನೀಡಲು ಸಾಧ್ಯವಾಗಿಲ್ಲ. ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವಂತೆ ಕಳೆದೊಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ಅಲ್ಲಿನ ನಿವಾಸಿಗಳು ಕೇಕ್‌ ಕತ್ತರಿಸಿ ವಾರ್ಷಿಕೋತ್ಸವ ಆಚರಿಸಿದ್ದಾರೆ. ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಬೆಂಗಳೂರಿನ ಐಟಿ ಕಾರಿಡಾರ್‌ಗಳಲ್ಲಿ ವರ್ತೂರು ಪ್ರದೇಶವೂ ಒಂದು. ಸಾವಿರಾರು ಮಂದಿ ಅಲ್ಲಿ ಜೀವನ ಕಟ್ಟಿಕೊಂಡಿದ್ದಾರೆ. ಉದ್ಯೋಗಕ್ಕಾಗಿ ನೆಲೆಸಿದ್ದಾರೆ. ಆದರೆ, ಅಲ್ಲಿನ ರಸ್ತೆಗಳು ಗುಂಡಿಬಿದ್ದಿವೆ. ವಾಹನ ಸವಾರರಿಗೆ ಅಪಾಯದ ಆತಂಕ ಸೃಷ್ಟಿಸಿವೆ. ರಸ್ತೆಯನ್ನು ದುರಸ್ತಿ ಮಾಡಿಸಿ, ಆತಂಕವಿಲ್ಲದ ಸಂಚಾರ ಸಾಧ್ಯವಾಗುವಂತೆ ಮಾಡಬೇಕೆಂದು ಅಲ್ಲಿನ ನಿವಾಸಿಗಳು ಒತ್ತಾಯಿಸುತ್ತಲೇ ಇದ್ದಾರೆ. ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಸಮಸ್ಯೆ ಮಾತ್ರ ಬಗೆಹರಿದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

2023ರಲ್ಲಿ ಡಿಸೆಂಬರ್ 14ರಂದು ಉತ್ತಮ ರಸ್ತೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ವರ್ತೂರು ನಿವಾಸಿಗಳು ಗುಂಡಿಗಳನ್ನು ಮುಚ್ಚುವಂತೆ ಬಿಬಿಎಂಪಿಗೆ ಮನವಿ ಸಲ್ಲಿಸಿದ್ದರು. ಆದರೆ, ಈವರೆಗೆ ಕ್ರಮ ಕೈಗೊಳ್ಳಲಾಗಿಲ್ಲ. ಹೀಗಾಗಿ, ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ನಿವಾಸಿಗಳು ತಮ್ಮ ಹೋರಾಟದ ವಾರ್ಷಿಕೋತ್ಸವ ಆಚರಿಸಿದ್ದಾರೆ. ಬಿಬಿಎಂಪಿಯ ಅಸಮರ್ಥತೆ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

image 32

ಪ್ರತಿಭಟನೆಯಲ್ಲಿ ಮಾತನಾಡಿದ ವರ್ತೂರು ನಿವಾಸಿ ಜಗದೀಶ್ ರೆಡ್ಡಿ, “ಕಳೆದ ವಾರ ಸುರಿದ ಮಳೆಯಿಂದಾಗಿ ಇಲ್ಲಿನ ರಸ್ತೆಗುಂಡಿಗಳಲ್ಲಿ ನೀರು ತುಂಬಿಕೊಂಡಿತ್ತು. ರಸ್ತೆಗುಂಡಿ ಮುಚ್ಚುವಂತೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...