ಬೆಂಗಳೂರು | 400 ಮರಗಳ ಮಾರಣಹೋಮಕ್ಕೆ ರೈಲ್ವೆ ಸಿದ್ಧತೆ; ಪರಿಸರವಾದಿಗಳ ಆಕ್ರೋಶ

Date:

ಬೆಂಗಳೂರಿನ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ರೈಲ್ವೆ ಇಲಾಖೆ ಮುಂದಾಗಿದೆ. ಅದಕ್ಕಾಗಿ, ಅಲ್ಲಿರುವ 468 ಮರಗಳನ್ನು ಕಡಿಯಲು ನಿರ್ಧರಿಸಿದೆ. ಮರ ಕಡಿಯುವ ವಿಚಾರವಾಗಿ ಬಿಬಿಎಂಪಿ ಅರಣ್ಯ ವಿಭಾಗಕ್ಕೆ ರೈಲ್ವೆ ಪ್ರಸ್ತಾವನೆಯನ್ನೂ ಸಲ್ಲಿಸಿದೆ.

- Advertisement -

ರೈಲ್ವೆ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಆವರಣವನ್ನು ನವೀಕರಿಸಲು ಮುಂದಾಗಿದೆ. ಬಹುಮಹಡಿ ಪಾರ್ಕಿಂಗ್ ಸಂಕೀರ್ಣ, ಕಾಯುವ ಕೋಣೆ, ಟಿಕೆಟ್‌ ಕೌಂಟರ್‌ಗಳು ಸೇರಿದಂತೆ ನಾನಾ ಕಾಮಗಾರಿ ನಡೆಸಲು ಯೋಜನೆ ರೂಪಿಸಿದೆ. ಈ ಕಾಮಗಾರಿಗಳನ್ನು ನಡೆಸಲು, ರೈಲ್ವೆ ಆವರಣದಲ್ಲಿರುವ 368 ಮರಗಳನ್ನು ಕಡಿಯಬೇಕೆಂದು ಪ್ರಸ್ತಾವನೆಯಲ್ಲಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಪ್ರಸ್ತಾವನೆ ಸ್ವೀಕರಿಸಿರುವ ಬಿಬಿಎಂಪಿ ಅರಣ್ಯ ವಿಭಾಗವು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಮನವಿ ಮಾಡಿದೆ. ಮರ ಕಡಿಯುವುದಕ್ಕೆ ಹೆಚ್ಚು ಹೆಚ್ಚಾಗಿ ವಿರೋಧ ವ್ಯಕ್ತವಾದರೆ ಮತ್ತು ಆಕ್ಷೇಪಗಳಿಗೆ ರೈಲ್ವೆ ಅಧಿಕಾರಿಗಳು ಸೂಕ್ತ ಉತ್ತರ ನೀಡದಿದ್ದರೆ, ಮರ ಕಡಿಯಲು ಅನುಮತಿ ನೀಡುವುದಿಲ್ಲ ಎಂದು ಬಿಬಿಎಂಪಿ ಅರಣ್ಯ ವಿಭಾಗ ಹೇಳಿದೆ.

ಪ್ರಸ್ತಾವನೆಯ ಬಗ್ಗೆ ತಿಳಿದ ಹಲವಾರು ಪರಿಸರವಾದಿಗಳು ರೈಲ್ವೆ ಯೋಜನೆಯನ್ನು ವಿರೋಧಿಸಿದ್ದಾರೆ. ಮರ ಕಡಿಯಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.

ಈ ವರದಿ ಓದಿದ್ದೀರಾ?: ಕಾಶ್ಮೀರಿಯೊಬ್ಬಳ ನಿತ್ಯ ನಿಜಾಯಿತಿಯ ಸತ್ಯ ಸ್ವಗತ 

ಈಗಾಗಾಲೇ, ಬೆಂಗಳೂರು ಕಾಂಕ್ರೀಟ್‌ ಕಾಡಿನಂತಾಗಿದೆ. ಎಲ್ಲೆಡೆ ಬಹುಮಹಡಿ ಕಟ್ಟಡಗಳು ತಲೆ ಎತ್ತಿವೆ. ನಿರಂತರವಾಗಿ ಮರಗಳ ಮಾರಣಹೋಮ ನಡೆಯುತ್ತಿದೆ. ಪರಿಸರ ರಕ್ಷಣೆಗೆ ಆಡಳಿತ ಸಂಸ್ಥೆಗಳು ಒತ್ತುಕೊಡುತ್ತಿಲ್ಲ. ಬೆಂಗಳೂರಿನಲ್ಲಿ ವಾಯುಮಾಲಿನ್ಯ ಪ್ರಮಾಣವೂ ಹೆಚ್ಚತ್ತಿದೆ. ಹೀಗಿರುವಾಗ ಹೆಚ್ಚು ಮರಗಳನ್ನು ಬೆಳೆಸಬೇಕು. ಯಾವುದೇ ಕಾರಣಕ್ಕೂ ಮರ ಕಡಿಯಲು ಅವಕಾಶ ನೀಡಬಾರದು ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.

ಸದ್ಯಕ್ಕೆ, ಕಂಟೋನ್ಮೆಂಟ್‌ ರೈಲು ನಿಲ್ದಾಣವನ್ನು 480 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರೈಲ್ವೆ ಮುಂದಾಗಿದೆ. ಅದರಲ್ಲಿ, 1,000 ಬೈಕ್ ಮತ್ತು 2,000 ಕಾರುಗಳನ್ನು ನಿಲ್ಲಿಸುವ ಸಾಮರ್ಥ್ಯದ ಬಹುಮಹಡಿ ಪಾರ್ಕಿಂಗ್ ಸಂಕೀರ್ಣ, ಬೃಹತ್ ಕಾಯುವ ಕೋಣೆ, ಹೆಚ್ಚುವರಿ ಟಿಕೆಟ್‌ ಕೌಂಟರ್‌ಗಳು, ಸೋಲಾರ್‌ ಪವರ್‌ ಮೇಲ್ಚಾವಣಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲು ಯೋಜಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...