ಪರಸ್ಪರ ಪ್ರೀತಿಸುತ್ತಿದ್ದ ವಿವಾಹಿತ ಮಹಿಳೆ ಮತ್ತು ಯುವಕ, ತಮ್ಮ ಪ್ರೀತಿಯನ್ನು ಸಮಾಜ ಒಪ್ಪುವುದಿಲ್ಲವೆಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತರನ್ನು ಥಣಿಸಂದ್ರದ ಜಾನ್ಸನ್ ಮತ್ತು ದಿಲ್ಶಾದ್ ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳನ್ನು ಹೊಂದಿದ್ದ ದಿಲ್ಶಾದ್ ಅವರು ಜಾನ್ಸನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ಆದರೆ, ತಮ್ಮ ಪ್ರೀತಿಗೆ ಮನ್ನಣೆ ಸಿಗುವುದಿಲ್ಲವೆಂದು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಿಲ್ಶಾದ್ ಅವರು ವಿಜಯಪುರದ ಕೃಷ್ಣ ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈ ನಡುವೆ, ಸಾಮಾಜಿಕ ಜಾಲತಾಣದಲ್ಲಿ ದಿಲ್ಶಾದ್ ಮತ್ತು ಜಾನ್ಸನ್ ಪರಿಚಯವಾಗಿದ್ದರು. ಅವರ ಪರಿಚಯ ಪ್ರೀತಿಗೆ ತಿರುಗಿತ್ತು.
ಆದರೆ, ವಿವಾಹಿತ ಮಹಿಳೆಯನ್ನು ಪ್ರೀತಿಸುತ್ತಿರುವ ತನ್ನ ಪ್ರೀತಿಯನ್ನು ಸಮಾಜ ಒಪ್ಪುವುದಿಲ್ಲವೆಂದು ಜಾನ್ಸನ್ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗಿದೆ. ಹೀಗಾಗಿ, ಜಾನ್ಸನ್ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಸಾವಿನ ಸುದ್ದಿ ತಿಳಿದಿ ದಿಲ್ಶಾದ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಜಾನ್ಸಲ್ ಆತ್ಮಹತ್ಯೆ ಘಟನೆಯ ಬಗ್ಗೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಮತ್ತು ದಿಲ್ಶಾದ್ ಆತ್ಮಹತ್ಯೆ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
